More

    ಜನರಲ್ಲಿ ಗೊಂದಲ ಸೃಷ್ಟಿಸಬಾರದು

    ಮಂಗಳೂರು: ಕೋವಿಡ್ ಎರಡನೇ ಅಲೆ ತಡೆಯಲು ನೈಟ್ ಕರ್ಫ್ಯೂ ಆದೇಶವನ್ನು ಸರ್ಕಾರ 48 ಗಂಟೆಗಳಲ್ಲಿ ಮೂರು ಬಾರಿ ಬದಲಾಯಿಸುವ ಮೂಲಕ ಜನರಲ್ಲಿ ಗೊಂದಲ ಸೃಷ್ಟಿಸಿತ್ತು. ಸರ್ಕಾರ ಕೈಗೊಳ್ಳುವ ನಿರ್ಧಾರ ವೈಜ್ಞಾನಿಕವಾಗಿರಬೇಕು, ರಾಜಕೀಯ ಪ್ರೇರಿತವಾಗಿರಬಾರದು ಎಂದು ಮಾಜಿ ಸಚಿವ, ಶಾಸಕ ಯು.ಟಿ. ಖಾದರ್ ಸಲಹೆ ನೀಡಿದ್ದಾರೆ.
    ಐಸಿಯುಗೆ ದಾಖಲಾದ ಕೋವಿಡ್ ರೋಗಿಗೆ ಮಾತ್ರವಲ್ಲ, ಎಲ್ಲ ಕೋವಿಡ್ ರೋಗಿಗಳಿಗೆ ಆಯುಷ್ಮಾನ್‌ನಡಿ ಚಿಕಿತ್ಸೆ ಸೌಲಭ್ಯ ಒದಗಿಸಬೇಕು. ಆಫ್‌ಲೈನ್, ಆನ್‌ಲೈನ್ ಗೊಂದಲದಿಂದ ವಿದ್ಯಾರ್ಥಿಗಳು ಹಾಗೂ ಕಾಲೇಜು ಆಡಳಿತ ಮಂಡಳಿ ಇಕ್ಕಟ್ಟಿನಲ್ಲಿದ್ದು, ಈ ಬಗ್ಗೆ ಸ್ಪಷ್ಟತೆ ನೀಡಬೇಕು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
    ಪ್ರತಿಭಟನೆ ಬೇಡ: ಎನ್‌ಆರ್‌ಸಿ ಜಾರಿ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನಲ್ಲಿ ‘ಇನ್ನು ಮುಂದೆ ಎನ್‌ಆರ್‌ಸಿ ವಿಷಯ ಇಲ್ಲ’ ಎಂದು ಹೇಳಿದ್ದಾರೆ. ಮತ್ತೆ ಪ್ರತಿಭಟನೆ ನಡೆಸಿ ಗೊಂದಲ ಸೃಷ್ಟಿಸುವುದು ಸರಿಯಲ್ಲ. ಪ್ರಧಾನಿ ಭರವಸೆಯಲ್ಲಿ ವಿಶ್ವಾಸವಿದೆ ಎಂದು ಹೇಳಿದರು.
    ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ಪ್ರಮುಖರಾದ ಸದಾಶಿವ ಉಳ್ಳಾಲ್, ಈಶ್ವರ ಉಳ್ಳಾಲ್, ಮುಸ್ತಫಾ, ಜಬ್ಬಾರ್, ಆಯ್ಯೂಬ್, ಉಸ್ಮಾನ್, ಗಿರೀಶ್ ಶೆಟ್ಟಿ ಸುದ್ದಿಗೋಷ್ಠಿಯಲ್ಲಿದ್ದರು.
    ಅಪರಾಧ ಪ್ರಕರಣ ಹೆಚ್ಚಳ: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ರೌಡಿಗಳ ಅಟ್ಟಹಾಸ, ಕೊಲೆ, ಹಲ್ಲೆ, ದರೋಡೆ ಪ್ರಕರಣಗಳು ನಡೆಯುತ್ತಿವೆ. ಪೊಲೀಸ್ ಇಲಾಖೆ ಚುರುಕಾಗಬೇಕು ಎಂದು ಖಾದರ್ ಒತ್ತಾಯಿಸಿದರು. ತನ್ನ ಕಾರನ್ನು ಹಿಂಬಾಲಿಸಿದ ಪ್ರಕರಣ ಕುರಿತು ಪ್ರತಿಕ್ರಿಯಿಸಿ, ನನ್ನ ಗಮನಕ್ಕೆ ಬರುವ ಮೊದಲೇ ಪೊಲೀಸರು ಆತನನ್ನು ಪತ್ತೆ ಹಚ್ಚಿದ್ದಾರೆ. ಆತನಲ್ಲಿ ದುರುದ್ದೇಶವಿದ್ದರೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳುತ್ತಿದ್ದರು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts