More

    ಖರೀದಿಸಿದ ಪ್ರತಿ ವಸ್ತುವಿಗೂ ರಸೀದಿ ಪಡೆಯಬೇಕು

    ಹಾವೇರಿ: ಪ್ರತಿಯೊಬ್ಬರು ಗ್ರಾಹಕರ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ತಿಳಿದುಕೊಳ್ಳಬೇಕು. ಖರೀದಿಸುವ ಪ್ರತಿ ವಸ್ತುವಿಗೆ ರಸೀದಿ ಪಡೆದುಕೊಳ್ಳಬೇಕು. ಖರೀದಿಸಿದ ವಸ್ತುಗಳಲ್ಲಿ ಲೋಪ ಅಥವಾ ಮೋಸ ಆದಲ್ಲಿ ಪರಿಹಾರ ಪಡೆದುಕೊಳ್ಳಲು ಅನುಕೂಲವಾಗುತ್ತದೆ ಎಂದು ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಈಶ್ವರಪ್ಪ ಬಿ.ಎಸ್. ಸಲಹೆ ನೀಡಿದರು.
    ತಾಲೂಕಿನ ಗಳಗನಾಥ ಸರ್ಕಾರಿ ಪ್ರೌಢ ಶಾಲೆಯಲ್ಲಿ ಗುರುವಾರ ಜಿಲ್ಲಾಡಳಿತ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಚೈತನ್ಯ ಗ್ರಾಹಕರ ಮಾಹಿತಿ ಕೇಂದ್ರದ ಸಹಯೋಗದಲ್ಲಿ ಶಾಲಾ ಗ್ರಾಹಕರ ಕ್ಲಬ್ ರಚನೆ ಹಾಗೂ ಗ್ರಾಹಕರ ಹಕ್ಕು ಕಾಯ್ದೆ ಕುರಿತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
    ಪ್ರೌಢಶಾಲೆ ಮುಖ್ಯೋಪಾಧ್ಯಾಯರಾದ ಮುಕ್ತಾದೇವಿ ಹತ್ರಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯೆ ಉಮಾದೇವಿ ಹಿರೇಮಠ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಮಜೀದ್ ಎಸ್.ಎಚ್., ಮಹಾಂತೇಶ ಬಸವನಾಯ್ಕರ್, ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts