More

    ಕಾಶ್ಮೀರದಲ್ಲಿ ಮುಂದುವರಿದ ಸೇನಾ ಕಾರ್ಯಾಚರಣೆ: ಓರ್ವ ಉಗ್ರನ ಹತ್ಯೆ!

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್​ ಜಿಲ್ಲೆಯಲ್ಲಿ ಇಂದು ಭಾರತೀಯ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ದಾಳಿಯಲ್ಲಿ ಭಾರತೀಯ ಸೇನಾಪಡೆ ಎನ್​ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹೊಡೆದುರುಳಿಸಿದೆ.

    ಇದನ್ನೂ ಓದಿ: ಭಾರತ ಪ್ರವಾಸ ಕೈಗೊಂಡ ಮಾಲ್ಡೀವ್ಸ್​ ವಿದೇಶಾಂಗ ಸಚಿವ ಮೂಸಾ ಜಮೀರ್!

    ನಿನ್ನೆಯಷ್ಟೇ ಅಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರನ್ನು ಕೊಲ್ಲಲಾಗಿತ್ತು. ಇಂದು ಮತ್ತೋರ್ವ ಉಗ್ರನನ್ನು ಎನ್​ಕೌಂಟರ್ ಮಾಡಲಾಗಿದೆ. ಸೋಮವಾರ ಸಂಜೆ ಆರಂಭವಾದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯು ಇನ್ನೂ ಮುಂದುವರೆದಿದೆ.

    ಕುಲ್ಗಾಮ್​ ಜಿಲ್ಲೆಯ ರೆಡ್ವಾನಿ ಪ್ರದೇಶದಲ್ಲಿ ಎನ್‌ಕೌಂಟರ್ ಸೈಟ್‌ನ ಸಮೀಪವಿರುವ ಮನೆಗಳ ಹುಡುಕಾಟದ ಸಮಯದಲ್ಲಿ, ಅಲ್ಲಿ ಅಡಗಿದ್ದ ಭಯೋತ್ಪಾದಕನೊಂದಿಗೆ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ವೇಳೆ ಹೆಚ್ಚಿನ ಪಡೆಗಳು ಸ್ಥಳಕ್ಕೆ ಧಾವಿಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ.

    ಸೋಮವಾರ ರಾತ್ರಿ (ಮೇ 6) ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದ ನಂತರ ಈ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಮಂಗಳವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೊಯ್ಬಾದ ವಾಂಟೆಡ್ ಭಯೋತ್ಪಾದಕ ಬಸಿತ್ ದಾರ್ ಸೇರಿದಂತೆ ಇಬ್ಬರು ಉಗ್ರರು ಹತರಾಗಿದ್ದಾರೆ.

    ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಸಿಬಿಐ ತನಿಖೆಗೆ ಕೊಡುವ ಅಗತ್ಯವಿಲ್ಲ ಎಂದ ಪರಮೇಶ್ವರ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts