More

    ಕಲುಷಿತ ನೀರು ಸೇವನೆ ಘಟನೆ: ತುರ್ತು ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

    ಬೆಂಗಳೂರು: ಮೇ.26 ರಂದು ಬೆಳಗ್ಗೆ ಕಲುಷಿತ ನೀರು ಸೇವಿಸಿ ಓರ್ವ ಬಾಲಕ ಸಾವನ್ನಪ್ಪಿದ್ದು, 30 ಜನ ಅಸ್ವಸ್ಥರಾದ ಘಟನೆ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ನಡೆದಿತ್ತು. ಈ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ರಮಕ್ಕೆ ಸೂಚನೆ ನೀಡಿದ್ದಾರೆ.

    ರಾಯಚೂರು ಜಿಲ್ಲೆಯ ರೇಕಲಮರಡಿ ಬಳಿಕ ಗೊರೆಬಾಳ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥರಾಗಿರುವವರಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು. ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿಗೆ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.

    ಇದನ್ನೂ ಓದಿ: ಹಿಂದೂ ಯುವಕ-ಮುಸ್ಲಿಂ ಯುವತಿ ಊಟಕ್ಕೆ ಹೋಗಿ ಬರುವ ವೇಳೆ ಅಮಾನುಷವಾಗಿ ಹಲ್ಲೆ: ರಕ್ಷಿಸಲು ಬಂದ ದಾರಿಹೋಕರಿಗೆ ಚೂರಿ ಇರಿತ

    ಘಟನೆ ಬಗ್ಗೆ ಮಾಹಿತಿ ದೊರೆಯುತ್ತಿದ್ದಂತೆ ದೂರವಾಣಿ ಮೂಲಕ ಸಿಇಒ ಅವರೊಂದಿಗೆ ಮಾತನಾಡಿ ತರಾಟೆಗೆ ತೆಗೆದುಕೊಂಡ ಮುಖ್ಯಮಂತ್ರಿಗಳು, ಶುದ್ಧ ನೀರು ಪೂರೈಕೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ರಾಯಚೂರು ಜಿಲ್ಲೆಯ ಗ್ರಾಮಗಳಲ್ಲಿ ಕಲುಷಿತ ನೀರು ಕುಡಿದು ಜನ ಅಸ್ವಸ್ಥರಾಗುತ್ತಿರುವ ವರದಿಗಳನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿಗಳು, ಘಟನೆ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ತಿಳಿಸಿದ್ದಾರೆ.

    ಮುಖ್ಯಮಂತ್ರಿಗಳು ಕೊಟ್ಟ ಸೂಚನೆಗಳು:
    ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಸಮಗ್ರ ಪರಿಶೀಲನೆ ನಡೆಸಬೇಕು. ನೀರಿನ ಸ್ಯಾಂಪಲ್ ಗಳನ್ನು ಲ್ಯಾಬ್​ಗೆ ಕಳುಹಿಸಿ ತಕ್ಷಣ ವರದಿ ತರಿಸಿಕೊಳ್ಳಬೇಕು. ವರದಿ ಆಧಾರದಲ್ಲಿ ಗ್ರಾಮಸ್ಥರ ಕೂಲಂಕುಷ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಚಿಕಿತ್ಸೆಗೆ ಕ್ರಮ ವಹಿಸಬೇಕು.

    ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿ, ವಿಷಪೂರಿತ ನೀರಿನ ಮೂಲಗಳನ್ನು ಬಂದ್ ಮಾಡಬೇಕು. ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು. ಎಲ್ಲ ಕ್ರಮಗಳನ್ನೂ ಸಮರ್ಪಕವಾಗಿ ತೆಗೆದುಕೊಂಡು ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಲಾಗಿದೆ.

    ನನ್ನೊಬ್ಬನನ್ನ ಸೋಲಿಸಲು ಹೋಗಿ ಬಿಜೆಪಿ ತಾನೇ ಸೋತಿದೆ; ಜಗದೀಶ್ ಶೆಟ್ಟರ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts