More

    ವಸತಿ ಶಾಲೆ ನೂತನ ಕಟ್ಟಡ ನಿರ್ಮಿಸಿ

    ಚಿಕ್ಕಮಗಳೂರು: ಪೊಲೀಸ್ ಲೇಔಟ್ ಸಮೀಪ ಶಿಥಿಲಾವಸ್ಥೆ ತಲುಪಿರುವ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ ಕಟ್ಟಡವನ್ನು ನೂತನವಾಗಿ ನಿರ್ಮಿಸಬೇಕು ಎಂದು ಬಹುಜನ ಸಮಾಜ ಪಕ್ಷದ ಕಾರ್ಯಕರ್ತರು ಬುಧವಾರ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ಗೆ ಮನವಿ ಸಲ್ಲಿಸಿದರು.
    ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ ಮಾತನಾಡಿ, ನಗರದ ಪೊಲೀಸ್ ಲೇಔಟ್ ಸಮೀಪದ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಕಟ್ಟಡ ಹಾಗೂ ಮೂಲ ಸೌಕರ್ಯ ಕೊರತೆಯಿಂದ ಮಕ್ಕಳ ವಿದ್ಯಾರ್ಜನೆಗೆ ಹಿನ್ನೆಡೆಯಾಗುತ್ತಿದೆ. ಪ್ರಸ್ತುತ ಶಾಲೆ ಕಟ್ಟಡ ಕಾಫಿ ಕ್ಯೂರಿಂಗ್‌ನಲ್ಲಿ ಎಸಿ ಸೀಟ್ನಿಂದ ರೂಫಿಂಗ್ ಮಾಡಲ್ಪಟ್ಟ ಜಾಗದಲ್ಲಿ ನಡೆಯುತ್ತಿದೆ. ಇದರ ಪಕ್ಕದಲ್ಲೇ ಕಾಫಿ ಕ್ಯೂರಿಂಗ್ ಹಾಗೂ ಹಿಂಬದಿ ಸಿಮೆಂಟ್ ಇಟ್ಟಿಗೆ ಫ್ಯಾಕ್ಟ ರಿಗಳ ಕೆಲಸಗಳು ನಡೆಯುತ್ತಿರುವ ಕಾರಣ ಅತಿಯಾದ ಧೂಳು ಎರಡು ಕಡೆಯಿಂದ ವಸತಿ ಶಾಲೆಗೆ ಆವರಿಸುತ್ತಿದೆ ಎಂದರು.
    ಇಲಾಖೆ ನಿರ್ಲಕ್ಷ್ಯದಿಂದ ಮಕ್ಕಳು ಪ್ರತಿನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ಅಲ್ಲದೇ ಈ ಶಿಥಿಲಾವಸ್ಥೆಗೆ ತಲುಪಿರುವ ಕಟ್ಟಡಕ್ಕೆ ಎರಡು ಲಕ್ಷ ರೂ. ಬಾಡಿಗೆಯನ್ನು ನೀಡುತ್ತಿರುವುದು ವಿರ್ಪಯಾಸ. ಜಿಲ್ಲಾಡಳಿತ ಖುದ್ದು ಸ್ಥಳ ಪರಿಶೀಲನೆ ನಡೆಸಿ ನೂತನ ಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು. ಸದ್ಯಕ್ಕೆ ಸುಸಜ್ಜಿತವಾದ ಕಟ್ಟಡಕ್ಕೆ ವಸತಿ ಶಾಲೆಯನ್ನು ವರ್ಗಾಯಿಸಿ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿದರು.
    ರಾಜ್ಯ ಕಾರ್ಯದರ್ಶಿ ಕೆ.ಬಿ.ಸುಧಾ, ತಾಲೂಕು ಅಧ್ಯಕ್ಷ ಎಚ್.ಕುಮಾರ್, ಉಪಾಧ್ಯಕ್ಷೆ ಕೆ.ಎಸ್.ಮಂಜುಳಾ, ಪ್ರಧಾನ ಕಾರ್ಯದರ್ಶಿ ಆರ್.ವಸಂತ್, ಮುಖಂಡರಾದ ಗಂಗಾಧರ್ ಮತ್ತಿತರರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts