More

    ನಾಪೋಕ್ಲುವಿನಲ್ಲಿ ಸಂವಿಧಾನ ಜಾಗೃತಿ ಜಾಥಾ

    ನಾಪೋಕ್ಲು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಎಮ್ಮೆಮಾಡು, ಬಲ್ಲಮಾ ವಟಿ, ಆಯ್ಯಂಗೆರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಸಲಾಯಿತು.

    ಇಲ್ಲಿನ ಪೊಲೀಸ್ ಮೈದಾನದಲ್ಲಿ ಸೋಮವಾರ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಗ್ರಾಪಂ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಅಧ್ಯಕ್ಷತೆಯಲ್ಲಿ ನಡೆಯಿತು. ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾ ಅರುಣ್, ಸದಸ್ಯರಾದ ಕುಲ್ಲೇಟಿರ ಅರುಣ್ ಬೇಬ, ಯಶೋದಾ ಕಟ್ಟಿ, ಗಂಗಮ್ಮ, ಲಲಿತಾ, ಸಮಾಜ ಕಲ್ಯಾಣ ಇಲಾಖೆಯ ಬಾಲಕೃಷ್ಣ ರೈ, ಕೆಪಿಎಸ್ ಶಾಲೆಯ ಉಪ ಪ್ರಾಂಶುಪಾಲ ಎಂ.ಎಸ್.ಶಿವಣ್ಣ ಪಾಲ್ಗೊಂಡಿದ್ದರು. ಕೆಪಿಎಸ್ ಶಾಲೆಯ ಶಿಕ್ಷಕಿ ಉಷಾರಾಣಿ ಸಂವಿಧಾನದ ರಚನೆ ಆಶಯಗಳ ಕುರಿತು ಮಾತನಾಡಿದರು.

    ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ವಿವಿಧ ಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸಂವಿಧಾನದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ ರಸಪ್ರಶ್ನೆ ಪ್ರಬಂಧ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನ ವಿತರಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts