More

    20 ಸಾವಿರ ಕೋಟಿ ರೂ. ಬಿಲ್​ ಬಾಕಿ ಇರುವ ಹಿನ್ನೆಲೆ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಇಳಿದ ಗುತ್ತಿಗೆದಾರರು

    ಬೆಂಗಳೂರು: ಇತ್ತೀಚೆಗೆ ಸುದ್ದಿಗೋಷ್ಟಿ ನಡೆಸಿದ್ದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಇನ್ನೂ 20 ಸಾವಿರ ಕೋಟಿ ರೂ. ಬಿಲ್​ ಪಾವತಿ ಬಾಕಿ ಇರುವ ಹಿನ್ನೆಲೆಯಲ್ಲಿ ಇಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಚುನಾವಣೆ ಹತ್ತಿರ ಬರುತ್ತಿದ್ದಂತೆ ಇದೀಗ ಸರ್ಕಾರಕ್ಕೆ ಹೊಸ ಸಂಕಷ್ಟಗಳು ಸೃಷ್ಟಿಯಾಗುತ್ತಿದ್ದು ಇಂದು ಫ್ರೀಡಂ ಪಾರ್ಕ್​ನಲ್ಲಿ ಗುತ್ತಿಗೆದಾರರು ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ.

    ಇದನ್ನೂ ಓದಿ: ಇಂದು ಗುತ್ತಿಗೆದಾರರ ಸಭೆ; ಸರ್ಕಾರಕ್ಕೆ ಮತ್ತೊಂದು ತಲೆನೋವು ಎದುರಾಗಲಿದೆಯಾ?

    ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಗುತ್ತಿಗೆದಾರರು ಪ್ರತಿಭಟನೆ ನಡೆಸಲಿದ್ದು ಪ್ರತಿಭಟನೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಗುತ್ತಿಗೆದಾರರು ಭಾಗಿಯಾಗಿದ್ದಾರೆ. ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನೇತೃತ್ವದಲ್ಲಿ ನಡೆಯಲಿದ್ದು ಇಂದು ಸಾಂಕೇತಿಕವಾಗಿ ಒಂದು ದಿನ ಕಾಮಗಾರಿ ಬಂದ್ ಮಾಡಿದ್ದಾರೆ

    ಸರ್ಕಾರದಿಂದ ಸುಮಾರು 20 ಸಾವಿರ ಕೋಟಿ ಬಿಲ್ ಬಾಕಿ ಇರುವ ಹಿನ್ನೆಲೆಯಲ್ಲಿ ಈ ಪ್ರತಿಭಟನೆ ಕೈಗೊಳ್ಳಲಾಗುತ್ತಿದೆ. ಕಳೆದ ಬಾರಿಯ ಸರ್ಕಾರ ನೀಡಿದ್ದ ಭರವಸೆ ಇನ್ನೂ ಈಡೇರಿಲ್ಲ. ಬಿಲ್ ಪಾವತಿ ವಿಚಾರದಲ್ಲಿ ಸರ್ಕಾರ ಕೊಟ್ಟ ಮಾತಿನಂತೆ ನಡೆದಿಲ್ಲ. ಬಾಕಿ ಮೊತ್ತದಲ್ಲಿ ಒಂದು ರೂಪಾಯಿ ಕೂಡ ಪಾವತಿಯಾಗಿರದ ಕಾರಣ ಈಗ ಗುತ್ತಿಗೆದಾರರೂ ಸಿಡಿದೆದ್ದಿದ್ದಾರೆ. ಈ ಹಿಂದೆ ಭ್ರಷ್ಟಾಚಾರ ಆರೋಪ ಮಾಡಿದ ಗುತ್ತಿಗೆದಾರರ ಸಂಘದ ಅಧ್ಯಕ್ಷರನ್ನು ಜೈಲು ಸರ್ಕಾರ ಪಾಲು ಮಾಡಿತ್ತು.

    ಈ ಬಗ್ಗೆ ಆಕ್ರೋಷ ವ್ಯಕ್ತಪಡಿಸಿರುವ ಗುತ್ತಿಗೆದಾರರು,’ ಭ್ರಷ್ಟಾಚಾರ ಆರೋಪ ಮಾಡಿದ್ರೆ ಬಿಜೆಪಿಯವರು ಜೈಲಿಗೆ ಕಳುಹಿಸುತ್ತಾರೆ. ನ್ಯಾಯ ಕೇಳಿದ್ರೆ ಬಿಲ್ ಪಾವತಿ ತಡ ಮಾಡ್ತಾರೆ. ಇಲ್ಲ ಸಲ್ಲದ ತಾಂತ್ರಿಕ ಕಾರಣಗಳನ್ನು ಹೇಳಿ ಪಾವತಿ ದಿನಾಂಕ ಮುಂದೂಡುತ್ತಲೇ ಇದ್ದಾರೆ’ ಎನ್ನುತ್ತಿದ್ದಾರೆ.

    ಇದನ್ನೂ ಓದಿ: ಬ್ಲ್ಯಾಕ್​ಮೇಲ್ ತಂತ್ರ ನಡೆಯುವುದಿಲ್ಲ: ಗುತ್ತಿಗೆದಾರರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ

    ಈ ಹಿನ್ನೆಲೆಯಲ್ಲಿ ಸಿಡಿದೆದ್ದಿರುವ ಗುತ್ತಿಗೆದಾರರ ಸಂಘ ಸರ್ಕಾರ ಕ್ಕೆ ಡೆಡ್ ಲೈನ್ ನೀಡಲಿದ್ದಾರೆ. ಈ ತಿಂಗಳ ಅಂತ್ಯದೋಳಗೆ ಬಾಕಿ ಬಿಲ್ ಪಾವತಿ ಮಾಡಬೇಕು ಎಂದು ಆಗ್ರಹಿಸುತ್ತಿದ್ದು ಇಲ್ಲವಾದಲ್ಲಿ ರಾಜ್ಯದಲ್ಲಿ ನಡೆತ್ತಿರುವ ಎಲ್ಲಾ ಕಾಮಗಾರಿ ಗಳನ್ನು ಬಂದ್ ಮಾಡುವ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts