More

    ಸುಕೇಶ್​ ಜೈಲು ಕೋಣೆಯ ಮೇಲೆ ರೇಡ್​: ಐಷಾರಾಮಿ ವಸ್ತುಗಳು ಪತ್ತೆ, ಕಣ್ಣೀರಾಕಿದ ಮಹಾವಂಚಕ

    ನವದೆಹಲಿ: ಅಕ್ರಮ ಆಸ್ತಿ ವರ್ಗಾವಣೆ, 200 ಕೋಟಿ ರೂ. ಸುಲಿಗೆ ಪ್ರಕರಣ ಸೇರಿದಂತೆ ಹಲವಾರು ವಂಚನೆ ಪ್ರಕರಣದಲ್ಲಿ ಬಂಧನವಾಗಿರುವ ಸುಕೇಶ್​ ಚಂದ್ರಶೇಖರ್ ಜೈಲು ಕೋಣೆಯ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದು, ಬೆಲೆ ಬಾಳುವ ವಸ್ತುಗಳು ಪತ್ತೆಯಾಗಿವೆ.

    ದಾಳಿಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಜೈಲು ಅಧೀಕ್ಷಕ ದೀಪಕ್​ ಶರ್ಮಾರ ಮುಂದೆ ಸುಕೇಶ್​ ಚಂದ್ರಶೇಖರ್​ ಕಣ್ಣೀರಾಕಿರುವ ದೃಶ್ಯವಿದೆ. ಯಾವಾಗ ದಾಳಿ ನಡೆದಿದೆ ಎಂಬುದರ ಬಗ್ಗೆ ಖಚಿತ ಮಾಹಿತಿ ಇಲ್ಲ. ವಿಡಿಯೋವನ್ನು ಇಂದು (ಫೆ. 23) ವಿಡಿಯೋವನ್ನು ಜಾಲತಾಣದಲ್ಲಿ ಶೇರ್​ ಮಾಡಲಾಗಿದೆ.

    ಇದನ್ನೂ ಓದಿ: ಯುವತಿಯ ಸೀಟಿನ ಮೇಲೆ ಸಹ ಪ್ರಯಾಣಿಕನಿಂದ ಮೂತ್ರ ವಿಸರ್ಜನೆ: ಕೆಎಸ್​ಆರ್​ಟಿಸಿ ಬಸ್​ನಲ್ಲಿ ಘಟನೆ

    ಅಂದಹಾಗೆ ಸುಕೇಶ್​ ಚಂದ್ರಶೇಖರ್​ನನ್ನು ಮಾಂಡೋಲಿ ಜೈಲಿನಲ್ಲಿ ಬಂಧಿಸಿಡಲಾಗಿದೆ. ಆತ ಜೈಲು ಕೋಣೆಯ ಮೇಲೆ ನಡೆದ ದಾಳಿಯ ವೇಳೆ ಎರಡು ಜೊತೆ ಪ್ಯಾಂಟ್​, ಗುಸ್ಸಿ ಶೂಗಳು ಪತ್ತೆಯಾಗಿವೆ. ಪ್ಯಾಂಟ್​ ಮತ್ತು ಶೂಗಳ ಬೆಲೆ 1.5 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಇಷ್ಟೇ ಅಲ್ಲದೆ, ಇನ್ನಿತ ಐಷಾರಾಮಿ ವಸ್ತುಗಳ ಸಹ ಪತ್ತೆಯಾಗಿವೆ.

    ಏನಿದು ಕೇಸ್​? ಯಾರೀ ಸುಕೇಶ್ ಚಂದ್ರಶೇಖರ್?
    ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದ ಜೆ. ಜಯಲಲಿತಾ ಅವರ ಕುಟುಂಬದಿಂದ ತಾನು ಬಂದವನು ಎಂದು ಹೇಳಿಕೊಂಡಿದ್ದ ಈ ಸುಕೇಶ್‌ ಚಂದ್ರಶೇಖರ್‌ ಜಾಕ್ವೆಲಿನ್ ಜತೆ ಸ್ನೇಹ ಬೆಳೆಸಲು ಮುಂದಾಗಿದ್ದ. ತನ್ನ ಹೆಸರನ್ನು ಸುರೇಶ್‌ ಎಂದು ಹೇಳಿಕೊಂಡಿದ್ದ. ಜಾಕ್ವೆಲಿನ್‌ ಜತೆ ಸ್ನೇಹ ಬೆಳೆಸುವುದು ಸುಲಭದ ಮಾತಾಗಿರಲಿಲ್ಲ. ಆದ್ದರಿಂದ ಈತ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಕಚೇರಿ ಸಂಖ್ಯೆಯನ್ನು ನಕಲು ಮಾಡಿ ಜಾಕ್ವೆಲಿನ್‌ ಅವರನ್ನು ಸಂಪರ್ಕಿಸಿದ್ದಾನೆ. ನಂತರ ಆಕೆಯ ಸ್ನೇಹ ಬೆಳೆಸಿದ್ದಾನೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

    ಈ ಕುರಿತಂತೆ ಜಾಕ್ವೆಲಿನ್ ಅವರ ಹೇಳಿಕೆಯನ್ನೂ ಪಡೆದುಕೊಳ್ಳಲಾಗಿದೆ. ‘ನಾನು ನಿಮ್ಮ ದೊಡ್ಡ ಅಭಿಮಾನಿ, ದಕ್ಷಿಣದ ಚಲನಚಿತ್ರೋದ್ಯಮದಲ್ಲಿ ಸಿನಿಮಾ ಮಾಡಬೇಕು. ಸನ್ ಟಿವಿಯಾಗಿ ನಾನು ಅನೇಕ ಯೋಜನೆಗಳನ್ನು ಹೊಂದಿದ್ದೇನೆ. ನಾನು ಜಯಲಲಿತಾ ಕುಟುಂಬಸ್ಥ, ಚೆನ್ನೈನಲ್ಲಿ ವಾಸವಾಗಿದ್ದೇನೆ’ ಎಂದು ಈತ ಜಾಕ್ವೆಲಿನ್‌ಗೆ ಹೇಳಿದ್ದಾನೆ. ನಂತರ ಆಕೆಯ ಮೇಕಪ್ ಆರ್ಟಿಸ್ಟ್‌ಗೆ ಗೃಹ ಸಚಿವ ಅಮಿತ್ ಷಾ ಅವರ ಕಚೇರಿಯಿಂದ ಕರೆ ಬಂದಂತೆ ಕರೆ ಮಾಡಿದ್ದಾನೆ. ಆ ಮೂಲಕ ಸುಕೇಶ್ ಸರ್ಕಾರದಲ್ಲಿ ಅತ್ಯಂತ ಪ್ರಮುಖ ವ್ಯಕ್ತಿಯಾಗಿದ್ದಾನೆ ಎಂದು ಜಾಕ್ವೆಲಿನ್‌ ತಿಳಿದುಕೊಂಡು ಮೋಸ ಹೋಗಿದ್ದಾರೆ ಎಂದು ಅದರಲ್ಲಿ ಉಲ್ಲೇಖಿಸಲಾಗಿದೆ.

    ಇದನ್ನೂ ಓದಿ: ರಾಜ್ಯ ಚುನಾವಣೆಗೆ ಭದ್ರಕೋಟೆ: ಅರೆಸೇನಾ ಪಡೆಗಳಿಗೆ ಹೆಚ್ಚಿದ ಬೇಡಿಕೆ; ಗದ್ದಲ, ಹಿಂಸಾಚಾರದ ಭೀತಿ

    ಸುಕೇಶ್‌ ಚಂದ್ರಶೇಖರ್ ರೋಹಿಣಿ ಜೈಲಿನಲ್ಲಿದ್ದಾಗ, ಫೋನ್ ವಂಚನೆ ತಂತ್ರಜ್ಞಾನವನ್ನು ಬಳಸಿಕೊಂಡು ಸುಲಿಗೆ ದಂಧೆಯನ್ನು ನಡೆಸುತ್ತಿದ್ದ. ಈತ ವಂಚನೆಯ ಮಾಸ್ಟರ್‌ಮೈಂಡ್. 17 ನೇ ವಯಸ್ಸಿನಿಂದಲೂ ಅಪರಾಧ ಜಗತ್ತಿನ ಭಾಗವಾಗಿದ್ದಾರೆ. ಅವರ ವಿರುದ್ಧ ಅನೇಕ ಎಫ್‌ಐಆರ್‌ಗಳಿವೆ ಎಂದು ಇಡಿ ಅಧಿಕಾರಿಗಳು ಹೇಳಿದ್ದಾರೆ. ಜೈಲಿನಲ್ಲಿ ಇರುವಾಗಲೂ ತಂತ್ರಜ್ಞಾನದ ಸಹಾಯದಿಂದ ಜನರನ್ನು ವಂಚಿಸುತ್ತಿದ್ದ. ಕರೆ ಮಾಡಿದ ಫೋನ್ ಸಂಖ್ಯೆಯ ಹಿರಿಯ ಸರ್ಕಾರಿ ಅಧಿಕಾರಿಗಳಿಗೆ ಸೇರಿದ್ದು ಎಂಬಂತೆ ಕರೆ ಮಾಡಿದವರಿಗೆ ನಂಬರ್‌ ಡಿಸ್​​ಪ್ಲೇ ಆಗುತ್ತಿತ್ತು. ಇದರಿಂದ ಎಲ್ಲರೂ ಮೋಸ ಹೋಗುತ್ತಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. (ಏಜೆನ್ಸೀಸ್​)

    ನೋರಾಗೆ ಜಾಕ್​ಲೀನ್​ ಕಂಡರೆ ಹೊಟ್ಟೆಉರಿ … ಹೊಸ ರಹಸ್ಯ ಬಿಚ್ಚಿಟ್ಟ ಸುಕೇಶ್​ ಚಂದ್ರಶೇಖರ್​

    ಸುಕೇಶ್​ ನನ್ನ ಬದುಕು ಮತ್ತು ಕರಿಯರ್​ ಹಾಳು ಮಾಡಿದ … ಜಾಕ್​ಲೀನ್​ ಅಳಲು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts