More

    ಇಂದು ಗುತ್ತಿಗೆದಾರರ ಸಭೆ; ಸರ್ಕಾರಕ್ಕೆ ಮತ್ತೊಂದು ತಲೆನೋವು ಎದುರಾಗಲಿದೆಯಾ?

    ಬೆಂಗಳೂರು: ಹಿಂದೆ ಬಿಜೆಪಿ ಸರ್ಕಾರದಲ್ಲಿ 40% ಕಮಿಷನ್ ಬಗ್ಗೆ ಗುತ್ತಿಗೆದಾರರ ಸಂಘ ಆರೋಪಿಸಿತ್ತು. ಈಗ ರಾಜ್ಯ ಗುತ್ತಿಗೆದಾರರ ಸಂಘ ಮತ್ತೊಂದು ಮಹತ್ವದ ಸುದ್ದಿಗೋಷ್ಟಿ ನಡೆಸಲು ಮುಂದಾಗಿದೆ. ಇಂದು ಆ ಸುದ್ದಿಗೋಷ್ಟಿ ನಡೆಯಲಿದ್ದು ಎಲ್ಲರಲ್ಲೂ ಕುತೂಹಲ ಮೂಡಿಸಿದೆ. ಈಗಾಗಲೇ ಪಂಚಮಸಾಲಿ ಸಮುದಾಯಕ್ಕೆ 2A ಪ್ರವರ್ಗದ ಅಡಿಯಲ್ಲಿ ಮೀಸಲಾತಿ ನೀಡುವ ಬಗ್ಗೆ ಇಕ್ಕಟ್ಟಿನಲ್ಲಿ ರಾಜ್ಯ ಸರ್ಕಾರ ಸಿಲುಕಿದ್ದು, ಈ ಹಿನ್ನೆಲೆಯಲ್ಲಿ ಇಂದು ನಡೆಯಲಿರುವ ರಾಜ್ಯ ಗುತ್ತಿಗೆದಾರರ ಸಂಘದ ಸುದ್ದಿಗೋಷ್ಟಿ ಭಾರೀ ಮಹತ್ವ ಪಡೆದಿದೆ.

    ನಗರದ ಚಾಮರಾಜಪೇಟೆಯಲ್ಲಿನ ಕೇಂದ್ರ ಕಚೇರಿಯಲ್ಲಿ ಇಂದು ಮಧ್ಯಾಹ್ನ 12ಕ್ಕೆ ಸುದ್ದಿಗೋಷ್ಟಿ ನಡೆಯಲಿದ್ದು ಸುದ್ದಿಗೋಷ್ಟಿಯಲ್ಲಿ ರಾಜ್ಯದ ಅಷ್ಟೂ ಜಿಲ್ಲೆಗಳ ಅಧ್ಯಕ್ಷರು ಭಾಗಿ ಆಗಲಿದ್ದಾರೆ ಎನ್ನಲಾಗಿದೆ. ರಾಜ್ಯ ಗುತ್ತಿಗೆದಾರರ ಸಂಘದ ಕೆಂಪಣ್ಣ ನೇತೃತ್ವದಲ್ಲಿ ಈ ಸುದ್ದಿಗೋಷ್ಟಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಾಡಿರಬಹುದಾದ ಅಕ್ರಮಗಳ ಮಾಹಿತಿ/ ದಾಖಲೆಯನ್ನು ಈ ಸುದ್ದಿಗೋಷ್ಟಿಯಲ್ಲಿ ಬಿಡುಗಡೆ ಮಾಡಲಿದ್ದಾರಾ ಎನ್ನುವ ಪ್ರಶ್ನೆ ಕೂಡ ಎದ್ದಿದೆ. ಈಗ ಚುನಾವಣೆ ಹತ್ತಿರ ಬರುತ್ತಿದ್ದು ಈ ಸಂದರ್ಭದಲ್ಲಿ ಸರ್ಕಾರಕ್ಕೆ ಈ ಸುದ್ದಿಗೋಷ್ಟಿ ಮುಜುಗರ ಉಂಟು ಮಾಡುತ್ತಾ ಎನ್ನುವ ಪ್ರಶ್ನೆಯೂ ಎದ್ದಿದೆ.

    ಈಗಾಗಲೇ ಸರ್ಕಾರದಿಂದ ಸುಮಾರು 20 ಸಾವಿರ ಕೋಟಿ ಬಿಲ್ ಬಾಕಿ ಇರುವ ಹಿನ್ನೆಲೆಯಲ್ಲಿ ಈ ಸುದ್ದಿಗೋಷ್ಟಿಯನ್ನು ಕರೆದಿರುವ ಸಾಧದ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ. ‘ಕಳೆದ ಬಾರಿಯ ಸರ್ಕಾರ ನೀಡಿದ್ದ ಭರವಸೆ ಇನ್ನೂ ಭರವಸೆಯಾಗಿ ಉಳಿದಿದೆ. ಬಿಲ್ ವಿಚಾರದಲ್ಲಿ ಕೊಟ್ಟ ಮಾತಿನಂತೆ ನಡೆಸಿಕೊಂಡಿಲ್ಲ. ಬಾಕಿ ಮೊತ್ತದಲ್ಲಿ ಒಂದು ರೂಪಾಯಿ ಕೂಡ ಪಾವತಿಯಾಗಿಲ್ಲ. ರಾಜ್ಯ ಸರ್ಕಾರ ಇಲ್ಲಸಲ್ಲದ ತಾಂತ್ರಿಕ ಕಾರಣಗಳನ್ನು ಹೇಳಿ ಪಾವತಿ ದಿನಾಂಕ ಮುಂದೂಡುತ್ತಲೇ ಇದ್ದು ಈ ಹಿನ್ನೆಲೆ ಸಿಡಿದೆದ್ದ ಗುತ್ತಿಗೆದಾರರ ಸಂಘದಿಂದ ಪತ್ರಿಕಾಗೋಷ್ಠಿ ನಡೆಸುತ್ತಿದೆ ಎನ್ನಲಾಗುತ್ತಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts