More

    ಮತಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ

    ರಾಮದುರ್ಗ: ಮತಕ್ಷೇತ್ರದ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ 986 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಮಲಪ್ರಭಾ ನದಿ ಪಾತ್ರದ ಜನತೆಗೆ ಪ್ರವಾಹದಿಂದ ಆಗುತ್ತಿರುವ ತೊಂದರೆ ತಡೆಯಲು ನದಿಗೆ ತಡೆಗೋಡೆ ನಿರ್ಮಾಣಕ್ಕೆ 135 ಕೋಟಿ ರೂ. ವೆಚ್ಚದಲ್ಲಿ ಕ್ರಿಯಾಯೋಜನೆ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಸರ್ಕಾರದಿಂದ ಅನುಮೋದನೆ ಸಿಗಲಿದ್ದು ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಶಾಸಕ ಮಹಾದೇವಪ್ಪ ಯಾದವಾಡ ಭರವಸೆ ನೀಡಿದ್ದಾರೆ.

    ಪಟ್ಟಣದ ತೇರ ಬಜಾರ್‌ನಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಮಾತನಾಡಿ, ಪ್ರತಿಯೊಬ್ಬರೂ ಸಂವಿಧಾನದ ಆಶಯಗಳನ್ನು ಈಡೇರಿಸಲು ಪ್ರಯತ್ನಿಸಬೇಕು ಎಂದರು. ಪಟ್ಟಣದ ಅರಮನೆ ಆವರಣದಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು.

    ತಹಸೀಲ್ದಾರ್ ಗಿರೀಶ ಸ್ವಾ, ಜಿಪಂ ಸದಸ್ಯರಾದ ರಮೇಶ ದೇಶಪಾಂಡೆ, ಕೃಷ್ಣಪ್ಪ ಲಮಾಣಿ, ಶಿವಕ್ಕ ಬೆಳವಡಿ, ತಾಪಂ ಇಒ ಮುರುಳೀಧರ ದೇಶಪಾಂಡೆ, ಡಿವೈಎಸ್‌ಪಿ ಶಂಕರಗೌಡ ಪಾಟೀಲ, ಗ್ರೇಡ್-2 ತಹಸೀಲ್ದಾರ್ ಸೋಮಶೇಖರ ತಂಗೋಳಿ, ಸಹಾಯಕ ಕೃಷಿ ನಿರ್ದೇಶಕ ಎಸ್.ಎಫ್.ಬೆಳವಟಗಿ, ಬಿಇಒ ಆರ್.ಎ.ಅಲಾಸೆ, ಸಮಾಜ ಕಲ್ಯಾಣ ಇಲಾಖೆ ಎ.ಡಿ. ಕೆ.ಎಸ್.ಕರ್ಕಿ, ಪಶು ಸಂಗೋಪನಾ ಇಲಾಖೆಯ ಡಾ.ಗಿರೀಶ ಪಾಟೀಲ, ಪುರಸಭೆ ಮುಖ್ಯಾಕಾರಿ ಶಶಿಧರ ಕಾಗವಾಡ ಇದ್ದರು.ಉಗರಗೋಳ ವರದಿ: ಪ್ರತಿಯೊಬ್ಬರು ರಾಷ್ಟ್ರಪ್ರೇಮ ಬೆಳೆಸಿಕೊಳ್ಳಬೇಕು ಎಂದು ಶ್ರೀ ಯಲ್ಲಮ್ಮ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಮನಗೌಡ ತಿಪರಾಶಿ ಕರೆ ನೀಡಿದ್ದಾರೆ. ಶ್ರೀ ಕ್ಷೇತ್ರ ಯಲ್ಲಮ್ಮನಗುಡ್ಡದಲ್ಲ್ಲಿ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದರು. ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯರು, ದೇವಸ್ಥಾನ ಅರ್ಚಕರು, ಅಕಾರಿಗಳು, ಸಿಬ್ಬಂದಿ ಇದ್ದರು. ಉಗರಗೋಳ ಗ್ರಾಮದ ರೇಣುಕಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿಯಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಪಿಕೆಪಿಎಸ್ ಅಧ್ಯಕ್ಷ ಬಸನಗೌಡ ಪಾಟೀಲ, ಪಿಕೆಪಿಎಸ್ ಉಪಾಧ್ಯಕ್ಷ ರಾಮನಗೌಡ ಗೂಡರಾಶಿ, ಹನುಮಂತಗೌಡ ಕೆಂಚನಗೌಡ್ರ, ಯಲ್ಲಪ್ಪಗೌಡ ಗಡಾದಗೌಡ್ರ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts