ಸಿರವಾರ: ಕಲಿಕಾ ಹಬ್ಬವು ಮಕ್ಕಳಲ್ಲಿ ಸೃಜನಶೀಲತೆ ಬೆಳೆಸುತ್ತದೆ ಎಂದು ನವಲಕಲ್ ಬೃಹನ್ಮಠದ ಅಭಿನವ ಸೋಮನಾಥ ಶಿವಾಚಾರ್ಯರು ಹೇಳಿದರು.
ತಾಲೂಕಿನ ನವಲಕಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಕ್ಷೇತ್ರ ಸಮನ್ವಯ ಅಧಿಕಾರಿ ಕಚೇರಿ, ಮಾನ್ವಿ ಸಮೂಹ ಸಂಪನ್ಮೂಲ ಕೇಂದ್ರ ಹಮ್ಮಿಕೊಂಡಿದ್ದ ಸಿರವಾರ ಪೂರ್ವ ವಲಯದ ಕಲಿಕಾ ಹಬ್ಬ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಲಿಕಾ ಹಬ್ಬವು ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಕೊಳ್ಳಲು ಅವಕಾಶ ಕಲ್ಪಿಸುತ್ತದೆ. ಅಲ್ಲದೆ ಪ್ರತಿಭೆ ಅನಾವರಣಕ್ಕೆ ಅವಕಾಶ ಕಲ್ಪಿಸಿ ಕೊಡುತ್ತದೆ. ಇದರಿಂದ ಶಾಲೆಯಲ್ಲಿ ಸಂತಸದಾಯಕ ವಾತಾವರಣ ಸೃಷ್ಟಿಯಾಗುತ್ತದೆ . ಇದರಿಂದ ಶಿಕ್ಷಕರು ಸಂತೋಷದಿಂದ ಬೋಧನೆಯಲ್ಲಿ ತೊಡಗಿಕೊಳ್ಳಲು ಸಹಕಾರಿಯಾಗಿದೆ ಎಂದರು.
ನವಲಕಲ್ ಗ್ರಾಪಂ ಅಧ್ಯಕ್ಷೆ ದುರಗಮ್ಮ ದುರಗಪ್ಪ, ಎಸ್ಡಿಎಂಸಿ ಅಧ್ಯಕ್ಷ ಮಲ್ಲಪ್ಪ ದೊಡ್ಡಮನೆ, ಸರ್ಕಾರಿ ನೌಕರರ ಸಂಘದ ಮಾಜಿ ತಾಲೂಕು ಅಧ್ಯಕ್ಷ ಅಯ್ಯನಗೌಡ ಏರಡ್ಡಿ, ಪ್ರಮುಖರಾದ ತಿಮ್ಮಣ್ಣ ನಾಯಕ, ಚನ್ನವೀರಯ್ಯ ಸ್ವಾಮಿ, ಸಿಆರ್‌ಪಿ ಮಹೇಶ, ಮುಖ್ಯಶಿಕ್ಷಕ ಅಯ್ಯನಗೌಡ, ಮುಖ್ಯಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಮಲ್ಲಪ್ಪ , ಶಿಕ್ಷಕರಾದ ಬಸವರಾಜ್, ನಾಗರಾಜ, ಬಸವರಾಜ, ನರಸಮ್ಮ, ಶಾಂತಮ್ಮ, ನಿರ್ಮಲಾ, ಕಮಲಾ, ಆಫೀಜಾ ಇತರರಿದ್ದರು.