More

    ರಾಮದೇವರ ಬೆಟ್ಟದಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣ; ಬಜೆಟ್​ನಲ್ಲಿ ಬೊಮ್ಮಾಯಿ ಘೋಷಣೆ

    ಬೆಂಗಳೂರು: ರಾಮನಗರದ ರಾಮದೇವರ ಬೆಟ್ಟದಲ್ಲಿ ಭವ್ಯವಾದ ರಾಮ ಮಂದಿರವನ್ನು ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

    ಅಲ್ಲದೆ ಪ್ರವಾಸೋದ್ಯಮವನ್ನು ಬೆಳೆಸುವ ನಿಟ್ಟಿನಲ್ಲಿ ಬೆಂಗಳೂರು ನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಐತಿಹಾಸಿಕ ಕುರುಹುಗಳಿರುವ ತಾಣಗಳ ಪ್ರವಾಸಿ ಸರ್ಕಿಟ್​ ಒಂದನ್ನು ಈ ವರ್ಷದಲ್ಲಿ ಪ್ರಾರಂಭಿಸಲು ನಿರ್ಧರಿಸಲಾಗಿದೆ. ಜತೆಗೆ ಸಂತ ಸೇವಾ ಲಾಲ್​ ಅವವರ ಜನ್ಮಸ್ಥಳ ದಾವಣಗೆರೆ ಜಿಲ್ಲೆಯ ಸೂರಗೊಂಡನಕೊಪ್ಪವನ್ನು ಅಭಿವೃದ್ಧಿಪಡಿಸಿ ಪ್ರವಾಸಿ ಸೌಲಭ್ಯವನ್ನು 5 ಕೋಟಿ ರೂ. ಗಳ ವೆಚ್ಚದಲ್ಲಿ ಕಲ್ಪಿಸಲಾಗುವುದು ಎಂದರು.

    ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಹೊದಿಗೆರೆಯಲ್ಲಿರುವ ಷಹಾಜಿ ಮಹಾರಾಜ್ ಸಮಾಧಿ ಸ್ಥಳವನ್ನು 5 ಕೋಟಿ ರೂ. ಗಳ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಿ, ಮೂಲಸೌಲಭ್ಯ ನೀಡಲಾಗುವುದು. ಹಾವೇರಿ ಜಿಲ್ಲೆಯ ಬಂಕಾಪುರದಲ್ಲಿ 12ನೇ ಶತಮಾನದಲ್ಲಿ ನಿರ್ಮಿಸಲಾದ ಐತಿಹಾಸಿಕ 101 ಕಂಬಗಳ ನಗರೇಶ್ವರ ದೇವಸ್ಥಾನದ ಪ್ರದೇಶವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ರಾಜ್ಯ ಬಜೆಟ್​​ನಲ್ಲಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದರು.

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸರ್ಕಾರದ ಅವಧಿಯ ಕೊನೆಯ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಹಣಕಾಸು ಖಾತೆಯನ್ನೂ ಹೊಂದಿರುವ ಸಿಎಂ ಬೊಮ್ಮಾಯಿ ಅವರ ಪಾಲಿಗೆ ಇದು 2ನೇ ಬಜೆಟ್​ ಮಂಡನೆಯಾಗಿದೆ. ಈ ಬಾರಿಯ ಬಜೆಟ್​ ಗಾತ್ರ ಒಟ್ಟು 3 ಲಕ್ಷ 9 ಸಾವಿರ 182 ಕೋಟಿ ರೂ. ಆಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts