29ರಂದು ಕಾರ್ಮಿಕರ ಸಂಘಗಳ ಒಕ್ಕೂಟ ಉದ್ಘಾಟನಾ ಸಮಾರಂಭ

ಹಾಸನ:ಹೇಮಾವತಿ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘಗಳ ಒಕ್ಕೂಟ ವತಿಯಿಂದ ಜ. 29 ರಂದು ನಗರದ ಸಾಹಿತ್ಯ ಪರಿಷತ್ತು ಭವನದಲ್ಲಿ ನೂತನ ಒಕ್ಕೂಟದ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ಮಂಜೇಗೌಡ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘಟನೆಗಳು ಒಂದೇ ವೇದಿಕೆಯಡಿ ಸಂಘಟಿತರಾಗಿ‌ ಕೆಲಸ‌ ಮಾಡುವ ಉದ್ದೇಶದಿಂದ ನೂತನ ಒಕ್ಕೂಟ ರಚಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ  30 ಸಾವಿರಕ್ಕೂ ಹೆಚ್ಚು ನೋಂದಾಯಿತ ಕಟ್ಟಡ ಕಾರ್ಮಿಕರಿದ್ದು ಇದುವರೆಗೂ ಜಿಲ್ಲಾ ಹಾಗೂ ತಾಲೂಕು ಮಟ್ಟಡದಲ್ಲಿ ವಿವಿಧ ಸಂಘಗಳನ್ನು ರಚಿಸಿಕೊಂಡು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಹೋರಾಟ ನಡೆಸುತ್ತಿದ್ದರು. ಇದರಿಂದ ಬಹುತೇಕ ಕಟ್ಟಡ ಕಾರ್ಮಿಕರು ಸೌಲಭ್ಯ ದಿಂದ ವಂಚಿತರಾಗುತ್ತಿದ್ದರು ಇದನ್ನು ಮನಗಂಡು ಜಿಲ್ಲೆಯ ಎಲ್ಲ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರನ್ನು ಒಂದೇ ವೇದಿಕೆಯಲ್ಲಿ ಸಂಘಟಿಸಲು ಗುತ್ತಿದೆ ಎಂದರು.

ಕಾರ್ಯಕ್ರದಲ್ಲಿ ಫಲಾನುಭವಿಗಳಿಗೆ ಕಾರ್ಮಿಕ‌ ಮಂಡಳಿಯಿಂದ ದೊರೆಯುವ ಸೌಲಭ್ಯಗಳ‌ ಮಾಹಿತಿ ಹಾಗೂ ಸೌಲಭ್ಯಗಳನ್ನು ವಿತರಿಸಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಕಟ್ಟಡ ಕಾರ್ಮಿಕರು ಭಾಗವಹಿಸಬೇಕು ಎಂದು ಮನವಿ‌ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಕಾರ್ಯದರ್ಶಿ ನಾಗೇಶ್, ಜಿಲ್ಲಾ ಸಂಚಾಲಕ ಪಿ.ಜಿ‌ ರಾಮಸ್ವಾಮಿ, ನಿರ್ದೇಶಕ ಧರಣಯ್ಯ ಇತರರು ಹಾಜರಿದ್ದರು.