More

    ಸೈಂಟ್ ಮೇರಿಸ್ ಐಲ್ಯಾಂಡ್ ಬಳಿ ಪ್ಲೋಟಿಂಗ್ ಜಟ್ಟಿ ನಿರ್ಮಿಸಲು ರೂ. 5.50 ಕೋಟಿ ಅನುದಾನ

    ಉಡುಪಿ: ಜಿಲ್ಲೆಯ ಪ್ರಮುಖ ಪ್ರವಾಸಿ ತಾಣ ಸೈಂಟ್ ಮೇರಿಸ್ ಐಲ್ಯಾಂಡ್ ಬಳಿ ಪ್ಲೋಟಿಂಗ್ ಜಟ್ಟಿ ನಿರ್ಮಾಣ ಕಾಮಗಾರಿ ಕೈಗೊಳ್ಳಲು ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದ್ದು, 5.50 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.

    ಕರ್ನಾಟಕ ಟೂರಿಸಂ ವಿಷನ್ ಗ್ರೂಫಿನ ಶಿಫಾರಸ್ಸು ಪ್ರಕಾರ 2019ರಲ್ಲಿ ಸೈಂಟ್ ಮೇರಿಸ್ ಐಲ್ಯಾಂಡ್ ಬಳಿ ನಿರ್ಮಿಸುವ ಪೆರ್ರಿ ಜಟ್ಟಿ ನಿರ್ಮಿಸುವ ಕಾಮಗಾರಿಯನ್ನು ಪ್ರವಾಸೋದ್ಯಮ ಇಲಾಖೆಯ ಮೇಲುಸ್ತುವಾರಿಯಲ್ಲಿ ಲೋಕೋಪಯೋಗಿ ಇಲಾಖೆ ಮೂಲಕ ಕೈಗೊಳ್ಳಲು ಯೋಜಿಸಲಾಗಿದ್ದು, ಆದರೆ ಸಿ.ಆರ್.ಝಡ್. ನಿಯಮಾವಳಿ ಅನ್ವಯ ಪೆರ್ರಿ ಜಟ್ಟಿ ನಿರ್ಮಿಸಲು ಅಸಾಧ್ಯವಾಗಿರುವುದರಿಂದ ಉಡುಪಿ ಜಿಲ್ಲಾಧಿಕಾರಿಯವರು ಪ್ಲೋಟಿಂಗ್ ಜೆಟ್ಟಿ ನಿರ್ಮಿಸುವ ಬಗ್ಗೆ ವರದಿ ಸಲ್ಲಿಸಿದ್ದರು. ನಂತರ ಪ್ರವಾಸೋದ್ಯಮ ಇಲಾಖೆ ವತಿಯಿಂದ ಲೋಕೋಪಯೋಗಿ ಇಲಾಖೆ ಮೂಲಕ ಸಲ್ಲಿಸಿದ ವಿವರವಾದ ಅಂದಾಜು ಪಟ್ಟಿಯಂತೆ ಉಡುಪಿ ಜಿಲ್ಲೆಯ ಸೈಂಟ್ ಮೇರಿಸ್ ಐಲ್ಯಾಂಡ್ ಬಳಿ 113 ಮೀ. ಉದ್ದದ ಹಾಗೂ 5 ಮೀ ಅಗಲದ ಪೈಲ್ ಅಡಿಪಾಯದಲ್ಲಿ ಪ್ಲೋಟಿಂಗ್ ಜಟ್ಟಿ ನಿರ್ಮಿಸಲು 5.50 ಕೋಟಿ ರೂ. ಮೊತ್ತದ ಯೋಜನೆಗೆ ಅನುಮೋದನೆ ಲಭಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts