ತುಮಕೂರು ವಸಂತನರಸಾಪುರ ಬಳಿ ಇಂಟಿಗ್ರೇಟೆಡ್ ಟೌನ್‌ಶಿಪ್ ನಿರ್ಮಾಣ

blank

ಬೆಂಗಳೂರು: ತುಮಕೂರು ಜಿಲ್ಲೆಯ ವಸಂತನರಸಾಪುರದ ಕೈಗಾರಿಕ ಪ್ರದೇಶಕ್ಕೆ ಹೊಂದುಕೊಂಡಂತೆ ನಗರಾಭಿವೃದ್ಧಿ ಇಲಾಖೆಯಿಂದ ಇಂಟಿಗ್ರೇಟೆಡ್ ಟೌನ್‌ಶಿಪ್ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳುವಂತೆ ನಗರಾಭಿವೃದ್ಧಿ ಸಚಿವ ಬಿ. ಎಸ್.ಬೈರತಿ ಸುರೇಶ ಅಧಿಕಾರಿಗಳಿಗೆ ಸೂಚಿಸಿದರು.

ವಿಧಾನಸೌಧದ ತಮ್ಮ ಕಚೇರಿಯಲ್ಲಿ ನಗರಾಭಿವೃದ್ದಿ ಇಲಾಖೆಯ ಅಡಿಯಲ್ಲಿ ಬರುವ ಹತ್ತು ಮಹಾನಗರ ಪಾಲಿಕೆ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮ, ನಗರಾಭಿವೃದ್ಧಿ ಪ್ರಾಧಿಕಾರಗಳು ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, 3 ತಿಂಗಳಿನಿಂದ ಇವುಗಳಲ್ಲಿ ನಡೆದಿರುವ ಕಾಮಗಾರಿಗಳು ಹಾಗೂ ಕೈಗೊಂಡಿರುವ ಯೋಜನೆಗಳ ಕುರಿತಂತೆ ಚರ್ಚಿಸಿದರು.

ಈ ವರ್ಷದ ಆಯ-ವ್ಯಯದಲ್ಲಿ ವಸಂತನರಸಾಪುರದ ಬಳಿ ಸುಮಾರು 500 ಎಕರೆ ಪ್ರದೇಶದಲ್ಲಿ ಇಂಟಿಗ್ರೇಟೆಡ್ ಟೌನ್‌ಶ್ಿ ನಿರ್ಮಾಣ ಮಾಡುವುದಾಗಿ ಘೋಷಿಸಲಾಗಿದೆ. ಲೋಕಸಭಾ ಚುನಾವಣೆಗಳಿಂದಾಗಿ ಈವರೆಗೂ ನೀತಿ ಸಂಹಿತೆ ಜಾರಿಯಲ್ಲಿತ್ತು, ಈಗ ಅದು ಮುಕ್ತಾಯವಾಗಿರುವುದರಿಂದ ಟೌನ್‌ಶಿಪ್ ನಿರ್ಮಾಣದ ಬಗ್ಗೆ ಗಮನ ಹರಿಸುವಂತೆ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳು ಸೇರಿದಂತೆ ಇತರೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು.

ರಸ್ತೆ, ರಿಂಗ್ ರಸ್ತೆ ನಿರ್ಮಾಣಕ್ಕೆ ಟೆಂಡರ್

ಹಾಸನ, ಚಿಕ್ಕಮಗಳೂರು, ಬೆಳಗಾವಿ ಮತ್ತು ಕೋಲಾರ ನಗರ ಪ್ರದೇಶದ ವ್ಯಾಪ್ತಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ರಸ್ತೆಗೆ ಡಾಂಬರೀಕರಣ, ರಸ್ತೆ ನಿರ್ಮಾಣ ಹಾಗೂ ರಿಂಗ್ ರಸ್ತೆ ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹೇಳಿದರು.
ಮೈಸೂರು ರಿಂಗ್ ರಸ್ತೆ ನಿರ್ಮಾಣ ಮಾಡಲು ಕೆಲ ಅಡೆತಡೆಗಳು ಎದುರಾಗಿದ್ದು, ಮತ್ತೆ ಅಲ್ಪಾವಧಿ ರೀ ಟೆಂಡರ್ ಕರೆಯುವಂತೆ ತಿಳಿಸಿದರು.

ಕಾರ್ಪೋರೇಷನ್ ಶಾಲೆ ಆರಂಭಕ್ಕೆ ಚಿಂತನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಇರುವಂತೆಯೇ ಇತರೆ ಮಹಾನಗರ ಪಾಲಿಕೆಗಳಲ್ಲಿಯೂ ಕಾರ್ಪೋರೇಷನ್ ಶಾಲೆಗಳನ್ನು ತೆರೆಯಲು ಸರ್ಕಾರ ಚಿಂತನೆ ನಡೆಸಿದ್ದು, ಎಲ್ಲೆಲ್ಲಿ ತೆರೆಯಲು ಸಾಧ್ಯವಿದೇ ಎನ್ನುವುದನ್ನು ಪರಿಶೀಲಿಸಿ. ಅಲ್ಲದೆ, ಸ್ಮಾರ್ಟ್ ಸಿಟಿ ಯೋಜನೆಯಡಿ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಕಾರ್ಪೋರೇಷನ್ ಶಾಲೆಗಳನ್ನು ತೆರೆಯಲು ಸಾಧ್ಯವೇ ಎನ್ನುವುದನ್ನು ಪರಿಶೀಲಿಸಿ ತಿಳಿಸುವಂತೆ ನಿರ್ದೇಶನ ನೀಡಿದರು.

ಮಹಾನಗರ ಪಾಲಿಕೆಗಳಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಒಂದು ವೇಳೆ ಹೆಚ್ಚು ಇದ್ದರೆ, ಕಡಿಮೆ ಮಾನವ ಸಂಪನ್ಮೂಲ ಇರುವ ಜಾಗಕ್ಕೆ ನಿಯೋಜನೆ ಮಾಡಲು ಸಾಧ್ಯವೇ ಎನ್ನುವುದನ್ನು ಗಮನಕ್ಕೆ ತರಲು ಕಾರ್ಯದರ್ಶಿಗಳಿಗೆ ಸೂಚಿಸಿದರು.

ಎರವಲು/ಗುತ್ತಿಗೆ ನೇಮಕ ಮಾಡಿಕೊಳ್ಳಿ

ಸಹಾಯಕ ಎಂಜಿನಿಯರ್, ಕಿರಿಯ ಎಂಜಿನಿಯರ್ ಸೇರಿದಂತೆ ತಾಂತ್ರಿಕ ಸಿಬ್ಬಂದಿಗಳನ್ನು ಎರವಲು ಸೇವೆ ಅಥವಾ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡು ಬಾಕಿ ಉಳಿದಿರುವ ಕಾಮಗಾರಿಗಳು ಹಾಗೂ ಯೋಜನೆಗಳನ್ನು ಪೂರ್ಣಗೊಳಸುವಂತೆ ತಾಕೀತು ಮಾಡಿದರು.
ಅಮೃತ್ 2.0 ಯೋಜನೆಯಡಿಯಲ್ಲಿ ರಾಜ್ಯದ ನಗರ ಪ್ರದೇಶಗಳಲ್ಲಿ ಕೈಗೊಳ್ಳಬೇಕಾಗಿರುವ ಅಭಿವೃದ್ಧಿ ಕಾಮಗಾರಿಗಳಿಗೆ ತಗಲುವ ಹಣದ ವೆಚ್ಚ ಕುರಿತಂತೆ ಕ್ರಿಯಾಯೋಜನೆ ರೂಪಿಸಲು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಸಲಹೆ ನೀಡಿದರು.

ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ದೀಪ ಚೋಳನ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಶರತ್.ಬಿ., ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕ ಜಿ ಲಕ್ಷ್ಮೀಕಾಂತ ರೆಡ್ಡಿ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Share This Article

ಈ ನಾಲ್ವರೊಂದಿಗೆ ನೀವು ಎಂದಿಗೂ ಜಗಳವಾಡಬೇಡಿ; ಅದರಿಂದ ನಿಮಗೆ ಹಾನಿ | Chanakya Niti

ಆಚಾರ್ಯ ಚಾಣಕ್ಯ ತನ್ನ ಒಂದು ನೀತಿಯ ಮೂಲಕ ಮಾನವನಿಗೆ ತನ್ನ ಜೀವನವನ್ನು ನಡೆಸುವ ಮಾರ್ಗವನ್ನು ಹೇಳಿದ್ದಾರೆ.…

ಬೊಜ್ಜು ಕರಗಿಸಿ ಫಿಟ್​ ಆಗಿರಲು ಈ ತರಕಾರಿಗಳೇ ಸಾಕು; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಇಂದಿನ ಕಾರ್ಯನಿರತ ಜೀವನದಲ್ಲಿ ತೂಕ ಹೆಚ್ಚಾಗುವುದು ತುಂಬಾ ಸಾಮಾನ್ಯ ಸಮಸ್ಯೆಯಾಗಿದೆ. ಅನೇಕರು ಹೆಚ್ಚಿದ ತೂಕದ ಬಗ್ಗೆ…

ಡಯಟ್ ಸೋಡಾ ಕುಡಿಯಲು ಇಷ್ಟಪಡುತ್ತೀರಾ?; ಹಾಗಾದ್ರೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿ ಇದು.. | Health Tips

ನಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸುವ ಜನರು ಸಾಮಾನ್ಯ ಸೋಡಾಕ್ಕಿಂತ ಡಯಟ್ ಸೋಡಾ ಕುಡಿಯಲು…