ಹಾಸನ SP ಕಚೇರಿ ಆವರಣದಲ್ಲೇ ಪತ್ನಿಗೆ ಚೂರಿ ಚುಚ್ಚಿ ಕೊಂದ ಕಾನ್ಸ್​​ಸ್ಟೇಬಲ್​; ಇಬ್ಬರ ನಡುವೆ ಅದೇನಾಗಿತ್ತು?

crime (1)
Published on

 ಹಾಸನ: ಪೊಲೀಸ್‌ ಕಾನ್‌ಸ್ಟೇಬಲ್‌ ಒಬ್ಬ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ (SP) ಕಚೇರಿ ಆವರಣದಲ್ಲೇ ಪತ್ನಿಗೆ ಚಾಕು ಇರಿದು ಕೊಂದು ಹಾಕಿದ್ದಾನೆ. ಈ ಘಟನೆ ಹಾಸನದಲ್ಲಿ ನಡೆದಿದೆ.

ಮಮತಾ ಮೃತ ಮಹಳೆ. ಹಾಸನ ನಗರ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಲೋಕನಾಥ್ ಪತ್ನಿಗೆ ಚಾಕುವಿನಿಂದ ಇರಿದ ಆರೋಪಿ. ಲೋಕನಾಥ್ ಶಾಂತಿಗ್ರಾಮ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಕಾನ್‌ಸ್ಟೇಬಲ್‌, ಪತ್ನಿಗೆ ಚಾಕುವಿನಿಂದ ಇರಿದಿದ್ದಾನೆ.

ಲೋಕನಾಥ್ ಹಾಗು ಮಮತಾಗೆ 17 ವರ್ಷಗಳ ಹಿಂದೆ ವಿವಾಹ ಆಗಿತ್ತು. ಇಬ್ಬರು ಮಕ್ಕಳೂ ಇದ್ದರು.  ನಾಲ್ಕೈದು ದಿನಗಳಿಂದ ಗಂಡ-ಹೆಂಡತಿ ನಡುವೆ ಜಗಳ ನಡೆದಿತ್ತು. ಇಂದು ಪತಿ ವಿರುದ್ಧ ದೂರು ನೀಡಲು ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣಕ್ಕೆ ಪತ್ನಿ ಬಂದಿದ್ದರು. ಇದರಿಂದ ಕ್ರುದ್ಧನಾದ ಕಾನ್‌ಸ್ಟೇಬಲ್ ಲೋಕನಾಥ್, ಪತ್ನಿಗೆ ಎಲ್ಲರ ಮುಂದೆಯೇ ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದಾನೆ.ಚಿಕಿತ್ಸೆ ಫಲಕಾರಿಯಾಗದೆ ಮಮತಾ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net