ವಿಪಕ್ಷ ನಾಯಕನ ಸ್ಥಾನಕ್ಕೆ ರಾಜೀನಾಮೆ, ಬಿಜೆಪಿ ಸೇರಲು ಅಣಿಯಾದರಾ ಕಾಂಗ್ರೆಸ್‌ ನಾಯಕ?

ಮುಂಬೈ: ಲೋಕಸಭಾ ಚುನಾವಣೆಯು ಸಮೀಪಿಸುತ್ತಿರುವ ಬೆನ್ನಲ್ಲೇ ಮಹಾರಾಷ್ಟ್ರದ ಕಾಂಗ್ರೆಸ್‌ ಮುಖಂಡ ರಾಧಾಕೃಷ್ಣ ವಿಖೇ ಪಾಟಿಲ್‌ ವಿಪಕ್ಷ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕಳೆದ ತಿಂಗಷ್ಟೇ ಕಾಂಗ್ರೆಸ್‌ ಮತ್ತು ಎನ್‌ಸಿಪಿ ಲೋಕಸಭಾ ಚುನಾವಣೆಗೆ ಮೈತ್ರಿಯನ್ನು ಘೋಷಿಸುವ ವೇಳೆ ಗೈರಾಗಿದ್ದರು.

ಎನ್‌ಸಿಪಿ ನಾಯಕ ಶರದ್‌ ಪವಾರ್‌ ಮತ್ತು ವಿಖೇ ಪಾಟಿಲ್‌ ತಂದೆ ದಿ. ಬಾಲಾಸಾಹೇಬ್‌ ವಿಖೇ ಪಾಟೀಲ್‌ ನಡುವೆ ರಾಜಕೀಯ ಹಗೆತನವಿತ್ತು. ಇದೇ ಕಾರಣಕ್ಕೆ ರಾಜೀನಾಮೆ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.

ಇನ್ನು ವಿಖೇ ಪಾಟೀಲ್‌ ಅವರ ಪುತ್ರ ಸುಜಯ್‌ ಕಳೆದ ತಿಂಗಳಷ್ಟೇ ಬಿಜೆಪಿಗೆ ಸೇರ್ಪಡೆಯಾಗಿ ಅಹಮದಾನಗರ್‌ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಇದೀಗ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದರಿಂದ ಪುತ್ರನ ಹಾದಿಯನ್ನೇ ಅನುಸರಿಸಬಹುದು ಎನ್ನುವ ಮಾತುಗಳು ಕೇಳಿಬರುತ್ತಿವೆ. (ಏಜೆನ್ಸೀಸ್)

Leave a Reply

Your email address will not be published. Required fields are marked *