More

    ಸಂವಿಧಾನದ ಆಶಯ ತಿಳಿಯಲಿ

    ಬೆಳಗಾವಿ: ಕಾಯಕದಲ್ಲಿ ಮೇಲು-ಕೀಳು ಇಲ್ಲ. ವೃತ್ತಿ ಕೌಶಲ ಅಭಿವೃದ್ಧಿಗೆ ರಾಜ್ಯ ಸರ್ಕಾರ ರೂಪಿಸಿದ ವಿವಿಧ ಕಾರ್ಯಕ್ರಮ ಸದುಪಯೋಗ ಪಡೆಯಬೇಕು ಎಂದು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದರು.

    ನಗರದ ಗಾಂಧಿ ಭವನದಲ್ಲಿ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ಧಿ ಸಂಘ ಭಾನುವಾರ ಆಯೋಜಿಸಿದ್ದ ರಾಜ್ಯಮಟ್ಟದ ಸರ್ಕಾರಿ ಮುಸ್ಲಿಂ ನೌಕರರ ಮಹಾ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ನೌಕರರಿಂದ ಸಂವಿಧಾನದ ಆಶೋತ್ತರಗಳು ಜನರಿಗೆ ತಿಳಿಸುವ ಕೆಲಸವಾಗಬೇಕಿದೆ ಎಂದರು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಹೊಸ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆ ಮರುಜಾರಿಗೊಳಿಸುವುದು ಖಚಿತ. ಕೊಟ್ಟ ಮಾತನ್ನು ಸರ್ಕಾರ ಉಳಿಸಿಕೊಳ್ಳಲಿದೆ ಎಂದರು.

    ಶಾಸಕ ಆಸೀಫ್ ಸೇಠ್, ಮಾಜಿ ಶಾಸಕ ಫಿರೋಜ್ ಸೇಠ್, ಸಂಘದ ರಾಜ್ಯ ಘಟಕದ ಅಧ್ಯಕ್ಷ ಮೊಹಮ್ಮದ್‌ಸಲೀಂ ಹಂಚಿನಮನಿ, ಗೌರವಾಧ್ಯಕ್ಷ ಮೊಹಮ್ಮದ್‌ರಫಿ ಪಾಷಾ, ಪ್ರಧಾನ ಕಾರ್ಯದರ್ಶಿ ಸಯ್ಯದ್ ಇಸ್ಮಾಯಿಲ್ ಪಾಷಾ, ಉತ್ತರ ಕರ್ನಾಟಕ ಮುಸ್ಲಿಂ ಯುನೈಟೆಡ್ ಫೋರ್‌ಂ ಅಧ್ಯಕ್ಷ ಇಮ್ತಿಯಾಜ್ ಅಹ್ಮದ್ ಉಮರಶೇಖ್, ರಾಜ್ಯ ಗೌರವಾಧ್ಯಕ್ಷ ಮೊಹ್ಮದ ಪಾಷಾ, ಮಿರ್ಜಾ ಅಜ್ಮತುಲ್ಲಾ, ಡಾ. ಯೂಸೂಫ್ ಅಸ್ಲಂಖಾನ್, ಮೈನೂದ್ದಿನ್ ಶಿರಹಟ್ಟಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts