More

    ಸುಪ್ರೀಂಕೋರ್ಟ್​ ಕ್ಯುರೇಟಿವ್​ ಅರ್ಜಿ ವಜಾಗೊಳಿಸಿದ ಬೆನ್ನಲ್ಲೇ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ ಅಪರಾಧಿ ಮುಕೇಶ್ ಸಿಂಗ್​

    ನವದೆಹಲಿ: ನಿರ್ಭಯಾ ಗ್ಯಾಂಗ್​ ರೇಪ್​ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಜನವರಿ 22ರಂದು ಬೆಳಗ್ಗೆ 7 ಗಂಟೆಗೆ ಗಲ್ಲು ಶಿಕ್ಷೆ ವಿಧಿಸಲು ದೆಹಲಿ ಪಟಿಯಾಲಾ ನ್ಯಾಯಾಲಯ ಆದೇಶ ನೀಡಿತ್ತು.

    ಅವರಲ್ಲಿ ವಿನಯ್​ ಶರ್ಮಾ(26) ಮತ್ತು ಮುಕೇಶ್​ ಕುಮಾರ್​ ಸಿಂಗ್​ (32) ಸುಪ್ರೀಂಕೋರ್ಟ್​ಗೆ ಕ್ಯುರೇಟಿವ್​ ಅರ್ಜಿಯನ್ನು ಸಲ್ಲಿಸಿದ್ದರು. ಆದರೆ ಸುಪ್ರೀಂಕೋರ್ಟ್ ಇಂದು ಬೆಳಗ್ಗೆ ಅರ್ಜಿಯನ್ನು ವಜಾಗೊಳಿಸಿತ್ತು.

    ಸುಪ್ರೀಂಕೋರ್ಟ್​ ಅರ್ಜಿ ವಜಾಗೊಳಿಸಿದ ಬೆನ್ನಲ್ಲೇ ಅಪರಾಧಿ ಮುಕೇಶ್ ಕುಮಾರ್ ಸಿಂಗ್​ ಅವರು ಕ್ಷಮಾದಾನ ಕೋರಿ ರಾಷ್ಟ್ರಪತಿ ರಾಮನಾಥ ಕೋವಿಂದ ಅವರಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದು ಅಪರಾಧಿಗಳಿಗೆ ಇರುವ ಕೊನೇ ಕಾನೂನು ಪ್ರಕ್ರಿಯೆಯಾಗಿದೆ. ಮುಕೇಶ್​ ಹೊರತು ಪಡಿಸಿ ಇನ್ಯಾವ ಅಪರಾಧಿಗಳು ಅರ್ಜಿ ಸಲ್ಲಿಸಿದ ಬಗ್ಗೆ ವರದಿಯಾಗಿಲ್ಲ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts