ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ

ಚನ್ನರಾಯಪಟ್ಟಣ: ಪಟ್ಟಣದ ಗುರುಭವನದ ಸಮೀಪದ ಮಖಾನ್ ಬಳಿ ಬುಧವಾರ ಮುಂಜಾನೆ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದು, ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ತಾಲೂಕಿನ ಶ್ರವಣಬೆಳಗೊಳ ಹೋಬಳಿಯ ಕಾಂತರಾಜಪುರ ಗ್ರಾಮದ ತರುಣ್ ಹಾಗೂ ಆತನ ತಂದೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಘಟನೆ ಬಳಿಕ ಸ್ಥಳೀಯರು ಇಬ್ಬರನ್ನೂ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ತರುಣ್ ತನ್ನ ತಂದೆಯನ್ನು ಕಾರಿನಲ್ಲಿ ಚನ್ನರಾಯಪಟ್ಟಣಕ್ಕೆ ಕರೆದೊಯ್ಯುತ್ತಿದ್ದ ಎನ್ನಲಾಗಿದೆ. ಈ ಸಂದರ್ಭ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಮಗುಚಿ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಚನ್ನರಾಯಪಟ್ಟಣ ಸಂಚಾರ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಕಾರನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿಲ್ಲ

Leave a Reply

Your email address will not be published. Required fields are marked *