More

    ಹಾಡಿ ನಿವಾಸಿಗಳೊಂದಿಗೆ ಸಮಾಲೋಚನೆ

    ಸಿದ್ದಾಪುರ: ವಿವಿಧ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿ ತಟ್ಟಳ್ಳಿ ಆದಿವಾಸಿ ಕುಟುಂಬಗಳು ಮತದಾನ ಬಹಿಷ್ಕಾರ ಮಾಡುವ ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ಗುರುವಾರ ಹಾಡಿಗೆ ಭೇಟಿ ನೀಡಿ ಆದಿವಾಸಿಗಳೊಂದಿಗೆ ಸಮಾಲೋಚನೆ ನಡೆಸಿತು.

    ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ನವೀನ್ ಚುನಾವಣೆ ನಡೆದ ನಂತರ ಬೇಡಿಕೆಗಳ ಈಡೇರಿಸುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಮತದಾನ ಬಹಿಷ್ಕಾರದಿಂದ ಹಿಂದೆ ಸರಿದಿರುವುದಾಗಿ ಆದಿವಾಸಿ ಮುಖಂಡರು ತಿಳಿಸಿದ್ದಾರೆ.

    ಆದಿವಾಸಿ ಮುಖಂಡ ಜೆ.ಕೆ.ಅಪ್ಪಾಜಿ ಮಾತನಾಡಿ, ವಿದ್ಯುತ್, ಕುಡಿಯುವ ನೀರು, ರಸ್ತೆ, ಮನೆ ಸೇರಿದಂತೆ ಮೂಲಸೌಕರ್ಯ ವಂಚಿತರಾಗಿ ಹಾಡಿ ನಿವಾಸಿಗಳು ವಾಸಿಸುತ್ತಿದ್ದು, ಬೇಡಿಕೆಯನ್ನು ಕೂಡಲೇ ಈಡೇರಿಸಬೇಕು ಎಂದು ಒತ್ತಾಯಿಸಿದರು.

    ಸಿದ್ದಾಪುರ ಠಾಣಾಧಿಕಾರಿ ರಾಘವೇಂದ್ರ, ಮಾಲ್ದಾರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ್, ಗ್ರಾಮ ಪಂಚಾಯಿತಿ ಸದಸ್ಯೆ ಶೋಭಾ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts