More

    ಮಲ್ಲಿಪಟ್ಟಣದಲ್ಲಿ ಸಂವಿಧಾನ ಜಾಗೃತಿ

    ಹಾಸನ: ಸಂವಿಧಾನ ಮಹತ್ವ ಕುರಿತು ಅರಿವು ಮೂಡಿಸುವ ಸಂವಿಧಾನ ಜಾಗೃತಿ ಜಾಥಾ ರಥವನ್ನು ತಾಲೂಕಿನ ಮಲ್ಲಿಪಟ್ಟಣದಲ್ಲಿ ಸೋಮವಾರ ಪೂರ್ಣಕುಂಭದೊಂದಿಗೆ ಸಂಭ್ರಮದಿಂದ ಬರಮಾಡಿಕೊಳ್ಳಲಾಯಿತು.


    ಅರಕಲಗೂಡಿನ ಗ್ರಾಮದಲ್ಲಿ ನೂರಾರು ಮಂದಿ ಮಹಿಳೆಯರು ಪೂರ್ಣಕುಂಭದೊಂದಿಗೆ ಸಂವಿಧಾನ ಜಾಗೃತಿ ಜಾಥಾವನ್ನು ಬರಮಾಡಿಕೊಂಡರು. ತಹಸೀಲ್ದಾರ್ ಬಸವರೆಡ್ಡಪ್ಪ ರೋಣದ ನೇತೃತ್ವದಲ್ಲಿ ಮುಖಂಡರು, ಸ್ತ್ರೀಶಕ್ತಿ ಸಂಘದ ಸದಸ್ಯರು, ವಿದ್ಯಾರ್ಥಿಗಳು, ವಿವಿಧ ಕಲಾ ತಂಡಗಳು ಮೆರವಣಿಗೆಯಲ್ಲಿ ಸಾಗಿ ಬಸ್ ನಿಲ್ದಾಣದ ಬಳಿ ಸಮಾವೇಶಗೊಂಡವು.


    ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಬಸವರೆಡ್ಡಪ್ಪ ರೋಣದ, ತಾಪಂ ಇಒ ಡಾ.ಅಶೋಕ್, ಗ್ರಾಪಂ ಅಧ್ಯಕ್ಷ ಯೋಗೇಶ್ ಕುಮಾರ್, ಉಪಾಧ್ಯಕ್ಷೆ ಸುಮಿತ್ರಮ್ಮ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್, ಉಪನ್ಯಾಸಕ ಬಸವರಾಜು ಅವರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.


    ಉಪನ್ಯಾಸಕ ಬಸವರಾಜು ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದುಕುತ್ತಿರುವ ಪ್ರತಿಯೊಬ್ಬರೂ ಸಂವಿಧಾನದ ಆಶಯಗಳನ್ನು ತಿಳಿಸುವ ನಿಟ್ಟಿನಲ್ಲಿ ಹಳ್ಳಿಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಕೈಗೊಂಡು ಅರಿವು ಮೂಡಿಸಲಾಗುತ್ತಿದೆ. ಇತ್ತೀಚೆಗೆ ಸಾರ್ವಜನಿಕವಾಗಿ ದೇಶದ ಸಂವಿಧಾನ ಕುರಿತು ಸಮೀಕ್ಷೆ ನಡೆಸಿದ ವೇಳೆ ಶೇ.45ರಷ್ಟು ಮಂದಿಗೆ ಸಂವಿಧಾನ ಏನೂ ಎಂಬುದರ ಬಗ್ಗೆ ಅರಿವು ಇಲ್ಲದಿರುವುದು ಕಂಡುಬಂದಿದೆ. ದೇಶದಲ್ಲಿ ಎಲ್ಲರೂ ಸಮಾನರು ಎಂಬುದನ್ನು ಸಂವಿಧಾನ ಕೊಟ್ಟಿದೆ. ಇದನ್ನು ತಿಳಿಸುವ ನಿಟ್ಟಿನಲ್ಲಿ ಈ ಜಾಗೃತಿ ಜಾಥಾ ಸ್ವಾಗತಾರ್ಹ ಕಾರ್ಯಕ್ರಮವಾಗಿದೆ ಎಂದರು.


    ಪ್ರಮುಖ ಬೀದಿಗಳಲ್ಲಿ ಪೂರ್ಣಕುಂಭ, ಮಂಗಳವಾದ್ಯದೊಂದಿಗೆ ಮೆರವಣಿಗೆ ಮಾಡಲಾಯಿತು. ಶಾಲಾ, ಕಾಲೇಜು ವಿದ್ಯಾರ್ಥಿಗಳು, ವಿವಿಧ ಇಲಾಖೆ ಅಧಿಕಾರಿಗಳು, ದಲಿತಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts