More

    ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಹಕಾರ

    ನಾಗಮಂಗಲ : ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಬರುವಂತಹ ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸುವ ಜತೆಗೆ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ 10 ಸಾವಿರ ರೂ. ವಿದ್ಯಾರ್ಥಿವೇತನ ನೀಡಲಾಗುವುದು ಎಂದು ನೆಲಮಂಗಲ-ದೇವಿಹಳ್ಳಿ ಎಕ್ಸ್‌ಪ್ರೆಸ್‌ವೇ ಪ್ರೈ.ಲಿ. ಯೋಜನಾ ಮುಖ್ಯಸ್ಥ ಕೃಷ್ಣರಾವ್ ಹೇಳಿದರು.
    ತಾಲೂಕಿನ ನೆಲ್ಲಿಗೆರೆ ಟೋಲ್ ಸಮೀಪದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ನೆಲಮಂಗಲ ದೇವಿಹಳ್ಳಿ ಎಕ್ಸ್‌ಪ್ರೆಸ್‌ವೇ ಪ್ರೈ.ಲಿ. ಹಾಗೂ ಕ್ಯೂಬ್‌ರೂಟ್ಸ್ ಫೌಂಡೇಷನ್ ವತಿಯಿಂದ ಇತ್ತೀಚೆಗೆ ಆಯೋಜಿಸಿದ್ದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
    ನೆಲಮಂಗಲದಿಂದ ದೇವಿಹಳ್ಳಿಯವರೆಗೆ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಬರುವಂತಹ ಸರ್ಕಾರಿ ಶಾಲೆಗಳ ಅಭಿವೃದ್ಧ್ದಿಗೆ ನಮ್ಮ ಸಂಸ್ಥೆ ಕಟಿಬದ್ಧವಾಗಿ ಶ್ರಮಿಸುತ್ತಿದೆ. ಸರ್ಕಾರಿ ಶಾಲೆಗಳಿಗೆ ಅಗತ್ಯವಿರುವ ಕಾಂಪೌಂಡ್, ಶುದ್ಧ ಕುಡಿಯುವ ನೀರಿನ ಘಟಕಗಳು, ಶೌಚಗೃಹ, ಲ್ಯಾಬ್, ಕಂಪ್ಯೂಟರ್‌ಗಳ ಪೂರೈಕೆ ಸೇರಿದಂತೆ ತರ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಯಾವುದೇ ಶಾಲೆಗೆ ಮೂಲ ಸೌಲಭ್ಯಗಳ ಅಗತ್ಯವಿದ್ದರೆ ಸಂಸ್ಥೆ ಪೂರೈಸಲು ಸಿದ್ಧವಿದೆ ಎಂದು ತಿಳಿಸಿದರು.
    ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಹೆದ್ದಾರಿಯ ಪಕ್ಕದಲ್ಲಿ ಬರುವಂತಹ ಶಾಲೆಗಳ ವಿದ್ಯಾರ್ಥಿಗಳಿಗೆ ತಲಾ 10 ಸಾವಿರ ರೂ.ಗಳಂತೆ ಮೂರು ವರ್ಷಗಳಿಂದ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಈ ಬಾರಿ 18 ವಿದ್ಯಾರ್ಥಿಗಳಿಗೆ ತಲಾ 10 ಸಾವಿರ ರೂ. ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಎಂದರು.

    ಸೋಲೂರು, ಬೊಮ್ಮನಹಳ್ಳಿ, ಹಟ್ನ, ಯಡಿಯೂರು, ತಾವರೆಕೆರೆ ಸೇರಿದಂತೆ ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ಕಾರಿ ಶಾಲೆಯ 18 ವಿದ್ಯಾರ್ಥಿಗಳಿಗೆ ತಲಾ 10 ಸಾವಿರ ರೂ. ಚೆಕ್ ಹಾಗೂ ಪ್ರಶಂಸನಾ ಪತ್ರ ವಿತರಿಸಲಾಯಿತು. ನೆಲಮಂಗಲ ದೇವಿಹಳ್ಳಿ ಎಕ್ಸ್‌ಪ್ರೆಸ್‌ವೇ ಪ್ರೈ.ಲಿ. ಯೋಜನಾ ನಿರ್ದೇಶಕ ಪ್ರವೀಣ್, ಸಿಬ್ಬಂದಿ ಹರೀಶ್‌ಬಾಬು, ಅಶೋಕ್, ನೇತಾಜಿ, ಆನಂದ್ ಮತ್ತಿತರಿದ್ದರು.

    22 ಎನ್‌ಎಂಜಿ 01: ನಾಗಮಂಗಲ ತಾಲೂಕಿನ ನೆಲ್ಲಿಗೆರೆ ಟೋಲ್ ಸಮೀಪ ನೆಲಮಂಗಲ-ದೇವಿಹಳ್ಳಿ ಎಕ್ಸ್‌ಪ್ರೆಸ್‌ವೇ ಪ್ರೈ.ಲಿ. ಹಾಗೂ ಕ್ಯೂಬ್‌ರೂಟ್ಸ್ ಪೌಂಡೇಶನ್ ವತಿಯಿಂದ ಸರ್ಕಾರಿ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನದ ಚೆಕ್ಕನ್ನು ಕೃಷ್ಣರಾವ್ ವಿತರಿಸಿದರು. ಪ್ರವೀಣ್, ಅಶೋಕ್, ನೇತಾಜಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts