More

    ಸಂತೋಷ್ ಪಾಟೀಲ್ ಪ್ರಕರಣಕ್ಕೆ ಮತ್ತೊಂದು‌ ಬಿಗ್ ಟ್ವಿಸ್ಟ್!

    ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು‌ ಬಿಗ್ ಟ್ವಿಸ್ಟ್ ಹೊರ ಬಿದ್ದಿದೆ.

    ಜಿಲ್ಲಾ ಪಂಚಾಯಿತಿಯಿಂದ ನೀಡಿದ್ದಾರೆ ಎನ್ನಲಾದ ಅನುಮತಿ ಪತ್ರ ನಕಲು ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ತಿಳಿಸಿದೆ. ನಕಲು ಮಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧೀ‌ನ ಕಾರ್ಯದರ್ಶಿ ರಮೇಶ್ ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ.

    ಬೆಳಗಾವಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಆಶಾ ಐಹೊಳೆ ಕಾಮಗಾರಿ ಮಾಡಲು ಅನುಮತಿ ನೀಡಿದ್ದಾರೆ ಎನ್ನಲಾದ ಪತ್ರ ವೈರಲ್ ಆಗಿತ್ತು. ಈ ಪತ್ರದ ಅಧಾರದಲ್ಲಿ ಸಂತೋಷ್ ಕಾಮಾಗಾರಿಗಳನ್ನ ಮಾಡಿಸಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದವು.

    ಆದರೆ ಈಗ ಗ್ರಾಮೀಣಾಭಿವೃದ್ಧಿ ಇಲಾಖೆ ಈ ಪತ್ರ ನಕಲು ಎಂದು ವಿಧಾನಸೌಧ ಠಾಣೆಗೆ ದೂರು ನೀಡಿದೆ. ಸದ್ಯ ವಿಧಾನಸೌಧ ಠಾಣೆಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ದೂರು ದಾಖಲು ಮಾಡಲಾಗಿದೆ. ಎಫ್​​ಐಆರ್ ದಾಖಲು ಮಾಡಿರುವ ಪೊಲೀಸರು ನಕಲು ಮಾಡಿದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

    ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ; ತನಿಖೆ ತೀವ್ರ, ಕುಟುಂಬಸ್ಥರಿಂದ ಮಾಹಿತಿ ಸಂಗ್ರಹ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts