More

    ಮಹಿಳೆಯರ ದೂರುಗಳ ಗಂಭೀರ ಪರಿಗಣಿಸಿ

    ರಾಯಚೂರು: ಮಹಿಳೆಯರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡು ಕಾಲಮಿತಿಯೊಳಗೆ ಸಮಸ್ಯೆ ಬಗೆಹರಿಸಲು ಕ್ರಮಕೈಗೊಳ್ಳಬೇಕು. ಮಹಿಳೆಯರಿಂದ ಬರುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಅಧಿಕಾರಿಗಳಿಗೆ ಜಿ.ಪಂ. ಸಿಇಒ ಶಶಿಧರ ಕುರೇರ ಸೂಚಿಸಿದರು.

    ಜಿ.ಪಂ. ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸಾಂತ್ವನ ಸಭೆಯ ಅಧ್ಯಕ್ಷತೆ ವಹಿಸಿ ಗುರುವಾರ ಮಾತನಾಡಿದರು. ಮಹಿಳೆಯರ ಸಮಸ್ಯೆಗಳ ಕುರಿತು ಸಮಾಲೋಚನೆ ನಡೆಸುವುದರ ಜತೆಗೆ ಕಾನೂನು ನೆರವು ನೀಡಲು ಸಾಂತ್ವನ ಕೇಂದ್ರಗಳ ಸಿಬ್ಬಂದಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದರು.

    ಸರ್ಕಾರದ ಯೋಜನೆಗಳನ್ನು ಜಾಗೃತಿ ಮೂಡಿಸಿ

    ಸಾಂತ್ವನ ಕೇಂದ್ರಗಳಿಗೆ ಬರುವ ಪ್ರಕರಣಗಳ ಅಂಕಿ-ಅಂಶ ಪಡೆದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪರಿಶೀಲನೆ ನಡೆಸಬೇಕು. ಕೇಂದ್ರಗಳಿಗೆ ಭೇಟಿ ನೀಡಿ ಸಮರ್ಪಕ ರೀತಿಯಲ್ಲಿ ಕೆಲ ನಡೆಯುತ್ತಿರುವ ಬಗ್ಗೆ ಪರಿಶೀಲಿಸಬೇಕು. ಸ್ತ್ರೀ ಶಕ್ತಿ ಯೋಜನೆ ಮತ್ತು ಸರ್ಕಾರದ ಇತರ ಯೋಜನೆಗಳ ಬಗ್ಗೆ ಮಹಿಳೆಯರಲ್ಲಿ ಜಾಗೃತಿ ಮೂಡಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಉಳಿತಾಯಕ್ಕೆ ಹೆಚ್ಚಿನ ಒತ್ತು ನೀಡುವಂತೆ ಮಹಿಳೆಯರಲ್ಲಿ ಅರಿವು ಮೂಡಿಸಬೇಕು ಎಂದು ಶಶಿಧರ ಕುರೇರ ತಿಳಿಸಿದರು.

    ಇದನ್ನೂ ಓದಿ: ಚಂದ್ರಯಾನ -3 ಯಶಸ್ವಿ ಉಡಾವಣೆ ಹಿಂದಿದ್ದಾರೆ ರಾಕೇಟ್​​​ ಮಹಿಳೆ ರಿತು ಶ್ರೀವಾಸ್ತವ

    ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಯಾನಂದ ಬೇಲೂರೆ ಮಾತನಾಡಿ, ಸಾಂತ್ವಾನ ಕೇಂದ್ರಗಳಿಗೆ ಬರುವ ಮಹಿಳೆಯರ ದೂರುಗಳನ್ನು ಅಲ್ಲಿಯೇ ಬಗೆಹರಿಸಲು ಪ್ರಯತ್ನಿಸಬೇಕು. ಬಗೆಹರಿಸಲಾದ ಪ್ರಕರಣಗಳನ್ನು ನ್ಯಾಯಾಲಯದ ಗಮನಕ್ಕೆ ತರಬೇಕು ಎಂದು ಹೇಳಿದರು.
    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್ ಮಾತನಾಡಿ, ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿಸಿದ ದೂರುಗಳು ಬಂದಲ್ಲಿ ಸಾಂತ್ವನ ಕೇಂದ್ರಗಳು ಹಾಗೂ ಸಖಿ ಸ್ಟಾಪ್ ಒನ್ ಕೇಂದ್ರಗಳಲ್ಲಿ ಸಮಾಲೋಚನೆ ನಡೆಸುವ ಮೂಲಕ ಬಗೆಹರಿಸಲು ಪ್ರಯತ್ನಿಸಬೇಕು. ಇದರಿಂದ ಶೇ.50 ಪ್ರಕರಣಗಳು ಬಗೆಹರಿಯುತ್ತವೆ. ಸಾಂತ್ವನ ಕೇಂದ್ರಗಳಲಿ ಬಗೆಹರಿಯದ ಪ್ರಕರಣಗಳನ್ನು ಪೊಲೀಸ್ ಠಾಣೆಗೆ ಕಳುಹಿಸಬೇಕು. ಪ್ರತಿ ತಿಂಗಳು ಪೊಲೀಸ್ ಠಾಣೆಯಿಂದ ಪ್ರಕರಣಗಳ ಮಾಹಿತಿ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಚೇತನಕುಮಾರ, ಡಿಎಚ್‌ಒ ಡಾ.ಸುರೇಂದ್ರಬಾಬು, ಪಶು ಸಂಗೋಪನಾ ಇಲಾಖೆ ಉಪ ನಿರ್ದೇಶಕ ಅಶೋಕ ಕೋಲ್ಕಾರ, ಮಕ್ಕಳ ರಕ್ಷಣಾಧಿಕಾರಿ ಮನ್ಸೂರ್ ಅಹ್ಮದ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts