More

    ರಾಮನ ಹೆಸರಲ್ಲಿ ರಾಜಕೀಯ ಸಲ್ಲದು

    ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿಕೆ

    ಜಾತಿ ಹೆಸರಿನಲ್ಲಿ ರಾಜಕಾರಣ ಒಳ್ಳೆಯದಲ್ಲ

    ವಿಜಯವಾಣಿ ಸುದ್ದಿಜಾಲ ವಿಜಯಪುರ
    ರಾಮನ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ಬಿಟ್ಟು, ಅಭಿವೃದ್ಧಿ ಹೆಸರಿನಲ್ಲಿ ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಸಾಮಾಜಿಕ ನ್ಯಾಯ ದೊರಕಿಸುವತ್ತ ಗಮನಹರಿಸಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
    ಪಟ್ಟಣದ ಕೋಲಾರ ರಸ್ತೆಯ ಖಾಸಗಿ ಕನ್ವೆನ್ಷನ್ ಹಾಲ್‌ನಲ್ಲಿ ಐದು ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಜನರಿಗೆ ಮಾಹಿತಿ ನೀಡುವ ನಿಟ್ಟಿನಲ್ಲಿ ಕಾಂಗ್ರೆಸ್‌ನಿಂದ ಏರ್ಪಡಿಸಿದ್ದ ಸಮಾವೇಶದಲ್ಲಿ ಮಾತನಾಡಿದರು.
    ದೇಶದಲ್ಲಿ ಎಲ್ಲ ಜಾತಿ, ಧರ್ಮಗಳ ಜನರು ವಾಸ ಮಾಡುತ್ತಿದ್ದು, ಒಬ್ಬೊಬ್ಬರು ಒಂದೊಂದು ನಂಬಿಕೆ ಮೇಲೆ ಅವರವರ ದೇವರನ್ನು ಪೂಜಿಸುತ್ತಿದ್ದಾರೆ. ದೇಶವು ಜಾತ್ಯತೀತ ರಾಷ್ಟ್ರವಾಗಿದ್ದು, ಇಲ್ಲಿ ರಾಮನ ಹೆಸರಿನಲ್ಲಿ ರಾಜಕೀಯ ಮಾಡುವುದು ಸರಿಯಲ್ಲ, ಭರತ ಖಂಡದಲ್ಲಿ ಎಲ್ಲರೂ ವಾಸಿಸಲು ಯೋಗ್ಯರಾಗಿದ್ದು, ಕೋಮುಗಲಭೆ ಸೃಷ್ಟಿಸುವುದು, ಜಾತಿ ರಾಜಕಾರಣ ಮಾಡುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.
    ಈ ಹಿಂದೆ ಬಿಜೆಪಿ ನಾಯಕರು ನಮ್ಮ ಪಕ್ಷದ ಗ್ಯಾರಂಟಿಗಳನ್ನು ಜನರಿಗೆ ತಲುಪಿಸಲು ಹಣ ಇಲ್ಲವೆಂದು, ಈ ರೀತಿ ನಡೆದರೆ ಸರ್ಕಾರ ದಿವಾಳಿಯಾಗಿ ಆಡಳಿತ ನಡೆಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದರು. ಆದರೆ 8 ತಿಂಗಳಿನಿಂದಲೂ ಬಜೆಟ್‌ನಲ್ಲಿ 36,000 ಕೋಟಿ ರೂ. ಗ್ಯಾರಂಟಿ ಅನುಷ್ಠಾನಕ್ಕಾಗಿ ಮೀಸಲಿಟ್ಟಿದ್ದು, ಯಶಸ್ವಿಯಾಗಿ ಗ್ಯಾರಂಟಿಗಳನ್ನು ಜಾರಿಗೆ ತರುವುದರೊಂದಿಗೆ ಅಭಿವೃದ್ಧಿ ಕಾರ್ಯಕ್ಕೂ ಹಣ ನೀಡಲಾಗುತ್ತಿದೆ ಎಂದರು.
    ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಬಡವರಿಗೂ, ನಿವೇಶನ ರಹಿತರಿಗೆ ನಿವೇಶನ ಹಾಗೂ ಮನೆಗಳನ್ನು ನೀಡಲು ನಿರ್ಧರಿಸಿದ್ದು, ಈಗಾಗಲೇ ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಇದರ ಬಗ್ಗೆ ಮಾಹಿತಿ ಕಲೆ ಹಾಕಲು ತಿಳಿಸಲಾಗಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts