More

    7.5 ಕೋಟಿ ರೂ. ವೆಚ್ಚದಲ್ಲಿ ಬಸ್ ಡಿಪೋ ನಿರ್ಮಾಣ

    ಕುಶಾಲನಗರ: ಕುಶಾಲನಗರದ ನೂತನ ಕೆಎಸ್‌ಆರ್‌ಟಿಸಿ ಬಸ್ ಘಟಕದ ನಿರ್ಮಾಣಕ್ಕೆ ಗುರುವಾರ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್‌ಗೌಡ ಭೂಮಿಪೂಜೆ ನೆರವೇರಿಸಿದರು.

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಕುಶಾಲನಗರ-ಮಡಿಕೇರಿ ರಸ್ತೆಯ ಬಸವನಹಳ್ಳಿ ಬಳಿ ನಿರ್ಮಿಸುತ್ತಿರುವ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಈ ವೇಳೆ 7.5 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಡಿಪೋ ನಿರ್ಮಾಣ ಮಾಡಲಾಗುವುದು ಎಂದರು.

    ಬಸವನಹಳ್ಳಿ ಬಳಿಯ 4 ಎಕರೆ ಭೂ ಸ್ವಾಧೀನ ಪ್ರಕ್ರಿಯೆ ಮುಂದುವರಿದಿದ್ದು, ಕುಶಾಲನಗರದಿಂದ ಮೈಸೂರಿಗೆ ಸಂಪರ್ಕಿಸುವ ನಾಲ್ಕು ಪಥದ ಹೆದ್ದಾರಿಗೆ ನೇರವಾಗಿ ಡಿಪೋ ಸಂಪರ್ಕ ಕಲ್ಪಿಸಲು ಯೋಜಿಸಲಾಗುತ್ತಿದೆ. ಅರಣ್ಯ ಇಲಾಖೆಯಿಂದ ಅನುಮತಿ ಪಡೆದು ನಾಲ್ಕು ಎಕರೆ ಜಮೀನಿನಲ್ಲಿದ್ದ ಮರಗಳನ್ನು ತೆರವುಗೊಳಿಸಲಾಗಿದೆ. ಈ ಡಿಪೋ ರಾಷ್ಟ್ರೀಯ ಹೆದ್ದಾರಿ 275 ರಿಂದ ಸುಮಾರು ಐದು ಕಿಲೋಮೀಟರ್ ದೂರದಲ್ಲಿದೆ ಎಂದು ವಿವರಿಸಿದರು.

    ಸುತ್ತಲಿನ ಆವರಣಗೋಡೆ ನಿರ್ಮಾಣಕ್ಕೆ ಬೇಕಾಗುವ ಸಾಮಗ್ರಿಗಳು ಹಾಗೂ ಕಟ್ಟಡದ ತಳಪಾಯಕ್ಕೆ ಅಗತ್ಯವಿರುವ ಕಬ್ಬಿಣದ ಸರಳುಗಳು ಈಗಾಗಲೇ ಬಂದಿದ್ದು, ಇಡೀ ಪ್ರದೇಶವನ್ನು ಸಮತಟ್ಟುಗೊಳಿಸಲಾಗುತ್ತಿದೆ. ತ್ವರಿತಗತಿಯಲ್ಲಿ ಕಾಮಗಾರಿ ಮುಂದುವರಿಯಲಿದೆ ಎಂದು ತಿಳಿಸಿದರು.
    ಮೈಸೂರು ಮೂಲದ ಗುತ್ತಿಗೆದಾರ ಚಂದ್ರಶೇಖರ್ ಎಂಬುವರು ಟೆಂಡರ್‌ಪಡೆದಿದ್ದಾರೆ. 5 ಎಕರೆ ಪ್ರದೇಶದಲ್ಲಿ ಮೇಂಟನ್ಸ್ ಯಾರ್ಡ್, ವಾಷಿಂಗ್ ಏರಿಯಾ, ಚಾಲಕರು ಮತ್ತು ನಿರ್ವಾಹಕರಿಗೆ ವಿಶ್ರಾಂತಿ ಕೊಠಡಿ, ಆಡಳಿತ ಕಚೇರಿ, ಸೆಕ್ಯೂರಿಟಿ ಮತ್ತು ಪೆಟ್ರೋಲ್ ಬಂಕ್ ನಿರ್ಮಾಣವಾಗಲಿದೆ. ವಿದ್ಯುತ್ ಚಾಲಿತ ಬಸ್‌ಗಳಿಗೆ ಇ-ಚಾರ್ಜಿಂಗ್ ಪಾಯಿಂಟ್‌ಗಳು ಸೇರಿದಂತೆ ಆಧುನಿಕ ಸೌಲಭ್ಯಗಳೊಂದಿಗೆ ಸುಸಜ್ಜಿತ ಡಿಪೋ ನಿರ್ಮಾಣವಾಗಲಿದೆ ಎಂದು ವಿವರಿಸಿದರು.
    ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ ಬಿ.ಜಯಕರ ಶೆಟ್ಟಿ, ಇಂಜಿನಿಯರ್ ಶರತ್, ಮಡಿಕೇರಿ ಡಿಪೋ ಮ್ಯಾನೇಜರ್ ವೀರಭದ್ರಸ್ವಾಮಿ, ವಿ.ಪಿ.ಶಶಿಧರ್, ಕೆ.ಪಿ.ಚಂದ್ರಕಲಾ, ವಕೀಲ ನಾಗೇಂದ್ರ ಬಾಬು ಇತರರು ಇದ್ದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts