More

    ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಪಾಲಕರೊಂದಿಗೆ ಸಂವಾದ ಕಾರ್ಯಕ್ರಮ

    ಮೈಸೂರು: ಮೊಬೈಲ್ ಮತ್ತು ಅಂತರ್ಜಾಲ ಬಳಕೆಯಿಂದ ದೂರವಿದ್ದು, ಓದುವುದನ್ನು ಹವ್ಯಾಸವನ್ನಾಗಿ ರೂಢಿಸಿಕೊಳ್ಳಬೇಕು ಎಂದು ಡಿಸಿಪಿ(ಅಪರಾಧ ಮತ್ತು ಸಂಚಾರ) ಬಿ.ಟಿ.ಕವಿತಾ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

    ನಗರದ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ ಪಾಲಕರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಓದುವ ಹವ್ಯಾಸವನ್ನು ತಮ್ಮ ವಿದ್ಯಾರ್ಥಿ ದಿಸೆಯಿಂದಲೇ ಬೆಳೆಸಿಕೊಳ್ಳಬೇಕು. ಜತೆಗೆ ನಿತ್ಯ ಪತ್ರಿಕೆಗಳು, ನಿಯತಕಾಲಿಕೆ ಗಳು ಓದಬೇಕು. ಆ ಮೂಲಕ ಉನ್ನತ ಹುದ್ದೆಯನ್ನು ಅಲಂಕರಿಸಬೇಕು ಎಂದರು.

    ಇತ್ತೀಚಿನ ದಿನಗಳಲ್ಲಿ ಪೊಲೀಸ್ ಇಲಾಖೆಯಲ್ಲಿ ಮಹಿಳೆ ಯರು ಕೆಲಸ ನಿರ್ವಹಿತ್ತಿದ್ದಾರೆ. ಹೀಗಾಗಿ ಮಕ್ಕಳು ಯಾವುದರ ಬಗ್ಗೆ ಆಸಕ್ತಿ ಹೊಂದಿದ್ದಾರೆಂಬುದಕ್ಕೆ ಪೂರಕವಾಗಿ ಪಾಲಕರು ಗಮನಹರಿಸಿ ಅದನ್ನು ಪ್ರೋತ್ಸಾಹಿಸುವ ಕೆಲಸ ಮಾಡಬೇಕು ಎಂದು ಹೇಳಿದರು.

    ಕಾರಾಗೃಹ ಸಿಬ್ಬಂದಿ ತರಬೇತಿ ಕೇಂದ್ರದ ಪ್ರಾಂಶುಪಾಲ ಮಹೇಶ್‌ಕುಮಾರ್ ಎಸ್.ಜಿಗಣೆ ಮಾತನಾಡಿ, ಪಾಲಕರು ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಬೇಕು. ಅಲ್ಲದೆ ಮಕ್ಕಳು ಮೊಬೈಲ್ ಬಳಸದಂತೆ ಮನವರಿಕೆ ಮಾಡಬೇಕು ಎಂದು ಸಲಹೆ ನೀಡಿದರು.

    ಫೇಸ್‌ಬುಕ್, ವಾಟ್ಸ್‌ಆ್ಯಪ್, ಇನ್ಸ್‌ಸ್ಟ್ರಾಗ್ರಾಮ್, ಟ್ವೀಟರ್‌ಗಳನ್ನು ಒಳ್ಳೆಯ ಉದ್ದೇಶಕ್ಕೆ ಬಳಸಬೇಕು. ಮಾಹಿತಿಯನ್ನು ಮೊಬೈಲ್‌ನಲ್ಲಿ ಪಡೆದುಕೊಳ್ಳುವುದಕ್ಕಿಂತ ಗ್ರಂಥಾಲಯದಲ್ಲಿನ ಪುಸ್ತಕವನ್ನು ಓದಿ ಪಡೆಯಬೇಕು. ಧಾರವಾಹಿಗಳಿಗಿಂತ ಹೆಚ್ಚಾಗಿ ಸುದ್ದಿಗಳನ್ನು ನೋಡುವುದನ್ನು ಅಭ್ಯಾಸ ಮಾಡಿಕೊಳ್ಳಿ ಎಂದರು.ಪ್ರಾಂಶುಪಾಲ ಡಾ.ಬಿ.ಟಿ.ವಿಜಯ್, ಮನೋ ವಿಜ್ಞಾನ ವಿಭಾಗದ ಮುಖ್ಯಸ್ಥೆ ಪ್ರೊ.ಎಂ.ಎಸ್.ಮನೋನ್ಮಣಿ, ಐಕ್ಯೂ ಎಸ್‌ಸಿನ ಸಂಚಾಲಕ ಡಾ.ಪುಟ್ಟರಾಜು ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಸಿನಿಮಾ

    Latest Posts