More

    ವರ್ಷದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ

    ಚಿಕ್ಕಮಗಳೂರು: ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ 24.5 ಲಕ್ಷ ರೂ. ವೆಚ್ಚದ ಕುಡಿಯುವ ನೀರಿನ ಘಟಕ ಮತ್ತು ಶೌಚಗೃಹ ನಿರ್ಮಿಸಲಾಗುತ್ತಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
    ನಗರದ ಐಡಿಎಸ್‌ಜಿ ಕಾಲೇಜು ಆವರಣದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಸಾರ್ವಜನಿಕರ ಬಹುದಿನದ ಬೇಡಿಕೆಯಂತೆ ಎಐಟಿ ವೃತ್ತದ ಸುತ್ತಮುತ್ತ ಓಡಾಡುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಶೌಚಗೃಹ ನಿರ್ಮಾಣ ಮಾಡಿ ಮಹಾತ್ಮ ಗಾಂಧಿಯವರ ಕನಸಿನಂತೆ ಸ್ವಚ್ಚತೆಗೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ ಎಂದರು.
    ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ದೃಷ್ಟಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಚುನಾವಣಾ ಪೂರ್ವದಲ್ಲಿ ನೀಡಿದಂತೆ 5 ಗ್ಯಾರಂಟಿಗಳಲ್ಲಿ 4 ಗ್ಯಾರಂಟಿಗಳನ್ನು ಪೂರ್ಣಗೊಳಿಸಲಾಗಿದೆ. 5ನೇ ಯುವನಿಧಿ ಗ್ಯಾರಂಟಿಗೆ ಶಿವಮೊಗ್ಗದಲ್ಲಿ ಜ.12ರಂದು ಚಾಲನೆ ನೀಡಲಾಗುವುದು ಎಂದು ಹೇಳಿದರು.
    ಚುನಾವಣೆ ಪೂರ್ವದಲ್ಲಿ ಹೇಳಿದಂತೆ 5 ಭರವಸೆಗಳನ್ನು ಪೂರೈಸಿದ ರಾಜ್ಯದ ಮೊದಲ ಹಾಗೂ ಏಕೈಕ ಮುಖ್ಯಮಂತ್ರಿ ಸಿದ್ಧರಾಮಯ್ಯ. ನಮ್ಮ ಸರ್ಕಾರ ಅಭಿವೃದ್ಧಿ ಮತ್ತು ಗ್ಯಾರಂಟಿಯನ್ನು ಸಮಾನಾಂತರದಲ್ಲಿ ನಡೆಸಿಕೊಂಡು ಬರುತ್ತಿದೆ. ಮುಂದಿನ ದಿನಗಳಲ್ಲಿ ಚಿಕ್ಕಮಗಳೂರು ಕ್ಷೇತ್ರ ಅಭಿವೃದ್ಧಿ ಪಥದ ಕಡೆಗೆ ಸಾಗುತ್ತದೆ ಹಾಗೂ ಜಿಲ್ಲೆಗೆ ಅಗತ್ಯವಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಒಂದು ವರ್ಷದ ಒಳಗಾಗಿ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts