More

    ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ; ತನಿಖೆ ತೀವ್ರ, ಕುಟುಂಬಸ್ಥರಿಂದ ಮಾಹಿತಿ ಸಂಗ್ರಹ..

    ಬೆಳಗಾವಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಶನಿವಾರ ತನಿಖಾ ತಂಡದ ಪೊಲೀಸರು ಬೆಳಗಾವಿ ತಾಲೂಕಿನ ಬಡಸ ಕೆ.ಎಚ್. ಗ್ರಾಮದಲ್ಲಿರುವ ಅವರ ಮನೆಗೆ ಭೇಟಿ ನೀಡಿ ಕುಟುಂಬದವರಿಂದ ಮಾಹಿತಿ ಸಂಗ್ರಹಿಸಿದರು.

    ಹಿಂಡಲಗಾ ಗ್ರಾಮ ಪಂಚಾಯತ್​ ವ್ಯಾಪ್ತಿಯಲ್ಲಿ ಮೃತ ಸಂತೋಷ ಪಾಟೀಲ ಕೈಗೊಂಡಿದ್ದರು ಎನ್ನಲಾದ ರಸ್ತೆ ಸೇರಿ ವಿವಿಧ ಕಾಮಗಾರಿಗಳ ಸ್ಥಳ ಪರಿಶೀಲಿಸಿ, ವಿವರ ಸಂಗ್ರಹಿಸಿದ್ದಾರೆ. ತನಿಖಾ ತಂಡದಲ್ಲಿ ಸಿಪಿಐ ಶರಣಗೌಡ ಮತ್ತು ನಾಲ್ವರು ಸಿಬ್ಬಂದಿ, ಹಿರೇಬಾಗೇವಾಡಿ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿ ತಂಡದಲ್ಲಿರುವ ಬಗ್ಗೆ ತಿಳಿದುಬಂದಿದೆ.

    ಪ್ರಕರಣದಲ್ಲಿ ತಾಂತ್ರಿಕ ತನಿಖೆ ಮಹತ್ವದ ಪಾತ್ರ ವಹಿಸಲಿದ್ದು, ಮೊಬೈಲ್ ಫೋನ್​ ಕರೆಗಳ ಪರಿಶೀಲನೆ, ವಾಟ್ಸ್​ಆ್ಯಪ್​ ಸಂದೇಶ ಕಳುಹಿಸಿರುವುದು, ವಾಟ್ಸ್​ಆ್ಯಪ್​ ಸಂದೇಶಗಳನ್ನು ಕನ್ನಡದಲ್ಲಿ ಮಾಡುತ್ತಿರುವುದು, ಯಾರೆಲ್ಲರ ಜತೆ ನಿರಂತರ ಸಂಪರ್ಕ ಇಟ್ಟುಕೊಂಡಿದ್ದರು, ಹಣಕಾಸಿನ ವಹಿವಾಟು ಕುರಿತು ಆಳವಾದ ತನಿಖೆ ನಡೆಯುತ್ತಿದೆ. ಹಿಂಡಲಗಾ ಗ್ರಾಮ ಪಂಚಾಯತ್ ಅಧ್ಯಕ್ಷ, ಅಧಿಕಾರಿಗಳನ್ನು ವಿಚಾರಣೆ ನಡೆಸುವ ಸಾಧ್ಯತೆ ಇದೆ ಎಂಬ ಮಾಹಿತಿ ತಿಳಿದು ಬಂದಿದೆ.

    ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ; ತನಿಖೆ ತೀವ್ರ, ಕುಟುಂಬಸ್ಥರಿಂದ ಮಾಹಿತಿ ಸಂಗ್ರಹ..
    ಸಂತೋಷ್ ಪಾಟೀಲ್ ಮನೆಯಲ್ಲಿ ತನಿಖಾ ತಂಡದಿಂದ ಮಾಹಿತಿ ಸಂಗ್ರಹ

    ಬಾಲಿವುಡ್​ ಮೇಲೆ ಅಣುಬಾಂಬ್​!; ನಿರ್ದೇಶಕ ರಾಮ್​ಗೋಪಾಲ್​ ವರ್ಮಾ ಹೀಗಂದಿದ್ದೇಕೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts