ಕನ್ನಡ ಮಾಧ್ಯಮ ಶಾಲೆಗಳ ಉಳಿವಿಗೆ ಸಹಕರಿಸಿ

pdb-may31-1 yermal
Published on

ಪಡುಬಿದ್ರಿ: ಕನ್ನಡ ಮಾಧ್ಯಮ ಶಾಲೆಯ ಉಳಿವಿಗೆ ಹಳೇ ವಿದ್ಯಾರ್ಥಿಗಳು, ಪಾಲಕರು, ಗ್ರಾಮಸ್ಥರು, ಸಂಘ ಸಂಸ್ಥೆಗಳು ಸಹಕರಿಸಬೇಕು ಎಂದು ಹಳೇ ವಿದ್ಯಾರ್ಥಿ ಸಂಘ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಹೇಳಿದರು.

ಎರ್ಮಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಹೂ ನೀಡಿ ಸ್ವಾಗತಿಸಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ಬಲೂನ್, ಪುಸ್ತಕ ಹಾಗೂ ಸಿಹಿ ತಿಂಡಿಯನ್ನು ವಿತರಿಸಲಾಯಿತು. ಎಸ್‌ಡಿಎಂಸಿ ಸದಸ್ಯ ಬಾಬು , ಅಂಗನವಾಡಿ ಕಾರ್ಯಕರ್ತೆಯರು, ಹಳೇ ವಿದ್ಯಾರ್ಥಿಗಳು, ಪಾಲಕರು, ಶಾಲಾಭಿಮಾನಿಗಳು ಉಪಸ್ಥಿತರಿದ್ದರು. ಮುಖ್ಯಶಿಕ್ಷಕಿ ವಿನೋದಾ ಸ್ವಾಗತಿಸಿದರು. ಶಿಕ್ಷಕಿ ಚೈತ್ರಾ ವಂದಿಸಿದರು. ಮಲ್ಲಿಕಾ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net