ಕಾರವಾರ/Conviction: ಮನೆ ಕೆಲಸಕ್ಕೆ ಬರುವ ಮಂದ ಬುದ್ದಿಯ ಯುವತಿಯ ಮೇಲೆ ಅತ್ಯಾಚಾರ ಮಾಡಿದ ಅಪರಾಧಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 3 ಲಕ್ಷ ರೂ. ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.ಕುಮಟಾ ಹಳಕಾರ ಗ್ರಾಮದ ಮಹೇಶ ಮನೋಹರ ಕಿಣಿ ಶಿಕ್ಷೆಗೊಳಗಾದ ಅಪರಾಧಿ. 2016 ರಲ್ಲಿ ತನ್ನ ಮನೆ ಕೆಲಸಕ್ಕೆ ಬರುತ್ತಿದ್ದ ಯುವತಿಯ ಸಲುಗೆ ಸಾಧಿಸಿಕೊಂಡು, ಆಕೆಯ ಮೇಲೆ ಅತ್ಯಾಚಾರ ಮಾಡಿದ್ದ.
Conviction
ಯಾರಿಗೂ ಹೇಳದಂತೆ ಜೀವ ಬೆದರಿಕೆ ಹಾಕಿದ್ದ. ಆಕೆ ಗರ್ಭಿಣಿಯಾಗಿ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಯಲ್ಲಿ ಮಗುಗೆ ಆತನೇ ತಂದೆ ಎಂಬುದು ಸಾಬೀತಾಗಿತ್ತು.
ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಧೀಶ ಡಿ.ಎಸ್.ವಿಜಯಕುಮಾರ್ ತೀರ್ಪು ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ತನುಜಾ ಹೊಸಪಟ್ಟಣ ವಾದ ಮಂಡಿಸಿದ್ದರು.
ಇದನ್ನೂ ಓದಿ: https://www.vijayavani.net/dc-meeting-seafty-odit