More

    ನಮ್ಮನ್ನೂ ನೌಕರರೆಂದು ಪರಿಗಣಿಸಿ

    ಸಾಗರ : ಗ್ರಾಮೀಣ ಅಂಚೆ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಿ ಮತ್ತು ಕಮಲೇಶಚಂದ್ರ ವರದಿಯನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಬುಧವಾರ ಅಂಚೆ ನೌಕರರ ಸಂಘದಿAದ ಪ್ರಧಾನ ಅಂಚೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
    ಸಂಘದ ಶಿವಮೊಗ್ಗ ವಿಭಾಗದ ಉಪಾಧ್ಯಕ್ಷ ಕೆ.ಎಲ್.ಮಂಜಪ್ಪ ಮಾತನಾಡಿ, ಅಂಚೆ ನೌಕರರನ್ನು ಕೇಂದ್ರ ಸರ್ಕಾರ ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿದೆ. ದುಡಿಮೆಗೆ ತಕ್ಕ ಸಂಬಳ ಕೊಡದೆ ಸತಾಯಿಸುತ್ತಿದೆ. ಗ್ರಾಮೀಣ ಅಂಚೆ ನೌಕರರಿಗೆ 8 ಗಂಟೆ ಕೆಲಸ ನೀಡುವ ಜತೆಗೆ ಪಿಂಚಣಿ ಸೇರಿ ಅಗತ್ಯ ಸೌಲಭ್ಯಗಳನ್ನು ನೀಡಬೇಕು. ಸೇವಾ ಹಿರಿತನದ ಆಧಾರದಲ್ಲಿ ಜಿಡಿಎಸ್ ನೌಕರರಿಗೆ ವಿಶೇಷ ಇಂಕ್ರಿಮೆAಟ್ ನೀಡಬೇಕು ಎಂದು ಆಗ್ರಹಿಸಿದರು.
    ಇತ್ತೀಚಿನ ದಿನಗಳಲ್ಲಿ ಅಂಚೆ ನೌಕರರಿಗೆ ಅವೈಜ್ಞಾನಿಕ ಗುರಿಯನ್ನು ನಿಗದಿಪಡಿಸಲಾಗುತ್ತಿದ್ದು ಇದನ್ನು ತಕ್ಷಣ ನಿಲ್ಲಿಸಬೇಕು. ಗುಂಪು ವಿಮೆಯನ್ನು 5 ಲಕ್ಷ ರೂ.ವರೆಗೆ ಹೆಚ್ಚಿಸಬೇಕು. ಅವೈಜ್ಞಾನಿಕ ಗುರಿ ಸಾಽಸದಿರುವ ಜಿಡಿಎಸ್ ನೌಕರರಿಗೆ ನೀಡುತ್ತಿರುವ ಕಿರುಕುಳವನ್ನು ನಿಲ್ಲಿಸಬೇಕು. ಜಿಡಿಎಸ್ ಗ್ರಾಚುಟಿ ಹಣವನ್ನು 5 ಲಕ್ಷ ರೂ.ವರೆಗೆ ಹೆಚ್ಚಿಸಬೇಕು. ಜಿಡಿಎಸ್ ಮತ್ತು ಕುಟುಂಬದ ಸದಸ್ಯರಿಗೆ ವೈದ್ಯಕೀಯ ಸೌಲಭ್ಯ ಒದಗಿಸುವ ಜತೆಗೆ 180 ದಿನಗಳ ರಜೆ ಉಳಿಸಿಕೊಳ್ಳಲು ಅವಕಾಶ ಕಲ್ಪಿಸಬೇಕು. ನಮ್ಮ ನ್ಯಾಯಯುತ ಬೇಡಿಕೆಗೆ ತಾರ್ಕಿಕ ಅಂತ್ಯ ನೀಡಬೇಕು ಎಂದು ಆಗ್ರಹಿಸಿದರು.
    ಸಂಘದ ಸಹ ಕಾರ್ಯದರ್ಶಿ ಸುಬ್ರಹ್ಮಣ್ಯ ಕಾರ್ಗಲ್ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ನೆಟ್‌ವರ್ಕ್ ಸಮಸ್ಯೆಯಿಂದ ಅಂಚೆ ನೌಕರರು ಕೆಲಸ ಮಾಡಲು ಆಗುತ್ತಿಲ್ಲ. ಕಾಯಂ ನೌಕರರಿಗೆ ಸಿಗುವ ಸವಲತ್ತುಗಳು ಇಲಾಖೇತರ ನೌಕರರಿಗೆ ಸಿಗುತ್ತಿಲ್ಲ. ನಮ್ಮಿಂದ ಕೆಲಸ ಮಾಡಿಸಿಕೊಂಡು ಕಾಯಂ ನೌಕರರು ಹೆಸರು ಗಳಿಸುತ್ತಿದ್ದಾರೆ. ಯಾವುದೇ ಸೌಲಭ್ಯ ಕೊಡದೆ ಹೆಚ್ಚು ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಆದ್ದರಿಂದ ಇಲಾಖೇತರ ನೌಕರರನ್ನು ನೌಕರರು ಎಂದು ಪರಿಗಣಿಸಲು ಕೋರಿದ್ದೇವೆ. ಕೂಡಲೆ ಕಮಲೇಶಚಂದ್ರ ವರದಿಯನ್ನು ಸಂಪೂರ್ಣ ಅನುಷ್ಠಾನಕ್ಕೆ ಕೊಡಲು ಆಗ್ರಹಿಸಿದರು. ವೆಂಕಟೇಶ್, ಎಚ್.ಜಿ. ಶಶಿಕಲಾ, ಚಂದ್ರಕಲಾ, ರಾಜೇಂದ್ರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts