More

    ಸಾರ್ವಜನಿಕರ ಸಹಕಾರ ಮುಖ್ಯ

    ದೇವದುರ್ಗ: ಸ್ವಚ್ಛತೆ ಇದ್ದಲ್ಲಿ ಉತ್ತಮ ಆರೋಗ್ಯ ಸಾಧ್ಯ ಎಂಬುದನ್ನು ಪ್ರತಿಯೊಬ್ಬರೂ ನೆನಪಿನಲ್ಲಿಟ್ಟಿಕೊಳ್ಳಬೇಕು. ಮನೆ, ಬಡಾವಣೆ, ಊರು ಸ್ವಚ್ಛವಾಗಿದ್ದರೆ ರೋಗಗಳಿಂದ ದೂರವಿರಬಹುದು ಎಂದು ಪುರಸಭೆ ಮುಖ್ಯಾಧಿಕಾರಿ ಕೆ.ಹಂಪಯ್ಯ ಹೇಳಿದರು.

    ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಪುರಸಭೆಯಿಂದ ಆಯೋಜಿಸಿದ್ದ ರಾಷ್ಟ್ರೀಯ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಬುಧವಾರ ಮಾತನಾಡಿದರು. ಸ್ವಚ್ಛತೆ ದೃಷ್ಟಿಯಿಂದ ಸರ್ಕಾರ ಸ್ವಚ್ಛ ಭಾರತ ಅಭಿಯಾನ ಕೈಗೊಂಡಿದ್ದು, ಪ್ರತಿಯೊಬ್ಬರ ಮನೆಗೂ ವೈಯಕ್ತಿಕ ಶೌಚಗೃಹ ನಿರ್ಮಿಸಿಕೊಳ್ಳಲು ಸಹಾಯಧನ ನೀಡುತ್ತಿದೆ. ಸ್ವಚ್ಛತೆ ಕಾಪಾಡುವುದು ಸರ್ಕಾರ, ಅಧಿಕಾರಿಗಳು, ಜನಪ್ರತಿನಿಧಿಗಳ ಕೆಲಸ ಮಾತ್ರವಲ್ಲ. ಇದಕ್ಕೆ ಸಾರ್ವಜನಿಕರೂ ಕೈಜೋಡಿಸುವ ಮೂಲಕ ಸಹಕಾರ ನೀಡಬೇಕಿದೆ ಎಂದರು.

    ವಾರ್ಡ್ ಹಾಗೂ ನಗರದ ಸ್ವಚ್ಛತೆಗಾಗಿ ಪ್ರತಿಯೊಬ್ಬರೂ ಪುರಸಭೆಗೆ ಸಹಕಾರ ನೀಡಬೇಕು. ಎಲ್ಲೆಂದರಲ್ಲಿ ಕಸ ಎಸೆಯದೆ ಪುರಸಭೆಯ ತ್ಯಾಜ್ಯ ವಿಲೇವಾರಿ ವಾಹನಗಳಿಗೆ ನೀಡಬೇಕು. ಸ್ವಚ್ಛತೆಯಿಂದ ಸೊಳ್ಳೆ ಹಾಗೂ ಇತರ ರೋಗಾಣುಗಳನ್ನು ನಿಯಂತ್ರಣ ಮಾಡಬಹುದು ಎಂದು ಹೇಳಿದರು.

    ಪುರಸಭೆ ವ್ಯವಸ್ಥಾಪಕ ಗಂಗಾಧರ್, ಸದಸ್ಯ ನಾಗರಾಜ ಗೋಗಿ, ಪ್ರಮುಖರಾದ ಲಕ್ಷ್ಮಣ ಕೊಪ್ಪರ, ಇಸಾಕ್, ರಂಗಪ್ಪ, ಬಸವರಾಜ, ಲಕ್ಷ್ಮಣ ಕಟ್ಟಿ, ಶೃತಿ, ಅಂಬಿಕಾ, ಕಸಾಪ ತಾಲೂಕು ಅಧ್ಯಕ್ಷ ಎಚ್.ಶಿವರಾಜ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts