More

    ಯುವನಿಧಿ ಯೋಜನೆ ಯಶಸ್ವಿಗೆ ಸಹಕರಿಸಿ

    ಕೋಲಾರ: ಯುವನಿಧಿ ಯೋಜನೆಯ ಪ್ರಯೋಜನೆ ಪಡೆದುಕೊಳ್ಳಲು ಯುವಕ, ಯುವತಿಯರು ಮುಂದೆ ಬರಬೇಕು ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಹೇಳಿದರು.

    ಜಿಲ್ಲಾಡಳಿತ ಭವನದಲ್ಲಿ ಯುವನಿಧಿ ಯೋಜನೆಯ ಫಲಾನುಭವಿಗಳ ನೋಂದಣಿಗೆ ಕುರಿತು ಮಂಗಳವಾರ ಹಮ್ಮಿಕೊಂಡಿದ್ದ ವಿವಿಧ ಕಾಲೇಜುಗಳ ಪ್ರಾಂಶುಪಾಲರ ಸಭೆಯಲ್ಲಿ ಮಾತನಾಡಿ, ಯುವ ನಿಧಿ ಯೋಜನೆ ಸೌಲಭ್ಯ ಅರ್ಹರಿಗೆ ತಲುಪಿಸುವಂತಾಗಬೇಕು ಎಂದರು.
    ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಲಕ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗಳನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನ ಮಾಡಲಾಗಿದೆ. ಅಲ್ಲದೇ, ಯುವನಿಧಿ ಯೋಜನೆಯನೂ ಯಶಸ್ವಿಯಾಗಿ ಅನುಷ್ಠಾನಕ್ಕೆ ತರಬೇಕು ಎಂದರು.
    ಸರ್ಕಾರದ ನಿರೀಕ್ಷೆಗನುಗುಣವಾಗಿ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸಬೇಕಿದೆ. ಈ ಹಿನ್ನೆಲೆಯಲ್ಲಿ ಯುವನಿಧಿ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಕಾಲೇಜುಗಳ ಪ್ರಾಂಶುಪಾಲರ ಸಹಕಾರ ಅಗತ್ಯವಾಗಿದೆ ಎಂದರು.
    2022&-23ನೇ ಸಾಲಿನಲ್ಲಿ ಪದವಿ, ಡಿಪ್ಲೊಮಾ ಉತ್ತೀರ್ಣರಾದ ವಿದ್ಯಾರ್ಥಿಗಳು, ಕನಿಷ್ಠ 6 ತಿಂಗಳ ಅವಧಿಯವರೆಗೆ ಖಾಸಗಿ ಅಥವಾ ಸರ್ಕಾರಿ ಉದ್ಯೋಗ ಹೊಂದಿಲ್ಲದವರು, ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವವರು ಕರ್ನಾಟಕದಲ್ಲಿ ವಾಸವಿರುವವರು ಎಸ್​ಎಸ್​ಎಲ್​ಸಿ, ಪಿಯುಸಿ ಪದವಿ, ಡಿಪ್ಲೊಮಾ ಪ್ರಮಾಣ ಪತ್ರಗಳನ್ನು ಸಲ್ಲಿಸುವ ಮೂಲಕ ಸೇವಾಸಿಂಧು ಪೋರ್ಟಲ್​ನಲ್ಲಿ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.
    ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಶ್ರೀನಿವಾಸ್​, ಜಿಲ್ಲೆಯ ವಿವಿಧ ಪದವಿ ಹಾಗೂ ಡಿಪ್ಲೊಮಾ ಕಾಲೇಜುಗಳ ಪ್ರಾಂಶುಪಾಲರು ಮತ್ತಿತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts