More

    ಡಾ.ಸಿ.ಎನ್. ಮಂಜುನಾಥ್ ಅವರನ್ನೇ ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕರಾಗಿ ಮುಂದುವರಿಸಲು ಆಗ್ರಹ

    ಬೆಂಗಳೂರು: ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ ಅವರನ್ನು ನಿರ್ದೇಶಕರನ್ನಾಗಿ ಮುಂದುವರಿಸುವಂತೆ ಆಗ್ರಹಿಸಿ ಸಂಸ್ಥೆಯ ವೈದ್ಯರು ಹಾಗೂ ಸಿಬ್ಬಂದಿ ವರ್ಗದವರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

    ಪ್ರಸ್ತುತ ಸಂಸ್ಥೆಯ ನಿರ್ದೇಶಕರಾಗಿರುವ ಡಾ. ಸಿ.ಎನ್. ಮಂಜುನಾಥ್ ಅವರ ಸೇವೆ ಜು. 19ಕ್ಕೆ ಅಂತ್ಯಗೊಳ್ಳಲಿದೆ. ರಾಷ್ಟ್ರೀಯ ವೈದ್ಯಕೀಯ ಪರಿಷತ್ತು (ನ್ಯಾಷನಲ್ ಮೆಡಿಕಲ್ ಕೌನ್ಸಿಲ್) ಪ್ರಕಾರ ಯಾವುದೇ ಸಂಸ್ಥೆಯ ಮುಖ್ಯಸ್ಥರು 70 ವರ್ಷಗಳವರೆಗೆ ಸೇವೆ ನಿರ್ವಹಿಸಬಹುದು. ಅದರಂತೆ ಪ್ರಸ್ತುತ ಡಾ.ಸಿ.ಎನ್. ಮಂಜುನಾಥ್ ಅವರಿಗೆ 65 ವರ್ಷ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಅವರಿಗೆ ಇನ್ನೂ ಕೆಲ ವರ್ಷಗಳವರೆಗೆ ಆಡಳಿತ ನಿರ್ವಹಿಸುವ ನಾಯಕತ್ವ ಗುಣವಿರುವುದನ್ನು ಪರಿಗಣಿಸಿ ಅವರನ್ನು ನಿರ್ದೇಶಕ ಸ್ಥಾನದಲ್ಲಿ ಮುಂದುವರಿಸಬೇಕು ಎಂದು ಮನವಿ ಮಾಡಿದ್ದಾರೆ. ಈ ಸಂಬಂಧ ರೋಗಿಗಳಿಗೆ ಚಿಕಿತ್ಸೆಯಲ್ಲಿ ಯಾವುದೇ ರೀತಿಯ ತೊಂದರೆ ಆಗದಂತೆ, ಮಂಗಳವಾರ ಒಪಿಡಿ ಆರಂಭವಾಗುವ ಮೊದಲು ಸಿಬ್ಬಂದಿ ಪ್ರತಿಭಟನೆ ನಡೆಸಲಿದ್ದಾರೆ.

    ಕರುಣೆ, ಶಿಸ್ತು, ಮಾರ್ಗದರ್ಶನ, ಸೂಕ್ತ ನಿರ್ದೇಶನಗಳ ಮೂಲಕ ಮುಳುಗುತ್ತಿದ್ದ ಸಂಸ್ಥೆಯನ್ನು ಡಾ. ಸಿ.ಎನ್. ಮಂಜುನಾಥ್ ಮೇಲೆತ್ತಿ ಮುನ್ನಡೆಸುತ್ತಿದ್ದಾರೆ. ಅವರು ಅಧಿಕಾರ ವಹಿಸಿಕೊಂಡ ನಂತರ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಕೆ ಸೇರಿ ಗುಣಮಟ್ಟದ ಹೃದಯ ಸೇವೆ ನೀಡುವಲ್ಲಿ ದೇಶ ವಿದೇಶಗಳ ರೋಗಿಗಳನ್ನು ಆಕರ್ಷಿಸಿದೆ. 2015ರಲ್ಲಿ ಎನ್‌ಎಬಿಎಚ್ (ನ್ಯಾಷನಲ್ ಅಕ್ರಿಡೇಷನ್ ಬೋರ್ಡ್ ಫಾರ್ ಹಾಸ್ಪೆಟಲ್ ಆ್ಯಂಡ್ ಹೆಲ್ತ್‌ಕೇರ್ ಪ್ರೊವೈಡರ್ಸ್‌) ಮಾನ್ಯತೆ ಪಡೆದುಕೊಂಡ ಏಕೈಕ ಸರ್ಕಾರಿ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಸಂಸ್ಥೆ ಪಾತ್ರವಾಗಿದೆ. ‘ಟ್ರೀಟ್ ಮೆಂಟ್ ಫಸ್ಟ್ ಪೇಮೆಂಟ್ ನೆಕ್ಸ್ಟ್​​’ ಎಂಬ ಘೋಷವಾಕ್ಯದೊಂದಿಗೆ ದಕ್ಷತೆ, ಪ್ರಾಮಾಣಿಕತೆ, ನಿಷ್ಠೆ, ಕ್ರಿಯಾಶೀಲತೆ, ಸೌಜನ್ಯಶೀಲತೆಯೊಂದಿಗೆ ಸಂಸ್ಥೆಯನ್ನು ಮುನ್ನಡೆಸಿಕೊಂಡು ಬರುತ್ತಿದ್ದಾರೆ.
    ಭಾರತದ ಪ್ರತಿಷ್ಠಿತ 10 ಹೃದ್ರೋಗ ಆಸ್ಪತ್ರೆಗಳ ಪಟ್ಟಿಯಲ್ಲಿ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ಮೊದಲ ಸ್ಥಾನದಲ್ಲಿದ್ದು, ಆಂಜಿಯೋಪ್ಲಾಸ್ಟಿ, ವ್ಯಾಲ್‌ವಿಲೋಪ್ಲಾಸ್ಟಿ ಮತ್ತು ಸ್ಟಂಟ್ ಪ್ರಕ್ರಿಯೆಯಲ್ಲಿ ವಿಶ್ವವಿಖ್ಯಾತಿ ಪಡೆದಿದೆ.

    ಸದ್ಯ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಜಯದೇವ ಆಸ್ಪತ್ರೆ ಶಾಖೆ ಕಾರ್ಯಾರಂಭಕ್ಕೆ ಕೆಲಸ ನಡೆಯುತ್ತಿದೆ. ಗುಲ್ಬರ್ಗಾದಲ್ಲೂ ಆಸ್ಪತ್ರೆ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಪೂರ್ಣಗೊಳ್ಳಬೇಕಿದೆ. ಅಲ್ಲದೆ ಬಜೆಟ್​​ನಲ್ಲಿ ಮಂಡಿಸಿರುವಂತೆ, ಹುಬ್ಬಳ್ಳಿಯಲ್ಲೂ ಸುಸಜ್ಜಿತ ಆಸ್ಪತ್ರೆ ನಿರ್ಮಾಣವಾಗಬೇಕಿದೆ. ಈ ಎಲ್ಲಾ ಕಾರ್ಯಗಳು ಯಶಸ್ವಿಯಾಗಿ ಪೂರ್ಣಗೊಳ್ಳಬೇಕಾದರೆ ಡಾ.ಸಿ.ಎನ್. ಮಂಜುನಾಥ್ ಅವರ ಸೇವೆ ಅವಶ್ಯವಾಗಿದೆ. ಹಾಗಾಗಿ ಸಂಸ್ಥೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ಅವರ ಅವಧಿಯಲ್ಲಿ ಸಂಸ್ಥೆಯಲ್ಲಿ ಆಗಿರುವ ಬೆಳವಣಿಗೆಗಳನ್ನು ಪರಿಗಣಿಸಿ ಸಂಸ್ಥೆಯ ನಿರ್ದೇಶಕರನ್ನಾಗಿ ಮುಂದುವರಿಸುವಂತೆ ಕೋರಿದ್ದಾರೆ.

    ಇಷ್ಟಪಟ್ಟು ಪುರುಷನ ಜತೆಗಿದ್ದು, ಸಂಬಂಧ ಕೆಟ್ಟಾಗ ರೇಪ್​ ಆಯ್ತು ಅನ್ನೋ ಹಾಗಿಲ್ಲ: ಸುಪ್ರೀಂ ಕೋರ್ಟ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts