More

    ಸಂವಿಧಾನದ ಮೂಲ ಕರ್ತವ್ಯ ಪಾಲನೆಯೂ ಮುಖ್ಯ

    ಬೆಳಗಾವಿ: ಭಾರತೀಯರು ಸಂವಿಧಾನ ನೀಡಿದ ಮೂಲ ಹಕ್ಕುಗಳನ್ನು ಅನುಭವಿಸುವುದು ಮಾತ್ರವಲ್ಲದೆ, ಮೂಲ ಕರ್ತವ್ಯಗಳನ್ನು ಪಾಲಿಸುವುದೂ ಅತಿ ಮುಖ್ಯವಾಗಿದೆ. ಅಂದಾಗ ಮಾತ್ರ ಸಂವಿಧಾನ ದಿನ ಆಚರಣೆ ಸಾರ್ಥಕತೆಯಾಗುತ್ತದೆ ಎಂದು ಬೆಳಗಾವಿಯ ವಕೀಲ ಅಶೋಕ ಹಲಗಲಿ ಅಭಿಪ್ರಾಯಪಟ್ಟರು.

    ನಗರದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಸಂವಿಧಾನ ದಿನಾಚರಣೆಯಲ್ಲಿ ಅವರು ಮಾತನಾಡಿ, ಭಾರತದ ಸಂವಿಧಾನ ಜಗತ್ತಿನಲ್ಲಿಯೇ ಅತಿ ದೀರ್ಘ ಲಿಖಿತ ಸಂವಿಧಾನವಾಗಿದೆ. ಪ್ರತಿ ಭಾರತೀಯನೂ ಸಂವಿಧಾನದ ಬಗ್ಗೆ ಅರಿವು ಹೊಂದಿರಬೇಕು ಎಂದರು.

    ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಂ.ಜಯಪ್ಪ ಮಾತನಾಡಿ, ಎಲ್ಲರೂ ಸಂವಿಧಾನ ಅರಿತುಕೊಳ್ಳಬೇಕೆಂಬ ಉದ್ದೇಶದಿಂದ ಸರ್ಕಾರ ಪದವಿ ಮಟ್ಟದಲ್ಲಿ ಎಲ್ಲ ಕೋರ್ಸ್‌ಗಳಿಗೂ ಸಂವಿಧಾನವನ್ನು ಕಡ್ಡಾಯ ಪತ್ರಿಕೆಯನ್ನಾಗಿ ಅಳವಡಿಸಿದೆ. ಹೀಗಾಗಿ ವಿದ್ಯಾರ್ಥಿಗಳು ಸಂವಿಧಾನ ನೀಡಿದ ಹಕ್ಕುಗಳನ್ನು ಅರಿತು ತಮ್ಮ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು. ಸಂವಿಧಾನಾತ್ಮಕ ಕರ್ತವ್ಯಗಳನ್ನು ಅರ್ಥೈಸಿಕೊಂಡು ಆರೋಗ್ಯಕರ ಸಮಾಜದ ನಿರ್ಮಾತೃಗಳಾಗಬೇಕು ಎಂದು ಕಿವಿಮಾತು ಹೇಳಿದರು. ಅಲ್ಲದೆ, ವಿದ್ಯಾರ್ಥಿಗಳಿಗೆ ಸಂವಿಧಾನದ ಪೂರ್ವ ಪೀಠಿಕೆ ಬೋಧಿಸಿದರು.

    ಉಪ ಪ್ರಾಚಾರ್ಯ ಅನಿಲ ರಾಮದುರ್ಗ ಸ್ವಾಗತಿಸಿದರು. ಡಾ. ರಮೇಶ ಎಂ.ಎನ್. ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿನಿ ರಾಖಿ ಕಲ್ಪತ್ರಿ ಪ್ರಾರ್ಥಿಸಿದರು. ವಿದ್ಯಾರ್ಥಿನಿ ಸಂಗೀತಾ ಲಮಾಣಿ ನಿರೂಪಿಸಿದರು. ಡಾ. ಮಲ್ಲೇಶ ದೊಡ್ಡಲಕ್ಕಣ್ಣವರ ವಂದಿಸಿದರು. ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಇದ್ದರು. 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಕಾರ್ಯಕ್ರಮ ವೀಕ್ಷಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts