Controversial:ಕರ್ನಲ್ ಸೋಫಿಯಾ ಖುರೇಷಿ ಅವರು ಬೆಳಗಾವಿಯ ಸೊಸೆ. ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಸಚಿವನ ವಿರುದ್ಧ ಎಫ್‌ಐಆರ್ ಮಾಡಿಕೊಂಡು, ಕ್ರಮ ತೆಗೆದುಕೊಳ್ಳುವ ಕುರಿತಂತೆ ಕೇಂದ್ರ ಸರ್ಕಾರಕ್ಕೆ ತಿಳಿಸುವಂತೆ ಬೆಳಗಾವಿ ಎಸ್‌ಪಿ ಅವರಿಗೆ ಸೂಚಿಸಿದ್ದೇನೆ. ಬಿಜೆಪಿ ಮುಖಂಡನ ಹೇಳಿಕೆ ಕರ್ನಲ್ ಖುರೇಷಿ ಅವರಿಗಷ್ಟೆ ಅವಮಾನದಂತೆ ಅಲ್ಲ. ಇಡೀ ದೇಶಕ್ಕೆ ಅವಮಾನ ಮಾಡಿದಂತೆ. ಇಂತಹ ಕೀಳು ಮನಸ್ಸು ಯಾರಿಗೂ ಬರಬಾರದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದರು.

ಇದನ್ನೂ ಓದಿ:ದಿಢೀರ್ ಕದನ ವಿರಾಮ ೋಷಣೆ ಪ್ರಶ್ನಾರ್ಹ: ಸಚಿವ ಸಂತೋಷ ಲಾಡ್ ಅಭಿಮತ | Youth must rise voice
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಇದೇ 20ರಂದು ನಡೆಯುವ ಸಮಾವೇಶ ದೊಡ್ಡ ಪ್ರಮಾಣದಲ್ಲಿ ಮಾಡುತ್ತಿದ್ದೇವೆ. ಮುಖ್ಯವಾಗಿ ಕಂದಾಯ ಇಲಾಖೆಯಿಂದ 50 ಸಾವಿರಕ್ಕು ಹೆಚ್ಚು ಜನರಿಗೆ ಹಕ್ಕುಪತ್ರಗಳನ್ನು ನೀಡಲಾಗುತ್ತಿದೆ. ಇದೊಂದು ಸರ್ಕಾರದ ಕಾರ್ಯಕ್ರಮ. ಲೋಕಸಭೆ ವಿರೋಧ ಪಕ್ಷ ನಾಯಕರಾದ ರಾಹುಲ್ ಗಾಂಧಿ, ರಾಜ್ಯಸಭಾ ವಿರೋಧ ಪಕ್ಷದ ನಾಯಕರು ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ, ಸುರ್ಜೇವಾಲಾ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ:ಕಾಂಗ್ರೆಸ್ ನಿಲುವಿನಲ್ಲೇ ದ್ವಂದ್ವ‘ಯುದ್ಧ’: ಆರ್.ಅಶೋಕ್ ವ್ಯಂಗ್ಯ | Divisive speech didn’t stop
ರಾಜ್ಯದ ಉಪ ಮುಖ್ಯಮಂತ್ರಿಗಳು, ಗ್ರೇಟರ್ ಬೆಂಗಳೂರು ಪರಿಕಲ್ಪನೆಯನ್ನು ತಂದ ಡಿ.ಕೆ.ಶಿವಕುಮಾರ್ ರವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಗ್ರೇಟರ್ ಬೆಂಗಳೂರು ಕಾನ್ಸೆಪ್ಟ್ ಯಶಸ್ವಿಯಾಗಲಿ. ಪ್ರಪಂಚದಲ್ಲಿ ಅನೇಕ ದೊಡ್ಡದೊಡ್ಡ ನಗರಗಳನ್ನು ನೋಡಿದ್ದೇವೆ. ಈ ಕಾನ್ಸೆಪ್ಟ್ ಯಾವ ರೀತಿ ಕೆಲಸ ಮಾಡಿದೆ ಎಂಬುದು ಗೊತ್ತಿದೆ. ಇಂದಿನಿಂದ ಪ್ರಾರಂಭವಾಗುತ್ತಿದ್ದು, ನ್ಯೂನತೆಗಳಿದ್ದರೆ ಸರಿಪಡಿಸಿಕೊಳ್ಳುತ್ತೇವೆ. ಗ್ರೇಟರ್ ಬೆಂಗಳೂರಿನಿಂದ ಯೋಜನೆಗಳನ್ನು ನೀಡಲು, ಸಮಸ್ಯೆಗಳ ಬಗ್ಗೆ ಹೆಚ್ಚು ಗಮನ ಹರಿಸಲು ಅನುಕೂಲವಾಗುತ್ತದೆ ಎಂಬುದು ಮುಖ್ಯ ಉದ್ದೇಶ ಎಂದು ಹೇಳಿದರು.