25.1 C
Bangalore
Friday, December 6, 2019

ಉಮಾಶಂಕರರನ್ನು ವಜಾಗೊಳಿಸಲು ಆಗ್ರಹ

Latest News

ಸೆನ್ಸೆಕ್ಸ್​ 334 ಅಂಶಕ್ಕೂ ಹೆಚ್ಚು ಕುಸಿತ: ನಿಫ್ಟಿ 12,000ಕ್ಕೂ ಕೆಳಕ್ಕೆ…

ಮುಂಬೈ: ಷೇರುಪೇಟೆಯ ವಾರಾಂತ್ಯದ ದಿನದ ವಹಿವಾಟಿನ ಕೊನೆಗೆ ಬಾಂಬೆ ಸ್ಟಾಕ್​ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್​ 334 ಅಂಶ ಕುಸಿತ ಮತ್ತು ನ್ಯಾಷನಲ್...

ಬಳ್ಳಾರಿ ಜಿಲ್ಲೆಯಲ್ಲಿ ನರೇಗಾ ಕಾಮಗಾರಿ ಪರಿಶೀಲಿಸಿದ ಕೇಂದ್ರ ಅಧ್ಯಯನ ತಂಡ

ಬಳ್ಳಾರಿ: ನರೇಗಾ ರಾಷ್ಟ್ರೀಯ ಪ್ರಶಸ್ತಿ ಶಿಫಾರಸಿಗೆ ದೇಶದ ಒಂಬತ್ತು ಜಿಲ್ಲೆಗಳ ಪೈಕಿ ಕರ್ನಾಟಕದಿಂದ ಆಯ್ಕೆಯಾಗಿರುವ ಬಳ್ಳಾರಿ ಜಿಲ್ಲೆಗೆ ಕೇಂದ್ರ ಅಧ್ಯಯನ ತಂಡ ಶುಕ್ರವಾರ...

ಹಂಪಿ ವಿವಿ ಕೇಂದ್ರ ಸ್ಥಳಾಂತರ ಕೈಬಿಡಿ

ಬಾದಾಮಿ: ಬನಶಂಕರಿಯಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕೇಂದ್ರವನ್ನು ಸ್ಥಳಾಂತರ ಮಾಡಬಾರದು ಎಂದು ಆಗ್ರಹಿಸಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ...

ಅವೈಜ್ಞಾನಿಕ ಉಳುಮೆಯಿಂದ ಮಣ್ಣಿನ ಸವಕಳಿ, ಹೊಸಪೇಟೆ ಕೃಷಿ ಇಲಾಖೆ ಡಿಡಿ ಸಹದೇವ ಯರಗುಪ್ಪ ಹೇಳಿಕೆ

ಕೂಡ್ಲಿಗಿ: ರೈತರ ಜೀವನಕ್ಕೆ ಆಧಾರವಾಗಿರುವ ಮಣ್ಣಿನ ಸಂರಕ್ಷಣೆ ಮಾಡಬೇಕಾದ ಅಗತ್ಯವಿದೆ ಎಂದು ಕೃಷಿ ಇಲಾಖೆ ಹೊಸಪೇಟೆ ವಿಭಾಗದ ಉಪನಿರ್ದೇಶಕ ಸಹದೇವ ಯರಗುಪ್ಪ ಹೇಳಿದರು. ಪಟ್ಟಣದ...

ಮಲಗಿದ ಮೇಲೆ ಸಂಪೂರ್ಣ ಸುಖ ನಿದ್ದೆಗೆ ಇಲ್ಲಿವೆ ಕೆಲ ಟಿಪ್ಸ್​ಗಳು

ಸಂಪುರ್ಣ ಎಂಟು ತಾಸು ನಿದ್ದೆ..! - ನಿದ್ದೆ ಮಾಡಿದ ಮೇಲೆ ಮಧ್ಯೆ ಯಾವುದಕ್ಕೂ ಅಂದರೆ ಬಾತ್​ರೂಂಗೆ ಹೋಗಲು, ನೀರು ಕುಡಿಯಲು, ನಿಮ್ಮ ಮೊಬೈಲ್​ ಚೆಕ್​ ಮಾಡಲು...

ವಿಜಯಪುರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅಪಮಾನ ಮಾಡಿದ ಆರೋಪದಡಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ ಅವರನ್ನು ಸೇವೆಯಿಂದ ವಜಾಗೊಳಿಸಿ, ದೇಶದಿಂದ ಗಡಿಪಾರು ಮಾಡುವಂತೆ ದಲಿತಪರ ಸಂಘಟನೆಗಳ ಕಾರ್ಯಕರ್ತರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭನೆ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಪ್ರಸನ್ನ ಅವರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.
ಈ ವೇಳೆ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಜಿತೇಂದ್ರ ಕಾಂಬಳೆ ಮಾತನಾಡಿ, ‘ಸಂವಿಧಾನ ದಿನಾಚರಣೆ’ಯ ಜಾಗೃತಿ ಅಭಿಯಾನದ ಮಾರ್ಗದರ್ಶಿಯಲ್ಲಿ ‘ಡಾ.ಬಿ.ಆರ್.ಅಂಬೇಡ್ಕರ್ ಒಬ್ಬರೇ ಸಂವಿಧಾನ ರಚಿಸಿಲ್ಲ’ ಎಂಬ ವಿವಾದಾತ್ಮಕ ವಾಕ್ಯವನ್ನು ಸೇರಿಸಿ ಶಿಕ್ಷಣ ಇಲಾಖೆ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದ್ದು, ಅದರಿಂದಾಗಿ ಅಂಬೇಡ್ಕರ್ ಅವರಿಗೆ ಶಿಕ್ಷಣ ಇಲಾಖೆಯಿಂದಲೇ ಅಪಮಾನ ಮಾಡಿದಂತಾಗಿದೆ. ಆದ್ದರಿಂದ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಅವರನ್ನು ನೇರ ಹೊಣೆಗಾರರನ್ನಾಗಿ ಮಾಡಿ, ಕೆಲಸದಿಂದ ವಜಾಗೊಳಿಸಬೇಕು. ದೇಶದಿಂದ ಅವರನ್ನು ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.
ಅಂಬೇಡ್ಕರ್ ಅವರಿಗೆ ಅವಮಾನ ಮಾಡುವ ಮತ್ತು ಅಂಬೇಡ್ಕರ್ ಅವರ ಸಮುದಾಯವನ್ನು ಅವಮಾನಿಸುವ ಉದ್ದೇಶದಿಂದ ಸುಳ್ಳು ಮಾಹಿತಿ ನೀಡಿ, ಒಳಸಂಚು ನಡೆಸಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಬಗ್ಗೆ ಮಕ್ಕಳಲ್ಲಿ ಮತ್ತು ಜನರಲ್ಲಿ ತಪ್ಪು ಕಲ್ಪನೆ ಮೂಡಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಸಂವಿಧಾನ ರಚನೆಯಲ್ಲಿ ಅಂಬೇಡ್ಕರ್ ಅವರ ಯಾವುದೇ ಪಾತ್ರ ಇಲ್ಲ ಎಂಬಂತೆ ಬಿಂಬಿಸಲು ಹೊರಟಿದೆ. ಆ ಮೂಲಕ ನಮ್ಮ ಸಂವಿಧಾನ ಮತ್ತು ಅಂಬೇಡ್ಕರ್ ಅವರನ್ನು ಅವಮಾನಿಸಲಾಗುತ್ತಿದೆ. ಈ ಹಿಂದೆಯೇ ಕೇಂದ್ರದ ಸಚಿವರೊಬ್ಬರು ಸಂವಿಧಾನವನ್ನು ಬದಲಾಯಿಸುವ ಮಾತನ್ನು ಹೇಳಿದ್ದರು. ಕೇಂದ್ರ ಸರ್ಕಾರವೇ ಇದಕ್ಕೆಲ್ಲ ಕುಮ್ಮಕ್ಕು ನೀಡುತ್ತಿದೆ. ಇದು ಸರಿಯಲ್ಲ ಎಂದರು.
ದಲಿತ ಸಂಘರ್ಷ ಸಮಿತಿ ಜಿಲ್ಲಾ ಪ್ರಧಾನ ಸಂಚಾಲಕ ಸಂಜು ಕಂಬಾಗಿ, ಮುಖಂಡ ಅಡಿವೆಪ್ಪ ಸಾಲಗಲ್ಲ ಸೇರಿದಂತೆ ಭೀಮ ಸೇನೆ, ಜಿಲ್ಲಾ ದಲಿತ ಸಮನ್ವಯ ಸಮಿತಿಯ ಸಂಘಟಕರು ಭಾಗವಹಿಸಿದ್ದರು.

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...