ಹುಕ್ಕೇರಿ: ಪಟ್ಟಣದ ಪುರಸಭೆಗೆ ಎರಡು ಬಾರಿ ಅಧ್ಯಕ್ಷರಾಗಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡ ಜಯಗೌಡ ಪಾಟೀಲ ಅವರನ್ನು ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ಸೂಕ್ತ ಎಂದು ಯುವ ಮುಖಂಡ ಬಸವಪ್ರಸಾದ ಜೊಲ್ಲೆ ಹೇಳಿದರು.
ಪಟ್ಟಣದ ಪಾಟೀಲ ಗಲ್ಲಿಯಲ್ಲಿರುವ ಜಯಗೌಡ ಪಾಟೀಲ ಅವರ ಮನೆಯಲ್ಲಿ ಮಂಗಳವಾರ ಸನ್ಮಾನಿಸಿ ಮಾತನಾಡಿ, ತಾಲೂಕಿನ ಗ್ರಾಮೀಣ ಪ್ರದೇಶದ ತೋಟಪಟ್ಟಿ ನಿವಾಸಿಗಳಿಗೆ ನಿರಂತರ ವಿದ್ಯುತ್ ಸರಬರಾಜು ಒದಗಿಸಬೇಕು. ಜತೆಗೆ ಮತ್ತಿತರ ಸಮಸ್ಯೆ ಪರಿಹರಿಸುವ ಕಾರ್ಯ ಮಾಡಬೇಕೆಂದು ನೂತನ ಅಧ್ಯಕ್ಷರಲ್ಲಿ ವಿನಂತಿಸಿಕೊಂಡರು. ವಿದ್ಯುತ್ ಸಹಕಾರಿ ಸಂಘದ ನೂತನ ಅಧ್ಯಕ್ಷ ಜಯಗೌಡ ಪಾಟೀಲ ಮಾತನಾಡಿ, ಜೊಲ್ಲೆ ಮತ್ತು ಜಾರಕಿಹೊಳಿ ಕುಟುಂಬದ ನೆರವಿನಿಂದ ಸಂಘದ ಗ್ರಾಹಕರ ಸಮಸ್ಯೆ ಪರಿಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ. ಇದಕ್ಕೆ ಜನರು ಮತ್ತು ಗ್ರಾಹಕರ ಸಹಕಾರ ಅವಶ್ಯ ಎಂದರು.
ಪಿಕಾರ್ಡ್ ಬ್ಯಾಂಕ್ ನಿರ್ದೇಶಕ ಪರಗೌಡ ಪಾಟೀಲ, ವಿದ್ಯುತ್ ಸಹಕಾರಿ ಸಂಘದ ನಿರ್ದೇಶಕರಾದ ಶಶಿರಾಜ ಪಾಟೀಲ, ರವೀಂದ್ರ ಹಿಡಕಲ್, ಹುಕ್ಕೇರಿ ಪಿಕೆಪಿಎಸ್ ಉಪಾಧ್ಯಕ್ಷ ಗಿರೀಶ ಪಾಟೀಲ, ಮುಖಂಡರಾದ ಮಹಾವೀರ ಬಾಗಿ, ಸಂಜು ಬಸ್ತವಾಡ, ಚಿದಾನಂದ ಕಿಲ್ಲೇದಾರ, ಅಜ್ಜಪ್ಪ ಚೌಗಲಾ, ನಿಸ್ಸಾರ್ ನದ್ಾ, ಶಹನವಾಜ್ ನದ್ಾ ಇತರರಿದ್ದರು.