More

    ಪುಂಡಾನೆ ಸೆರೆಗೆ ಮುಂದುವರಿದ ಕಾರ್ಯಾಚರಣೆ

    ಎಚ್.ಡಿ.ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಮಾಸ್ತಿಗುಡಿ ಪುನರ್ವಸತಿ ಕೇಂದ್ರದ ಸಮೀಪ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿ, ಸಾಕಾನೆಗಳಿಂದ ಕಾರ್ಯಾಚರಣೆ ಮುಂದುವರಿದಿದೆ.

    ಮಾಸ್ತಿಗುಡಿ ಪುನರ್ವಸತಿ ಕೇಂದ್ರದ ಸಮೀಪ 10 ದಿನಗಳ ಹಿಂದೆ ಕಾಡಾನೆ ತುಳಿತಕ್ಕೆ ಆದಿವಾಸಿವೊಬ್ಬರು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಆದಿವಾಸಿಗಳು ಉಪಟಳ ನೀಡುವ ಕಾಡಾನೆಯನ್ನು ಸೆರೆ ಹಿಡಿಯುವಂತೆ ಪಟ್ಟು ಹಿಡಿದಿದ್ದರು. ಈ ಹಿನ್ನೆಲೆಯಲ್ಲಿ ದಸರಾ ಆನೆಗಳಾದ ಅಭಿಮನ್ಯು, ಮಹೇಂದ್ರ, ಭೀಮ ಸೇರಿದಂತೆ ಸಾಕಾನೆಗಳಾದ ಅಶ್ವತ್ಥಾಮ, ಹರ್ಷ, ಮಹಾರಾಷ್ಟ್ರದ ಭೀಮನ ಸಹಾಯದೊಂದಿಗೆ ಡಿಎಫ್‌ಓ ಹರ್ಷಕುಮಾರ್ ಚಿಕ್ಕನರಗುಂದ ಮಾರ್ಗದರ್ಶನದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದ್ದಾರೆ.

    ಕಾರ್ಯಾಚರಣೆ ಮೂಲಕ ಈಗಾಗಲೇ ಎರಡು ಕಾಡಾನೆಗಳನ್ನು ಸೆರೆ ಹಿಡಿಯಲಾಗಿದೆ. ಇದರಲ್ಲಿ ಒಂದು ಆನೆಯನ್ನು ಮತ್ತಿಗೋಡು ಆನೆ ಶಿಬಿರಕ್ಕೆ ಪಳಗಿಸಲು ಬಿಡಲಾಗಿದೆ. ಮತ್ತೊಂದು ಆನೆಯನ್ನು ಎಚ್.ಡಿ. ಕೋಟೆ ತಾಲೂಕಿನ ಬಳ್ಳೆ ಆನೆ ಶಿಬಿರಕ್ಕೆ ಸ್ಥಳಂತರಿಸಲಾಗಿದೆ. ಅಲ್ಲದೆ ಮತ್ತೊಂದು ಪುಂಡಾನೆ ಸೆರೆಗೆ ಕಾರ್ಯಾಚರಣೆ ಮುಂದುವರಿದಿದೆ.

    ಕಾರ್ಯಾಚರಣೆಯಲ್ಲಿ ಸಹಾಯಕ ವಲಯ ಅರಣ್ಯ ಅಧಿಕಾರಿ ಚಂದ್ರೇಶ್, ಪಶುವೈದ್ಯ ಡಾ.ರಮೇಶ್, ಅರಣ್ಯ ಸಿಬ್ಬಂದಿ ಹರೀಶ್, ಅರಣ್ಯ ಗಸ್ತು ಪಾಲಕರು ಇದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts