More

    ಕರಾವಳಿಯಾಧ್ಯಂತ ಮುಂದುವರಿದ ಬಿಸಿಲು

    ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಗುರುವಾರ ಬೆಳಗ್ಗೆ ಮೋಡಕವಿದ ವಾತಾವರಣವಿದ್ದರೂ ಹಗಲು ಹೊತ್ತು ಇಡೀ ದಿನ ಬಿಸಿಲು ಕಂಡುಬಂದಿದೆ. ಶುಕ್ರವಾರವೂ ರಾಜ್ಯದ ಕರಾವಳಿ ಭಾಗಗಳಲ್ಲಿಮೋಡದ ವಾತಾವರಣ ಇರಲಿದೆ.

    ಮಂಗಳೂರಿನಲ್ಲಿ ಗುರುವಾರ ಗರಿಷ್ಠ 33.9 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ದ.ಕ., ಉಡುಪಿ ಹಾಗೂ ಉತ್ತರ ಕನ್ನಡ ಕರಾವಳಿ ಜಿಲ್ಲೆಗಳ ದಿನದ ಸರಾಸರಿ ತಾಪಮಾನ 35.3 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 23.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಏ.5ರಿಂದ 6ರ ವರೆಗೆ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಏ. 7ರಂದು ಮೋಡ ಚದುರಿದ ವಾತಾವರಣ, ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ ಎಂದು ಎಂದು ಭಾರತೀಯ ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.

    ಗುರುವಾರ ರಾತ್ರಿ ಮಳೆ ಕಾಡು ಹಾಗು ಪಶ್ಚಿಮಘಟ್ಟದ ಹಲವಡೆ ಹೆಚ್ಚಿನ ಪ್ರಮಾಣದ ಮೋಡಕವಿದ ವಾತಾವರಣ ಕಂಡುಬಂದಿದೆ. ಶುಕ್ರವಾರ ಕರಾವಳಿಯ ಗಡಿ ಜಿಲ್ಲೆಗಳಾದ ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮೈಸೂರು ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಎಪ್ರಿಲ್ 6 ರಿಂದ ಕೊಡಗು ಹಾಗೂ ಎಪ್ರಿಲ್ 7ರಿಂದ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಾಗೂ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts