ಸಂವಿಧಾನ ಶಿಲ್ಪಿಯನ್ನು ಸ್ಮರಿಸೋಣ

ಗೋಕಾಕ: ನಮ್ಮ ಭಾರತದ ಸಂವಿಧಾನವು ಜಗತ್ತಿನ ಅತಿ ದೊಡ್ಡ ಹಾಗೂ ಯಶಸ್ವಿ ಪ್ರಜಾಪ್ರಭುತ್ವ ಹೊಂದಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದರ ಶ್ರೇಯಸ್ಸು ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.

ಪಟ್ಟಣದ ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ಅರಬಾವಿ ಬಿಜೆಪಿ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಸಂವಿಧಾನ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಪ್ರತಿಯೊಬ್ಬ ನಾಗರಿಕರಿಗೂ ಸಮಾನ ಹಕ್ಕು ಒದಗಿಸುವ ಪ್ರಮುಖ ಸಾಧನ ಸಂವಿಧಾನ ಎಂದು ಹೇಳಿದರು.

ಎಲ್ಲ ವರ್ಗಗಳ ಸ್ವಾತಂತ್ರ್ಯ ರಕ್ಷಿಸುವ ಮತ್ತು ಜಾತಿ, ಮತ, ಪಂಥ ಯಾವುದೇ ತಾರತಮ್ಯ ಮಾಡದೆ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಸಿಗಬೇಕೆಂಬುದು ಡಾ.ಅಂಬೇಡ್ಕರ್ ಅವರ ಆಶಯವಾಗಿತ್ತು. ಅದರಂತೆ ಪ್ರತಿಯೊಬ್ಬರೂ ಅಂಬೇಡ್ಕರ್ ಅವರನ್ನು ಸ್ಮರಿಸಿ ಅವರಿಗೆ ಗೌರವ ನೀಡಬೇಕು ಎಂದು ಹೇಳಿದರು.

ದೇಶ ಮೊದಲು: ನಮಗೆ ಮೊದಲು ದೇಶ ಮುಖ್ಯ. ದೇಶದ ಒಳತಿಗಾಗಿ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡುವುದಾಗಬೇಕು. ಜತೆಗೆ ಪ್ರತಿಯೊಬ್ಬರೂ ದೇಶಾಭಿಮಾನ ಬೆಳೆಸಿಕೊಳ್ಳಬೇಕು. ಭಾರತೀಯ ಜನತಾ ಪಾರ್ಟಿ ತನ್ನ ಮೂಲ ಸಂಘಟನೆ ಮೂಲಕ ಅಸಂಖ್ಯ ಕಾರ್ಯಕರ್ತರ ಪಡೆ ರಚಿಸಿಕೊಂಡು ಸತತ ಎರಡನೇ ಅವಧಿಗೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದೆ. ದೇಶದ ಉದ್ದಗಲಕ್ಕೂ ಇಂದು ಬಿಜೆಪಿ ತನ್ನ ಅಧಿಕಾರ ವಿಸ್ತರಿಸಿದ್ದು, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ ನಾಯಕತ್ವ ಮತ್ತು ಪಾರದರ್ಶಕ ಆಡಳಿತವೇ ಕಾರಣವಾಗಿದೆ. ಇಡೀ ವಿಶ್ವವೇ ಇಂದು ಭಾರತದತ್ತ ನೋಡಲು ಮೋದಿ ಅವರು ಹಮ್ಮಿಕೊಂಡ ಪ್ರಗತಿಪರ ಕಾರ್ಯಗಳೇ ಕಾರಣ ಎಂದು ಹೇಳಿದರು.

ಭಾರತದ ಪ್ರತಿ ಪ್ರಜೆಯೂ ದೇಶವನ್ನು ಪ್ರಗತಿಪಥದತ್ತ ಕೊಂಡೊಯ್ಯಲು ಹೆಚ್ಚಿನ ಕೊಡುಗೆ ನೀಡುವುದಾಗಬೇಕು. ಆತ್ಮ ನಿರ್ಭರ ಭಾರತದ ಗುರಿಯಾಗಲು ನಾವೆಲ್ಲರೂ ಪಣ ತೊಡಬೇಕಾದ ಅಗತ್ಯವಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಬಾಲಚಂದ್ರ ಜಾರಕಿಹೊಳಿ ಅವರು ಭಾರತಾಂಬೆ, ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಅರಬಾವಿ ಮಂಡಲ ಬಿಜೆಪಿ ಅಧ್ಯಕ್ಷ ಮಹಾದೇವ ಶೆಕ್ಕಿ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಭಾಶ ಪಾಟೀಲ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ನೀಲಕಂಠ ಕಪ್ಪಲಗುದ್ದಿ, ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆನಂದ ಮೂಡಲಗಿ, ಎಸ್‌ಸಿ ಮೋರ್ಚಾ ಅಧ್ಯಕ್ಷ ನಾಗಪ್ಪ ಕುದರಿ, ಎಸ್‌ಟಿ ಮೋರ್ಚಾ ಅಧ್ಯಕ್ಷ ಯಲ್ಲಾಲಿಂಗ ವಾಳದ, ರೈತ ಮೋರ್ಚಾ ಅಧ್ಯಕ್ಷ ತಮ್ಮಣ್ಣ ದೇವರ, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಇಕ್ಬಾಲ್ ಸರ್ಕಾವಸ್, ಒಬಿಸಿ ಮೋರ್ಚಾ ಅಧ್ಯಕ್ಷ ಸಂಗಪ್ಪ ಕಂಠಿಕಾರ ಹಾಗೂ ಇತರರು ಇದ್ದರು.

ಉಪನ್ಯಾಸಕ ವಿಠ್ಠಲ ಕನೀಲ್ದಾರ ಸಂವಿಧಾನದ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಪರಸಪ್ಪ ಬಬಲಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಮಹಾಂತೇಶ ಕುಡಚಿ ವಂದಿಸಿದರು.

Share This Article

ಭಗವಂತ ಶ್ರೀರಾಮನ ಜೀವನದ ಈ 5 ತತ್ವವನ್ನು ಅಳವಡಿಸಿಕೊಳ್ಳಿ | Success Tips

ಭಾರತದಲ್ಲಿ ಶ್ರೀರಾಮನನ್ನು ಅತಿ ಹೆಚ್ಚು ಪೂಜಿಸಲಾಗುತ್ತದೆ. ಲಂಕಾದ ರಾವಣನ ಮೇಲೆ ಶ್ರೀರಾಮನ ವಿಜಯವನ್ನು ಇಂದಿಗೂ ದಸರಾ…

ಅತಿಯಾಗಿ ಯೋಚಿಸುವುದನ್ನು ನಿಲ್ಲಿಸಿ! ಸೈಲೆಂಟ್ ಆಗಿ ನಿಮ್ಮನ್ನು ಕಿಲ್ಲ ಮಾಡುತ್ತೆ Over Thinking ಅಭ್ಯಾಸ…

ಬೆಂಗಳೂರು:  ಇಂದಿನ ಬಿಡುವಿಲ್ಲದ ಜೀವನದಲ್ಲಿ ನಾವೆಲ್ಲರೂ ಸಣ್ಣ ಪುಟ್ಟ ವಿಚಾರಗಳನ್ನು ಹೆಚ್ಚು ಯೋಚಿಸುತ್ತೇವೆ ( Over…

ಹೆಂಗಸರು ಪ್ರತಿದಿನ ಹೂವು ಮುಡಿಯುವುದರಿಂದ ಆಗುವ ಲಾಭಗಳೇನು?…Wearing Flower

ಬೆಂಗಳೂರು:  ಹೆಣ್ಣುಮಕ್ಕಳು ತಲೆಗೆ ಎಣ್ಣೆ ಹಚ್ಚಿ, ತಲೆ ಬಾಚಿಕೊಂಡು, ನೀಟಾಗಿ ಹೆಣೆದು, ಹೂವಿನಿಂದ ( Wearing…