ಕ್ಷೇತ್ರದ ಅಭಿವೃದ್ಧಿಗೆ ಅವಿರತ ಶ್ರಮ

blank

ಸಾಗರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಕನಸು ಹೊತ್ತು ಸಂಸದ ಬಿ.ವೈ.ರಾಘವೇಂದ್ರ ಅವಿರತವಾಗಿ ಶ್ರಮಿಸುತ್ತಿದ್ದಾರೆ. ಇದರಲ್ಲಿ ಶೈಕ್ಷಣಿಕ ಕ್ಷೇತ್ರವೂ ಒಂದು ಎಂದು ದಿಶಾ ಸಮಿತಿ ಸದಸ್ಯ ಮಲ್ಲಿಕಾರ್ಜುನ ಹಕ್ರೆ ಹೇಳಿದರು.
ಸಾಗರದ ನೆಹರು ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಯೋಜನೆಯಡಿ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ವಿತರಿಸಿ ಮಾತನಾಡಿದರು.
ದೇಶದಲ್ಲಿ ಅನುದಾನ ಸದ್ಬಳಕೆ ಮಾಡಿಕೊಳ್ಳುವ ಸಂಸದರ ಪೈಕಿ ಎರಡನೇ ಸ್ಥಾನದಲ್ಲಿರುವ ಬಿ.ವೈ.ರಾಘವೇಂದ್ರ ಅವರು ಸರ್ಕಾರಿ ಶಾಲೆ ಮಕ್ಕಳ ಶೈಕ್ಷಣಿಕ ಚಟುವಟಿಕೆಗೆ ಅನುಕೂಲ ಕಲ್ಪಿಸಲು ಒಂದು ಲಕ್ಷಕ್ಕೂ ಅಧಿಕ ಬ್ಯಾಗ್‌ಗಳನ್ನು ಯೋಜನೆಯಡಿ ಕಲ್ಪಿಸಿಕೊಟ್ಟಿದ್ದಾರೆ. ಅಭಿವೃದ್ಧಿ ಜತೆಗೆ ಶೈಕ್ಷಣಿಕ ಕ್ಷೇತ್ರಕ್ಕೂ ಹೆಚ್ಚು ಕಾಳಜಿ ತೋರಿಸುತ್ತಿದ್ದಾರೆ ಎಂದರು.
ಶರಾವತಿ ಹಿನ್ನೀರಿನ ಪ್ರದೇಶಕ್ಕೆ ಸುಮಾರು 450 ಕೋಟಿ ರೂ.ಗೂ ಅಧಿಕ ವೆಚ್ಚದಲ್ಲಿ ತುಮರಿ ಸೇತುವೆ ಕಾಮಗಾರಿ ನಡೆಯುತ್ತಿದ್ದು ಅಂತಿಮ ಹಂತಕ್ಕೆ ಬಂದಿದೆ. ಸಾಗರ ಎಸ್.ಎನ್.ವೃತ್ತದಿಂದ ಮರಕುಟಿಕದವರೆಗೆ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್ ಮಾತನಾಡಿ, ಸದಾ ಅಭಿವೃದ್ಧಿ ಬಗ್ಗೆ ಆಲೋಚನೆ ಮಾಡುವ ಸಂಸದ ರಾಘವೇಂದ್ರ ಅವರು ಮಕ್ಕಳ ಶೈಕ್ಷಣಿಕ ಚಟುವಟಿಕೆ ಬಗ್ಗೆಯೂ ಗಮನ ಹರಿಸಿದ್ದಾರೆ. ರಾಜ್ಯ ಸರ್ಕಾರದಿಂದ ಶಿಕ್ಷಣಕ್ಕೆ ಅನೇಕ ಯೋಜನೆಗಳಿವೆ. ಆದರೆ ಸ್ಕೂಲ್ ಬ್ಯಾಗ್ ಕೊರತೆ ಮನಗಂಡು ಅದನ್ನು ಪೂರೈಸುವ ಕೆಲಸ ಮಾಡುತ್ತಿದ್ದಾರೆ. ಮಕ್ಕಳು ಸೌಲಭ್ಯ ಸದ್ಬಳಕೆ ಮಾಡಿಕೊಂಡು ಉತ್ತಮ ಶಿಕ್ಷಣ ಪಡೆಯಬೇಕು ಎಂದರು.
ನಗರಸಭೆ ಉಪಾಧ್ಯಕ್ಷೆ ಸವಿತಾ ವಾಸು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸುಂದರೇಶ್, ಶಿಕ್ಷಣ ಇಲಾಖೆಯ ಹನುಮಂತಪ್ಪ, ಭುವನೇಶ್ವರಿ ಹೆಗಡೆ ಇತರರಿದ್ದರು.

Share This Article

ಬೇಸಿಗೆಯಲ್ಲಿ ಈ 5 ಪದಾರ್ಥಗಳೊಂದಿಗೆ ಅಪ್ಪಿ ತಪ್ಪಿಯೂ ಮೊಸರು ತಿನ್ನಬೇಡಿ! | Yogurt

Yogurt : ಬೇಸಿಗೆಯಲ್ಲಿ, ಮೊಸರು ದೇಹವನ್ನು ತಂಪಾಗಿಸಲು ಸಹಾಯ ಮಾಡುತ್ತದೆ. ಆದರೆ, ಮೊಸರಿನೊಂದಿಗೆ ಅಥವಾ ಅದರ…

ಬಸ್ಸು ಅಥವಾ ಕಾರಿನಲ್ಲಿ ಪ್ರಯಾಣಿಸುವಾಗ ವಾಂತಿ ಬರೊದೇಕೆ ಗೊತ್ತೆ!; ತಡೆಗಟ್ಟೊದೇಗೆ? ಇಲ್ಲಿದೆ ಉಪಯುಕ್ತ ಮಾಹಿತಿ | Vomit

Vomit : ಕೆಲವರಿಗೆ ಬಸ್​ ಮತ್ತು ಕಾರಿನಲ್ಲಿ ಪ್ರಯಾಣ ಮಾಬೇಕಾದರೆ ಸಲ್ಪ ದೂರು ಪ್ರಯಾಣಿಸಿದ ಬಳಿಕ…

ನಕಲಿ vs ಅಸಲಿ ಕಲ್ಲಂಗಡಿ ಹಣ್ಣು: ಪತ್ತೆಹಚ್ಚುವುದು ಹೇಗೆ? ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ… Watermelon

Watermelon : ಎಲ್ಲಡೆ ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸುಡುವ ಬಿಸಿಲಿನಿಂದಾಗಿ…