More

    ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜಯಂತ್ಯುತ್ಸವ

    ಕಳಸ: ದೇಶದ ಸರ್ವತೋಮುಖ ಅಭಿವೃದ್ಧಿಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಪಾತ್ರ ಅನನ್ಯವಾದದ್ದು, ಅವರ ಸಾಮಾಜಿಕ ಚಳವಳಿಗಳಿಂದ ಭಾರತದಲ್ಲಿ ಸಮಸಮಾಜದ ನಿರ್ಮಾಣಕ್ಕೆ ಕಾರಣವಾಯಿತು ಎಂದು ಕಳಸ ಜೆಸಿಐ ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ್ ಹೇಳಿದರು.

    ತಾಲೂಕಿನ ಭದ್ರಕಾಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳಸ ಜೆಸಿಐ ಸಂಸ್ಥೆಯಿಂದ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ 133ನೇ ಜನ್ಮ ದಿನಾಚರಣೆ ಹಾಗೂ ಜೆಸಿಐನ ನನ್ನ ಕನಸಿನ ಶಾಲೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಸಂವಿಧಾನದ ಮೂಲಕ ಕೊಟ್ಟ ಸವಲತ್ತುಗಳು ನಿರ್ದಿಷ್ಟ ಸಮುದಾಯಗಳಿಗೆ ಮಾತ್ರ ಸೀಮಿತವಾಗದೆ ಎಲ್ಲ ವರ್ಗದ ಜನರ ಅಭಿವೃದ್ಧಿಗೂ ಕಾರಣವಾಗಿದೆ. ಶಿಕ್ಷಣದ ಬಗ್ಗೆ ಅಪಾರ ಒಲವು ಹೊಂದಿದ್ದ ವಿಶ್ವಜ್ಞಾನಿ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ದಿನ ಗ್ರಾಮೀಣ ಭಾಗದ ಶಾಲೆಯನ್ನು ದತ್ತು ಪಡೆದು, ಅಭಿವೃದ್ಧಿ ಪಡಿಸುವ ಯೋಜನೆಗೆ ಚಾಲನೆ ನೀಡಿದ್ದು ಸಂತಸದ ವಿಚಾರವಾಗಿದೆ. ಅಂಬೇಡ್ಕರ್ ಅವರ ಜೀವನ ನಮಗೆಲ್ಲ ಮಾದರಿಯಾಗಿದೆ ಎಂದು ಹೇಳಿದರು.
    ಜೆಸಿಐ ಸಂಸ್ಥೆ ನಿರ್ದೇಶಕ ಎಚ್.ಆರ್.ಪ್ರಶಾಂತ್ ಮಾತನಾಡಿ, ಜೆಸಿಐ ಸಾರ್ವಜನಿಕ ಹಿತಾಸಕ್ತಿಯಿಂದ ತೀರ ಹಿಂದುಳಿದ ಸರ್ಕಾರಿ ಶಾಲೆಗಳನ್ನು ಗುರುತಿಸಿ ಅಭಿವೃದ್ದಿ ಪಡಿಸುವ ದೃಷ್ಟಿಯಿಂದ ನನ್ನ ಕನಸಿನ ಶಾಲೆ ಎಂಬ ಕಾರ್ಯಕ್ರಮವನ್ನು ಪರಿಚಯಿಸಿದೆ. ಈಗಾಗಲೇ ವಲಯದಲ್ಲಿ 8 ಘಟಕಗಳಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ಕೊಡಲಾಗಿದೆ ಎಂದರು.
    ಮುಖ್ಯಶಿಕ್ಷಕಿ ಅಶ್ವಿನಿ, ಎಸ್‌ಡಿಎಂಸಿ ಅಧ್ಯಕ್ಷ ಪ್ರವೀಣ್, ಜೆಸಿಐ ಕಾರ್ಯದರ್ಶಿಗಳಾದ ಸುಧಾಕರ್, ಮುರಳಿ, ಜಯಪ್ರಕಾಶ್, ನಜೀರ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts