ಬೈಂದೂರು: ಸರ್ಕಾರಿ ಶಾಲೆ ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ದಾನಿಗಳು ಹಾಗೂ ಸಮಾಜದ ಸಹಕಾರ ಅತಿ ಮುಖ್ಯ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು. ಚಿತ್ತೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಎಂ.ಕೃಷ್ಣಮೂರ್ತಿ ಮಂಜರ ಸಾರಥ್ಯದ ಎಂ.ಎಸ್.ಮಂಜ ಚಾರಿಟೆಬಲ್ ಟ್ರಸ್ಟ್ ವತಿಯಿಂದ ನಿರ್ಮಾಣಗೊಂಡ ವಿವೇಕ ಕೊಠಡಿ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಸಮವಸ್ತ್ರ ಪಠ್ಯ ಪರಿಕರ ವಿತರಿಸಿ ಮಾತನಾಡಿದರು.
ನಿವೃತ್ತ ಶಿಕ್ಷಕ ಗಣಪತಿ ಕಿಣಿ ಅವರನ್ನು ಸನ್ಮಾನಿಸಲಾಯಿತು. ಟ್ರಸ್ಟ್ ಪ್ರವರ್ತಕ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು, ಕೊಲ್ಲೂರು ದೇವಳ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಾದ ಡಾ.ಅತುಲ್‌ಕುಮಾರ್ ಶೆಟ್ಟಿ, ವಂಡಬಳ್ಳಿ ಜಯರಾಮ ಶೆಟ್ಟಿ, ತಾಲೂಕು ಶೈಕ್ಷಣಿಕ ಪರಿವೀಕ್ಷಕ ಚಂದ್ರಶೇಖರ ಶೆಟ್ಟಿ, ಪತ್ರಕರ್ತ ಪ್ರಭಾಕರ ಆಚಾರ್ಯ ಚಿತ್ತೂರು, ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು, ಹಳೇ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸರ್ಕಾರಿ ಶಾಲೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸಮೃದ್ಧ ಬೈಂದೂರು ಪರಿಕಲ್ಪನೆಯಡಿ 300 ಟ್ರೀಸ್ ಕಾರ್ಯಕ್ರಮ ರೂಪಿಸಿಕೊಂಡಿದ್ದೇವೆ. ದಾನಿಗಳ ಮೂಲಕ ಸರ್ಕಾರಿ ಶಾಲೆ ವ್ಯವಸ್ಥೆ, ಮೂಲಸೌಕರ್ಯ ಸುಧಾರಿಸುವ ಕಾರ್ಯವೂ ನಡೆಯುತ್ತಿದೆ. ಅನೇಕ ಸಂಘ ಸಂಸ್ಥೆ ನಮ್ಮ ಈ ಅಭಿಯಾನಕ್ಕೆ ಕೈ ಜೋಡಿಸಿವೆ. ಎಂ.ಕೃಷ್ಣಮೂರ್ತಿ ಮಂಜರ ಸಾರಥ್ಯದ ಎಂ.ಎಸ್.ಮಂಜ ಚಾರಿಟೆಬಲ್ ಟ್ರಸ್ಟ್ ಮಾಡಿರುವ ಕಾರ್ಯವೂ ಶ್ಲಾಘನೀಯ.
-ಗುರುರಾಜ್ ಗಂಟಿಹೊಳೆ ಶಾಸಕ