More

    ಸರ್ಕಾರದಿಂದ ಜನಪರ ಯೋಜನೆಗಳು ಅನುಷ್ಠಾನ

    ಮದ್ದೂರು: ಕಾಂಗ್ರೆಸ್ ಸರ್ಕಾರ ಕಳೆದ ವಿಧಾನಸಭಾ ಚುನಾವಣಾ ಪೂರ್ವದಲ್ಲಿ ನೀಡಿದ್ದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜತೆಗೆ ಸಬ್ಸಿಡಿ, ಸಹಾಯಧನ, ಪಿಂಚಣಿ ಸೇರಿದಂತೆ ಎಲ್ಲ ಇಲಾಖೆಗಳ ಸೌಲಭ್ಯವನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವಲ್ಲಿ ಯಶಸ್ವಿಯಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

    ಪಟ್ಟಣದ ಪುರಾಣ ಪ್ರಸಿದ್ಧ ಶ್ರೀಹೊಳೆ ಆಂಜನೇಯಸ್ವಾಮಿ ದೇವಾಲಯದ ಬಳಿ 21 ಕೋಟಿ ರೂ. ವೆಚ್ಚದಲ್ಲಿ ಶಿಂಷಾ ನದಿಗೆ ಅಡ್ಡಲಾಗಿ ದೇಗುಲದ ತಡೆಗೋಡೆ ಮತ್ತು ಕೊಳಚೆ ನೀರು ಶುದ್ಧೀಕರಣ ಘಟಕದ ನಿರ್ಮಾಣ ಕಾಮಗಾರಿಗೆ ಗುರುವಾರ ಚಾಲನೆ ನೀಡಿ ಮಾತನಾಡಿದರು.

    ಶಿಂಷಾ ನದಿ ವ್ಯಾಪ್ತಿಯಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ಕೆ.ಎಂ.ಉದಯ್ ಅವರು ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸಿದ್ದರು. ಸರ್ಕಾರ 499 ಲಕ್ಷ ರೂ. ಮಂಜೂರಾತಿ ನೀಡಿದೆ. ಶಾಸಕ ಕೆ.ಎಂ.ಉದಯ್ ಅವರು ಕೋಟ್ಯಂತರ ರೂ. ಅನುದಾನ ತಂದು ಮದ್ದೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಶಾಸಕ ಕೆ.ಎಂ.ಉದಯ್ ಮಾತನಾಡಿ, ಹೊಳೆ ಆಂಜನೇಯ ದೇವಾಲಯದ ಬಳಿ 307 ಲಕ್ಷ ರೂ. ವೆಚ್ಚದಲ್ಲಿ ತಡೆಗೋಡೆ ನಿರ್ಮಿಸಲಾಗುತ್ತಿದೆ. ಪಟ್ಟಣದ ಕೊಳಚೆ ನೀರು ಶುದ್ಧೀಕರಣ ಘಟಕದ ಬಳಿ ಶಿಂಷಾ ನದಿಗೆ ತಡೆಗೋಡೆ ನಿರ್ಮಾಣಕ್ಕೆ 499 ಲಕ್ಷ ರೂ ಮಂಜೂರಾಗಿದೆ ಎಂದು ಹೇಳಿದರು.

    ಹೊಳೆ ಆಂಜನೇಯಸ್ವಾಮಿ ದೇಗುಲವನ್ನು ಪ್ರವಾಸಿ ತಾಣ ಮಾಡಲಾಗುವುದು. ಪ್ರವಾಹ ಬಂದಾಗ ಶಿಂಷಾ ನದಿ ನೀರು ದೇಗುಲ ಮತ್ತು ಸುತ್ತಮುತ್ತಲಿನ ಜಮೀನುಗಳಿಗೆ ನುಗ್ಗಿ ಭಕ್ತರು ಹಾಗೂ ಬೆಳೆಗಳು ನಾಶವಾಗಿ ರೈತರಿಗೆ ತೊಂದರೆಯಾಗುತ್ತಿತ್ತು. ಹೀಗಾಗಿ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಮಾಡಲಾಗಿದೆ ಎಂದರು. ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್, ಪುರಸಭಾ ಸದಸ್ಯರಾದ ಸರ್ವಮಂಗಳಾ, ಸಿದ್ದರಾಜು, ಸಚಿನ್, ಮನೋಜ್ ಮುಖಂಡರಾದ ಫೈರೋಜ್, ಎಂ.ಡಿ.ಮಹಾಲಿಂಗಯ್ಯ, ಯಶವಂತ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts