ಬೆಳ್ತಂಗಡಿ: ದ.ಕ ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಮಂಗಳೂರು, ವಿದ್ವತ್ ಪದವಿಪೂರ್ವ ಕಾಲೇಜು ಶಕ್ತಿನಗರ ಗುರುವಾಯನಕೆರೆಯ ಸಹಯೋಗದೊಂದಿಗೆ ಪ್ರೌಢಶಾಲಾ ಮುಖ್ಯಶಿಕ್ಷಕರ ಸಮಾಲೋಚನಾ ಸಭೆ ಗುರುವಾಯನಕೆರೆ ಶಕ್ತಿನಗರ ವಿದ್ವತ್ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ವಿದ್ವತ್ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಶಿಕ್ಷಣ ಇಲಾಖೆಯ ಉಪನಿರ್ದೇಶಕ ವೆಂಕಟೇಶ ಸುಬ್ರಾಯ ಪಟಗಾರ ಅಧ್ಯಕ್ಷತೆ ವಹಿಸಿ, ಮೂಡುಬಿದಿರೆ ವಲಯದ 113 ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಶೈಕ್ಷಣಿಕ ಸಾಲಿನ ಸವಾಲುಗಳ ಕುರಿತು ಹಾಗೂ ಉತ್ತಮ ಫಲಿತಾಂಶ ನೀಡುವ ಕುರಿತು ಮಾಹಿತಿ ನೀಡಿದರು.
ಡಯಟ್ ಉಪನಿರ್ದೇಶಕಿ ರಾಜಲಕ್ಷ್ಮೀ, ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ, ಮೂಡುಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಎಚ್.ಎಸ್, ಜಿಲ್ಲಾ ಶಿಕ್ಷಣಾಧಿಕಾರಿ ಲಕ್ಷ್ಮೀನಾರಾಯಣ, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ವೆಂಕಟೇಶ ತುಳುಪಳೆ, ಕಾಲೇಜಿನ ಕೋಶಾಧಿಕಾರಿ ಎಂ.ಕೆ.ಕಾಶಿನಾಥ್ ಮೊದಲಾದವರಿದ್ದರು. ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ರಾಧಾಕೃಷ್ಣ ಕಾರ್ಯಕ್ರಮ ನಿರೂಪಿಸಿದರು.
ವಿದ್ವತ್ ಕಾಲೇಜಿನ ಶೈಕ್ಷಣಿಕ ನಿರ್ದೇಶಕ ಗಂಗಾಧರ ಇ.ಮಂಡಗಳಲೆ ಪೂರ್ವಭಾವಿಯಾಗಿ 45 ನಿಮಿಷಗಳ ಉನ್ನತ ಶಿಕ್ಷಣಪಥ ಕಾರ್ಯಕ್ರಮ ನಡೆಸಿಕೊಟ್ಟರು. ಕಾಲೇಜಿನ ಪ್ರಾಂಶುಪಾಲ ಅರುಣ್ ಕ್ಯಾಸ್ಟಲಿನೊ ಹಾಗೂ ಆಡಳಿತ ಅಧಿಕಾರಿ ಚಂದ್ರಶೇಖರ್ ಗೌಡ ಕೆ. ಸಹಕರಿಸಿದರು.