More

    ‘ಪ್ರಜ್ವಲ್​ ರೇವಣ್ಣನನ್ನು ವಿದೇಶದಿಂದ ಕರೆತರಲು ಸಹಕರಿಸಿ’: ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

    ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪಾಸ್​ಪೋರ್ಟ್​ ರದ್ಧುಗೊಳಿಸಿ, ಅವರನ್ನು ಬಂಧಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಈ ಸಂಬಂಧ ಗೃಹ ಮತ್ತು ವಿದೇಶಾಂಗ ಇಲಾಖೆಗಳಿಗೆ ಸೂಚನೆ ನೀಡಬೇಕು ಎಂದು ಪ್ರಧಾನಿ ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

    ಇದನ್ನೂ ಓದಿ: ಸತ್ಯ ಆದಷ್ಟು ಬೇಗ ಹೊರಬರಲಿದೆ; ಅಶ್ಲೀಲ ವಿಡಿಯೋ ಕುರಿತು ಮೌನಮುರಿದ ಪ್ರಜ್ವಲ್​ ರೇವಣ್ಣ

    ಈ ಸಂಬಂಧ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ಮನವಿ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಂಸದ ಹಾಗೂ ಹಾಸನ ಲೋಕಸಭೆಯ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅಸಂಖ್ಯಾತ ಮಹಿಳೆಯರನ್ನು ಲೈಂಗಿಕ ಶೋಷಣೆ ಮಾಡಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ. ಇಂತಹ ಗಂಭೀರ ಪ್ರಕರಣ ತಮಗೆ ತಿಳಿದಿರಲೇಬೇಕು. ಅವರ ಮೇಲಿರುವ ಆರೋಪಗಳು ಭಯಾನಕ ಮತ್ತು ನಾಚಿಕೆಗೇಡಿನವು ಆಗಿದ್ದು, ಇದು ದೇಶದ ಆತ್ಮಸಾಕ್ಷಿಯನ್ನು ಅಲ್ಲಾಡಿಸಿದೆ ಎಂದಿದ್ದಾರೆ.

    ಇಂತಹ ಪ್ರಕರಣವನ್ನು ಕರ್ನಾಟಕ ಸರ್ಕಾರ ಗಂಭೀರವಾಗಿ ಪರಿಗಣಿಸಿ, ಕ್ರಮಕ್ಕಾಗಿ ಏ.28 ರಂದು ಕ್ರಿಮಿನಲ್ ಇನ್ವೆಸ್ಟಿಗೇಶನ್ ಡಿಪಾರ್ಟ್ಮೆಂಟ್ (ಸಿಐಡಿ) ಅಡಿಯಲ್ಲಿ ವಿಶೇಷ ತನಿಖಾ ತಂಡವನ್ನು (ಎಸ್​ಐಟಿ) ರಚಿಸಿದೆ. ಅಷ್ಟೇ ಅಲ್ಲ, ತ್ವರಿತಗತಿಯಲ್ಲಿ ತನಿಖೆ ಪ್ರಾರಂಭಿಸಿದೆ. ಪ್ರಕರಣದ ನಿಜ ಸ್ವರೂಪ ಬಯಲಾಗುತ್ತಿದ್ದಂತೆ ಸಂತ್ರಸ್ತೆಯರು ದೂರು ದಾಖಲಿಸಿದ್ದಾರೆ. ಆದರೆ ಸಂಸದ ಎಫ್‌ಐಆರ್ ದಾಖಲಾಗುವ ಸುಳಿವು ಪಡೆದು 27ರಂದು ರಾಜತಾಂತ್ರಿಕ ಪಾಸ್‌ಪೋರ್ಟ್‌ ಬಳಸಿ ವಿದೇಶಕ್ಕೆ ಹಾರಿ ತಪ್ಪಿಸಿಕೊಂಡಿದ್ದಾನೆ.

    ಆರೋಪ ಹೊತ್ತಿರುವ ಸಂಸದ ಎಸ್‌ಐಟಿ ತನಿಖೆಗೆ ಅತ್ಯಗತ್ಯವಾಗಿ ಬೇಕಿದೆ. ಆತ ದೇಶದ ಕಾನೂನಿನ ಪ್ರಕಾರ ತನಿಖೆ ಮತ್ತು ವಿಚಾರಣೆ ಎದುರಿಸಬೇಕಿದೆ. ಈ ನಿಟ್ಟಿನಲ್ಲಿ ರಾಜತಾಂತ್ರಿಕ ಮತ್ತು ಪೊಲೀಸ್ ಜಾಲಗಳನ್ನು ಬಳಸಿಕೊಂಡು ಸ್ವದೇಶಕ್ಕೆ ಕರೆತರಬೇಕಿದೆ. ಇದಕ್ಕೆ ವಿದೇಶಾಂಗ ವ್ಯವಹಾರ ಮತ್ತು ಗೃಹ ಸಚಿವಾಲಯಕ್ಕೆ ಸಲಹೆ ನೀಡಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

    ಇನ್ನು ಇದಕ್ಕೆ ಸಂಬಂಧಿಸಿದಂತೆ ಅಂತರರಾಷ್ಟ್ರೀಯ ಪೊಲೀಸ್ ಏಜೆನ್ಸಿಗಳಿಗೆ ಎಸ್​ಐಟಿ ಅಗತ್ಯ ವಿವರಗಳನ್ನು ಒದಗಿಸುತ್ತದೆ. ಹೀಗಾಗಿ ತಾವು ಕ್ರಮ ತೆಗೆದುಕೊಳ್ಳಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

    ರಾಮನಗರ ಶಾಸಕನ ವಿಡಿಯೋ ವೈರಲ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts