

ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರ ಎಳೆದು ತುಂಡರಿಸಿ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿ ಉಮೇಶ್ ಗೌಡಗೆ 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕ ಸುಬ್ಬಾಪುರ ಮಠ ದೋಷರೋಪಣಾ ಪಟ್ಟಿಯನ್ನು ನಾಯಾಲಯಕ್ಕೆ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಸಂದೇಶ್ ಅವರು ಆರೋಪಿ ಮೇಲಿನ ಆರೋಪ ಸಾಬೀತಾಗಿದ್ದರಿಂದ 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 5,000 ಸಾವಿರ ರೂ. ದಂಡ, ದಂಡ ಪಾವತಿಸಲು ತಪ್ಪಿದಲ್ಲಿ ಆರು ತಿಂಗಳ ಕಾರಾಗೃಹ ವಾಸ ಅನುಭವಿಸುವಂತೆ ತೀರ್ಪು ನೀಡಿದ್ದಾರೆ. ಸರ್ಕಾರದ ಪರ ಸಹಾಯಕ ಸಹಕಾರಿ ಅಭಿಯೋಜಕರಾಗಿ ಆಶಿತಾ ವಾದಿಸಿದ್ದರು.